Homeಸುದ್ದಿಗಳುವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮೂಡಲಗಿ:-ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತ ವ್ಯಾಪ್ತಿಯ ವಸತಿ ರಹಿತ ನಿವೇಶನ ರಹಿತ (ಕಚ್ಚಾ ಮನೆ ಹೊಂದಿದ) ಕುಟುಂಗಳಿಗೆ ವಸತಿ ಸೌಲಭ್ಯ ಪಡೆಯಲು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ೨.೦ ಯೋಜನೆಯ ಅಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಚಿದಾನಂದ ಮುಗಳಖೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಸತಿ ರಹಿತ ಕಚ್ಚಾ ಮನೆ ಹೊಂದಿರುವ ಮತ್ತು ನಿವೇಶನ ರಹಿತ ಫಲಾನುಭವಿಗಳು ವಸತಿ ಸೌಲಭ್ಯ ಪಡೆಯಲು ಕೇಂದ್ರ ಸರ್ಕಾರ ವೆಬ್‌ಸೈಟ್ unified web portal (https/play urban.gov.in) ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಜುಲೈ,೧೫ಕ್ಕೆ ಕೊನೆಯ ದಿನಾಂಕ. ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ದಾಖಲೆಗಳೊಂದಿಗೆ ಪಟ್ಟಣ ಪಂಚಾಯತಿ ಕಾರ್ಯಾಲಯಕ್ಕೆ ನೀಡಬೇಕು.ಹೆಚ್ಚಿನ ಮಾಹಿತಿಗಾಗಿ ವಸತಿ ಇಲಾಖೆಯವರನ್ನು ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿಯಾದ ಚಿದಾನಂದ ಮುಗಳಖೋಡ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

error: Content is protected !!
Join WhatsApp Group