spot_img
spot_img

ಅರುಂಧತಿ ನಾಗ್ ಅವರ ಹುಟ್ಟುಹಬ್ಬ

Must Read

- Advertisement -

ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದೆ. ಪ್ರಸಿದ್ಧ ನಟ ಹಾಗೂ ನಿರ್ದೇಶಕ ಶಂಕರ್ ನಾಗ್ ಅವರ ಪತ್ನಿ. ಇವರ ಆರಂಭದ ಜೀವನ ಮುಂಬಯಿಯಲ್ಲಿ ಕಳೆಯಿತು. ಅಲ್ಲಿರುವಾಗ ಮುಂಬಯಿನ ಹವ್ಯಾಸಿ ರಂಗಭೂಮಿಯ ಸಕ್ರಿಯ ವ್ಯಕ್ತಿಯಾಗಿದ್ದರು.

ಮರಾಠಿ, ಗುಜರಾತಿ, ಹಿಂದಿ, ಇಂಗ್ಲಿಷ್ ಮೊದಲಾದ ಭಾಷೆಗಳಲ್ಲೂ ಅಭಿನಯಿಸಿದ್ದಾರೆ. ಇವರು ಕೆಲವೊಮ್ಮೆ ತಿಂಗಳಲ್ಲಿ 42 ಪ್ರದರ್ಶನಗಳನ್ನು ಕೊಟ್ಟದ್ದೂ ಇದೆ. ಈ ದಿನಗಳಲ್ಲೇ ಸಹ ರಂಗನಟ ಶಂಕರನಾಗ್ ಅವರ ಪರಿಚಯವಾಯಿತು.

ಪರಿಚಯ ಪ್ರೇಮವಾಗಿ ವಿವಾಹವಾದರು. ಅನಂತರ ಇಬ್ಬರೂ ಬೆಂಗಳೂರಿನಲ್ಲಿ ನೆಲೆಸಿ ರಂಗಭೂಮಿ ಹಾಗೂ ಚಲನಚಿತ್ರ – ಈ ಎರಡೂ ಕ್ಷೇತ್ರಗಳಲ್ಲಿ ಇಬ್ಬರೂ ಕೆಲಸ ಮಾಡತೊಡಗಿದರು. ಈ ಎಲ್ಲ ಸಂದರ್ಭಗಳಲ್ಲಿ ಪತಿ ಶಂಕರನಾಗ್‍ಗೆ ನೆರವಾದರು. ಕೆಲವು ಸಂದರ್ಭಗಳಲ್ಲಿ ಶಂಕರನಾಗ್ ಅವರಿಗೆ ಸಹಾಯಕ ನಿರ್ದೇಶಕರಾಗಿಯೂ ಕೆಲಸ ಮಾಡಿದರು. ಶಂಕರ ನಾಗ್ ಹಿಂದಿಯ ಕಿರುತೆರೆಗಾಗಿ ಸಿದ್ಧಪಡಿಸಿದ ಆರ್.ಕೆ.ನಾರಾಯಣ್ ಅವರ ‘ಮಾಲ್ಗುಡಿ ಡೇಸ್’ ಇವರಿಬ್ಬರಿಗೂ ಅಪಾರ ಖ್ಯಾತಿಯನ್ನು ತಂದುಕೊಟ್ಟಿತು.

