spot_img
spot_img

ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Must Read

spot_img

ಸಿಂದಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇವರ ವತಿಯಿಂದ ಪ್ರಸಕ್ತ ವರ್ಷದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲೂಕ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿರುವ ಅವರು, ರಾಜ್ಯ ಸಂಘದ ವತಿಯಿಂದ ರಾಜ್ಯ, ಜಿಲ್ಲೆ ಮತ್ತು ತಾಲೂಕ ಮಟ್ಟದಲ್ಲಿ ಶೇ.90% ಅಂಕ ಪಡೆದ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಗೌರವಿಸಲಿದ್ದಾರೆ ಕಾರಣ ದೃಢೀಕರಣ ಇಲ್ಲದೆ ಆನ್ ಲೈನ್ ಮೂಲಕ ಸಲ್ಲಿಸಲ್ಪಡುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಆನ್‍ಲೈನ್ ಅರ್ಜಿಯನ್ನು ಈ ಕೆಳಕಂಡ ವೆಬ್‍ಸೈಟ್ https://bit.ly/ksgeaprathibapuraskara2022 ಸಂಪರ್ಕಿಸಿಬೇಕು. ಅರ್ಜಿ ಸಲ್ಲಿಸಲು ಜುಲೈ 15 ರ ವರೆಗೆ ಮಾತ್ರ ಅವಕಾಶವಿದೆ. ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮಕ್ಕಳ ತಂದೆ, ತಾಯಿ ಕಡ್ಡಾಯವಾಗಿ ಸರ್ಕಾರಿ ನೌಕರರಾಗಿರಬೇಕು ಹಾಗೂ ಸದರಿ ಅರ್ಜಿ ಜೊತೆಗೆ ಸೇವಾ ದೃಢೀಕರಣ ಪ್ರಮಾಣ ಪತ್ರದಲ್ಲಿ ತಾಲೂಕಾ ನೌಕರರ ಸಂಘದ ಅಧ್ಯಕ್ಷರ ಸಹಿ ಇರಬೇಕು ಎಂದು ತಿಳಿಸಿದ್ದಾರೆ.

- Advertisement -
- Advertisement -

Latest News

ಸಾಹಿತ್ಯ ಕ್ಷೇತ್ರದಲ್ಲಿ ರಶ್ಮಿಯಾಗಿ ಹೊಳೆದ ವಿ.ಕೃ.ಗೋಕಾಕ್!

ಬೇರೆಯವರ ಮೇಲೆ ಅವಲಂಬಿತವಾದ ಬದುಕು, ಸಾಧನೆ “ಮರವನ್ನು ಆಶ್ರಯಿಸಿ ಬೆಳೆದ ಬಳ್ಳಿಯಂತೆ” ಆಶ್ರಯ ತಪ್ಪಿದಾಗ ಅದು ನೆಲಕಚ್ಚುವುದು ಎಂದವರು ವಿನಾಯಕ ಕೃಷ್ಣ ಗೋಕಾಕ್ (ವಿ.ಕೃ.ಗೋಕಾಕ್). ಕನ್ನಡಕ್ಕೆ...
- Advertisement -

More Articles Like This

- Advertisement -
close
error: Content is protected !!