ಮೂಡಲಗಿ : ಕೇಂದ್ರ ಪುರಸ್ಕೃತ ಅಮೃತ 2.0 ಅಭಿಯಾನದ ” ಅಮೃತ್ ಮಿತ್ರ ಕಾರ್ಯಕ್ರಮದ ತಾಂತ್ರಿಕೇತರ ಚಟುವಟಿಕೆ (Non-Technical) ಕಾರ್ಯಕ್ರಮದಡಿ ಮೂಡಲಗಿ ಪುರಸಭೆ ವ್ಯಾಪ್ತಿಯಲ್ಲಿನ ಸಾರ್ವಜನಿಕ ಉದ್ಯಾನವನ ಮತ್ತು ಆಟದ ಮೈದಾನಗಳ ನಿರ್ವಹಣೆ ಮಾಡಲು ಡೇ-ನಲ್ಡ್ ಅಭಿಯಾನದಡಿ ಆಸಕ್ತಿ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿಂದ ಆಸಕ್ತಿ ವ್ಯಕ್ತಪಡಿಸುವಿಕೆ ಆಹ್ವಾನಿಸಲಾಗಿದೆ.
ಅಮೃತ್ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದ್ದು ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯ ಮುಖ್ಯ ಉದ್ದೇಶ ನಗರ ಪ್ರದೇಶಗಳಿಗೆ ಸುಸ್ಥಿರ ಮತ್ತು ಶುದ್ಧ ನೀರು ಪೂರೈಕೆ ಮತ್ತು ನಿರ್ವಹಣೆ ಮಾಡುವುದು ಹಾಗೂ ಅಮೃತ ನಗರಗಳಲ್ಲಿ ಶೇ 100 ರಷ್ಟು ಒಳಚರಂಡಿ ನಿರ್ವಹಣೆಯನ್ನು ಖಚಿತಪಡಿಸುವುದಾಗಿರುತ್ತದೆ.
ಕೇಂದ್ರ ಸರ್ಕಾರವು ಅಮೃತ್ ಯೋಜನೆಯಡಿ ” ಅಮೃತ್ ಮಿತ್ರ” ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದು ಸದು ಕಾರ್ಯಕ್ರಮದ ಮುಖ್ಯ ಉದ್ದೇಶ ಅಮೃತ್-20 ಅಭಿಯಾನದಡಿಯ ವಿವಿಧ ತಾಂತ್ರಿಕ ಮತ್ತು ತಾಂತ್ರಿಕೇತರ ಚಟುವಟಿಕೆಗಳನ್ನು ಕೇಂದ್ರ ಪುರಸ್ಕೃತ ಯೋಜನೆಯಾದ ಡೇ-ನಲ್ ಅಭಿಯಾನದಡಿ ಮೂಡಲಗಿ ಪುರಸಭೆ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಮಹಿಳಾ ಸ್ವ ಸಹಾಯ ಸಂಘಗಳ ಮೂಲಕ ಸದರಿ ಚಟುವಟಿಕೆಗಳನ್ನು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸಲು ಆಸಕ್ತಿ ಇರುವ ಮಹಿಳಾ ಸ್ವ-ಸಹಾಯ ಸಂಘಗಳಿಂದ ಭಾಗವಹಿಸಬಹುದಾಗಿರುತ್ತದೆ.
ಆದ್ದರಿಂದ ಆಸಕ್ತ ಮಹಿಳಾ ಸ್ವ-ಸಹಾಯ ಸಂಘಗಳು ಈ ಕಾರ್ಯಾಲಯದಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು ದಿನಾಂಕ 04-02-2026 ದೊಳಗಾಗಿ ಅರ್ಹ ಮತ್ತು ಆಸಕ್ತ ಮಹಿಳಾ ಸ್ವ ಸಹಾಯ ಸಂಘಗಳು ತಮ್ಮ ಪ್ರಸ್ತಾವಣೆಯನ್ನು ಮುಚ್ಚಿದ ಲಕೋಟಿಯಲ್ಲಿ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

