spot_img
spot_img

ಯೋಧ ಸುಬೇದಾರ ತಾಯ್ನಾಡಿಗೆ ಆಗಮನ

Must Read

spot_img
- Advertisement -

ಮೂಡಲಗಿ: ತಾಲೂಕಿನ ಖಾನಟ್ಟಿ ಗ್ರಾಮದ ವೀರಯೋಧ ಸುಬೇದಾರ ಮಾರುತಿ ಶಿವಲಿಂಗಪ್ಪ ಉದ್ದನ್ನವರ ಸುಧೀರ್ಘ 30 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿದ್ದಾರೆ. ಯಶಸ್ವಿ ಸೇವೆ ಸಲ್ಲಿಸಿರುವ ಪ್ರಯುಕ್ತ ಗ್ರಾಮಸ್ಥರಿಂದ ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಸ. 3 ಶುಕ್ರವಾರದಂದು ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯವನ್ನು ಜೋಡಕುರಳಿಯ ಚಿದ್ಘನಾನಂದ ಸ್ವಾಮಿಗಳು, ಉದ್ಘಾಟಕರಾಗಿ ಕೆಎಮ್‍ಎಫ್ ಅಧ್ಯಕ್ಷರು ಹಾಗೂ ಅರಭಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷೆ ಮಾಯವ್ವ ಲಂಗೋಟಿ ವಹಿಸುವರು. ಮುಖ್ಯ ಅತಿಥಿಗಳಾಗಿ ಬೆಳಗಾವಿ ಜಿಪಂ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ತಹಶೀಲ್ದಾರ ಡಿ.ಜಿ ಮಹಾತ, ಬಿಇಒ ಅಜೀತ ಮನ್ನಿಕೇರಿ, ಮಾಜಿ ರಾಜ್ಯಾಧ್ಯಕ್ಷರ ಕರ್ನಾಟಕ ಪ್ರದೇಶ ಕುರುಬರ ಸಂಘದ ಡಾ. ರಾಜೇಂದ್ರ ಸಣ್ಣಕ್ಕಿ, ತಾಲೂಕಾಧ್ಯಕ್ಷ ಡಾ.ಎಸ್.ಎಸ್ ಪಾಟೀಲ, ಪುರಸಭೆ ಸದಸ್ಯ ಸಂತೋಷ ಸೋನವಾಲಕರ, ಭೂ ನ್ಯಾಯ ಮಂಡಳಿ ಸದಸಿ ಭೀಮಶಿ ಮಗದುಮ, ಮೂಡಲಗಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಹಾಗೂ ಅತಿಥಿಗಳು ಗ್ರಾಮಸ್ಥರು ದೇಶ ಪ್ರೇಮಿಗಳು ಆಗಮಿಸುತ್ತಾರೆ.

- Advertisement -
- Advertisement -

Latest News

ಕವನ : ದ್ರೌಪದಿಯ ಸ್ವಗತ

ದ್ರೌಪದಿಯ ಸ್ವಗತ ನಾನು ಅರಸುಮನೆತನದ ಹೆಣ್ಣು, ಅರ್ಧಜಗದ ಮಣೆ ಹಿಡಿದ ಹೆಣ್ಣು. ಆದರೂ ನನ್ನ ಬದುಕು ಒಂದು ಕತ್ತಲು ಗವಿಯಂತೆ, ನೂರು ಚೂಪಿನ ಕತ್ತಿಗಳ ಮಧ್ಯೆ ಹೆಜ್ಜೆ ಹಾಕಿದಂತಿತ್ತು. ನಾನು ಕದನದ ಕಿಡಿಯಾದೆ ಅವಮಾನಗಳ ನೆರಳಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group