spot_img
spot_img

ಅಲೆಮಾರಿ ಜನಾಂಗದವರಿಂದ ವಸತಿಗಾಗಿ ಅರ್ಜಿ ಆಹ್ವಾನ

Must Read

- Advertisement -

ಗೋಕಾಕ: ಬೆಳಗಾವಿ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಹೊಸದಾಗಿ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಲಕ್ಷ್ಮಣ ಬಬಲಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ನಿಗದಿತ ಅರ್ಜಿ ನಮೂನೆಯು ಆಯಾ ತಾಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಲಭ್ಯವಿದ್ದು ಅವುಗಳನ್ನು ಪಡೆದು ಅರ್ಜಿಗಳನ್ನು ಭರ್ತಿ ಮಾಡಿ, ಅರ್ಜಿಯೊಂದಿಗೆ ಆಧಾರ ಗುರುತಿನ ಚೀಟಿ, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಫಲಾಪೇಕ್ಷಿಗಳ ಬ್ಯಾಂಕ್ ಖಾತೆ ಪುಸ್ತಕ, ಚುನಾವಣಾ ಗುರುತಿನ ಚೀಟಿ, ನಿವೇಶನದ ಖಾತಾ ಸಂಖ್ಯೆಯ ಪ್ರತಿ.

ದಿ. 29ರ ಒಳಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಳಗಾವಿ ಅಥವಾ ಸಂಬಂಧಿಸಿದ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕೆಂದು ಲಕ್ಷ್ಮಣ ಬಬಲಿ ಅವರು ತಿಳಿಸಿದ್ದಾರೆ.

- Advertisement -
- Advertisement -

Latest News

ಉಂಡು ಮಲಗಿದ ಮೇಲೂ ಗಂಡ ಹೆಂಡಿರ ಜಗಳ

ಸಂಸಾರದ ಬಂಡಿ ಸರಾಗವಾಗಿ ಸಾಗಬೇಕಾದರೆ ಗಂಡ ಹೆಂಡತಿ ಎನ್ನುವ ಎರಡು ಗಾಲಿಗಳು ಸಮಸಮವಾಗಿ ಚಲಿಸಬೇಕು. ಎರಡೂ ಗಾಲಿಗಳಿಗೆ ಪ್ರಾಧಾನ್ಯತೆಯಿದೆ. ಒಂದು ಹೆಚ್ಚು ಒಂದು ಕಡಿಮೆ ಇಲ್ಲ....
- Advertisement -

More Articles Like This

- Advertisement -
close
error: Content is protected !!
Join WhatsApp Group