- Advertisement -

ಅರುಂಧತಿಯವರು ಅನೇಕ ನಾಟಕ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. “ನೋಡಿ ಸ್ವಾಮಿ ನಾವಿರೋದು ಹೀಗೆ” ಎಂಬ ನಾಟಕ ಇವರ ಅಭಿನಯದ ಅತ್ಯಂತ ಜನ ಪ್ರಿಯ ನಾಟಕ. ಇದು ಚಲನಚಿತ್ರವಾಗಿಯೂ ಅಪಾರ ಯಶಸ್ವಿಯಾಯಿತು. ಆಕ್ಸಿಡೆಂಟ್, ಗೋಲಿಬಾರ್, ಪರಮೇಶಿಯ ಪ್ರೇಮ ಪ್ರಸಂಗ ಇವರ ಅಭಿನಯದ ಇತರ ಚಿತ್ರಗಳು. ಮಣಿರತ್ನಂ ಅವರ ದಿಲ್‍ಸೆ ಎಂಬ ಹಿಂದಿ ಚಿತ್ರದಲ್ಲಿಒಂದು ಚಿಕ್ಕ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಅನಂತರ ‘ಪಾ’ ಎಂಬ ಹಿಂದಿ ಚಿತ್ರದಲ್ಲಿ ಅಭಿನಯಿಸಿ ಅಪಾರ ಮನ್ನಣೆಗಳಿಸಿದರು. ಶಂಕರನಾಗ್ ನಿರ್ದೇಶನದ ‘ಒಂದು ಮುತ್ತಿನಕಥೆ’ ಚಿತ್ರಕ್ಕೆ ವಸ್ತ್ರ ವಿನ್ಯಾಸಕಿಯಾಗಿ ದುಡಿದಿದ್ದಾರೆ. ಕಾರು ಅಪಘಾತವೊಂದರಲ್ಲಿ ಶಂಕರನಾಗ್ ನಿಧನರಾದಾಗ ಅದೇ ಕಾರಿನಲ್ಲಿದ್ದ ಅರುಂಧತಿ ಪ್ರಾಣಾಪಾಯದಿಂದ ಪಾರಾದರು.

ಪತಿಯನ್ನು ಕಳದುಕೊಂಡು ಕೆಲಕಾಲ ಎಲ್ಲ ಚಟುವಟಿಕೆಗಳಿಂದ ದೂರವಿದ್ದ ಇವರು ಅನಂತರ ಶಂಕರನಾಗ್ ಅವರ ಕನಸಿನ ಕಲ್ಪನೆಯ ‘ರಂಗಶಂಕರ’ ಎಂಬ ಸಮಗ್ರ ನಾಟಕ ಚಟುವಟಿಕೆಯ ಕೇಂದ್ರವೊಂದರ ನಿರ್ಮಾಣದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡರು.

- Advertisement -

ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದ ಈ ರಂಗಭೂಮಿ ಸಂಕೀರ್ಣ ಯೋಜನೆ ಈಗ ಪೂರ್ಣಗೊಂಡಿದ್ದು ಕಾರ್ಯ ಚಟುವಟಿಕೆಯನ್ನು ಆರಂಭಿಸಿದೆ (2004). ಸಂಕೇತ್ ಟ್ರಸ್ಟ್ ‘ರಂಗಶಂಕರ’ದ ಚಟುವಟಿಕೆಗಳನ್ನು ನೋಡಿಕೊಳ್ಳುತ್ತದೆ.

ರಂಗಶಂಕರ – ಕನ್ನಡ ರಂಗಭೂಮಿಗೆ ಶಂಕರನಾಗ್ ಕಂಡ ಕನಸು. ನಾಟಕರಂಗದಲ್ಲಿಯೇ ಪ್ರಾರಂಭದಿಂದ ಒಡನಾಟ ಬೆಳೆಸಿಕೊಂಡಿದ್ದ ಶಂಕರನಾಗ್ ದಂಪತಿಗಳು ರಂಗಭೂಮಿಯ ಕಲಾವಿದರಿಗೆ ನೆರವಾಗುವಂತೆ, ನಾಟಕಗಳ ಪ್ರದರ್ಶನ ಸುಗಮವಾಗಿರುವಂತೆ ನಾಟಕಮಂದಿರವೊಂದನ್ನು ನಿರ್ಮಿಸಬೇಕೆಂದಿದ್ದರು. ಆ ಯೋಜನೆಯು ಕಾರ್ಯರೂಪಕ್ಕೆ ಬರುವ ಮುಂಚೆಯೇ ಶಂಕರನಾಗ್ ದುರ್ಮರಣಕ್ಕೀಡಾದರು. ಅವರ ಪತ್ನಿ ಅರುಂಧತಿನಾಗ್ ಆ ಯೋಜನೆಯನ್ನು ಮುಂದುವರೆಸಿ, ಕಾರ್ಯರೂಪಕ್ಕೆ ತಂದಿದ್ದಾರೆ. ರಂಗಶಂಕರ, ಬೆಂಗಳೂರಿನ ಜೆ.ಪಿ.ನಗರದಲ್ಲಿ ಕಾರ್ಯನಿರ್ವಹಿಸುತ್ತಿದೆ.


ಹೇಮಂತ ಚಿನ್ನು

ಕರ್ನಾಟಕ ಶಿಕ್ಷಕರ ಬಳಗ

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group