ಕಿತ್ತೂರು- ತಾಲ್ಲೂಕಿನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ 2024-25ನೇ ಸಾಲಿನಲ್ಲಿ ಉಚಿತ ವೈದ್ಯಕೀಯ ಮೌಲ್ಯಾಂಕನ ಶಿಬಿರದಲ್ಲಿ ಆಯ್ಕೆಯಾದ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸಾಧನ–ಸಲಕರಣೆಗಳ ವಿತರಣೆ ನೆರವೇರಿತು.
ಕಾರ್ಯಕ್ರಮವನ್ನು ಶಾಸಕರಾದ ಬಾಬಾಸಾಹೇಬ ಪಾಟೀಲ ರವರು ಉದ್ಘಾಟಿಸಿ ಮಾತನಾಡಿ, ವಿಶೇಷ ಚೇತನ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸರ್ಕಾರ ಸದಾ ಬದ್ಧವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಕಂಗೊಳಿಸಲು ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ವಾಯ್. ತುಬಾಕದ, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಮತಿ ಗಾಯತ್ರಿ ಅಜ್ಜನ್ನವರ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಪ್ರಕಾಶ್ ಮೆಳವಂಕಿ ಉಪಸ್ಥಿತರಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಗತ್ಯವಾದ ಸಾಧನ–ಸಲಕರಣೆಗಳನ್ನು ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಇಲಾಖೆಯ ಸಿ.ಆರ್.ಪಿ ಗಳು, ಬಿ.ಆರ್.ಪಿ ಗಳು, ಬಿ.ಐ.ಇ.ಆರ್.ಟಿ ಗಳು, ಶಿಕ್ಷಣ ಸಂಯೋಜಕರು ಹಾಗೂ ವಿಶೇಷ ಚೇತನ ವಿದ್ಯಾರ್ಥಿಗಳ ಪಾಲಕರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಡಿ.ಹೆಚ್. ಪಾಟೀಲ, ಬಿ.ಐ.ಇ.ಆರ್.ಟಿ ನಿರೂಪಿಸಿ, ಅಂತಿಮವಾಗಿ ವಂದಿಸಿದರು.

