spot_img
spot_img

ಪ್ರಚೋದನೆ ಭಾಷಣ ಮಾಡಿದ PFI-SDPI ಮುಖಂಡರ ಬಂಧನ

Must Read

ಬೀದರ – ಬೀದರ ಜಿಲ್ಲೆ ಹುಮನಾಬಾದ್ ಪಟ್ಟಣದಲ್ಲಿ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆ ಮುಖಂಡರ ಮನೆ ಮೇಲೆ ಮಂಗಳವಾರ ಬೆಳಗಿನ ಜಾವ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಮ್ ಹಾಗೂ ಎಸ್ಡಿಪಿಐ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶೇಖ್ ಮಕ್ಸೂದ್ ರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.ಮಂಗಳವಾರ ಬೆಳಗಿನ ಜಾವ ಸುಮಾರು 3 ಗಂಟೆಗೆ ಎರಡು ತಂಡ ರಚಿಸಿಕೊಂಡ ಅಧಿಕಾರಿಗಳು ಏಕಕಾಲಕ್ಕೆ ಮನೆಗಳ ಮೇಲೆ ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿ ನಂತರ ತಹಸೀಲ್ದಾರ್ ಎದುರಿಗೆ ಹಾಜರುಪಡಿಸಿ ಜೈಲಿಗೆ ಅಟ್ಟಿದ್ದಾರೆ.

ಈ ಮಧ್ಯೆ ಎನ್ಐಎ ತನಿಖಾ ತಂಡ ದೇಶದ ವಿವಿಧೆಡೆ ಪಿಎಫ್ಐ ಮತ್ತು ಎಸ್ಡಿಪಿಐ ಮುಖಂಡರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಸೆ.23 ರಂದು ಹುಮನಾಬಾದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಹಾಗೂ ಘೋಷಣೆ ಕೂಗಿದ ಹಿನ್ನಲೆಯಲ್ಲಿ ಸಂಘಟನೆಗಳ ಮುಖಂಡರ ಬಂಧನ ನಡೆದಿದೆ ಎನ್ನಲಾಗುತ್ತಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರ ಮಾರ್ಗದರ್ಶನದಲ್ಲಿ ಎಸಿಪಿ ಶಿವಾಂಶು ರಾಜಪೂತ್, ಸಿಪಿಐ ಶರಣಬಸಪ್ಪ ಕೋಡ್ಲಾ, ಪಿಎಸ್ಐ ಮಂಜನಗೌಡಾ ಪಾಟೀಲ ಹಾಗೂ ಸಿಬ್ಬಂದಿಗಳ ಇದ್ದರು. ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಎರೆಡು ಡಿಆರ್ ತಂಡ ನಿಯೋಜನೆ ಮಾಡಲಾಗಿದೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!