ನಾಡಿನ ಸೇವಕನಾಗಿ ಜನತೆಯ ಆರ್ಶೀವಾದದ ಋಣ ತೀರಿಸುವೆ- ಸಂಸದ ಈರಣ್ಣ ಕಡಾಡಿ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಮೂಡಲಗಿ: ಸತತ ಮೂರು ದಶಕಗಳ ಕಾಲ ಸಾರ್ವಜನಿಕ ಹೋರಾಟಗಳನ್ನು ಗಮನಿಸಿ ಪಕ್ಷದ ಹಿರಿಯರು ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ ಮೇಲೆ ಈ ಸದಾವಕಾಶವನ್ನು ಉಪಯೋಗಿಸಿಕೊಂಡು ನಾಡಿನ ಸೇವೆ ಮಾಡುವ ಮೂಲಕ ಜನರ ಋಣ ತಿರಿಸುವ ಕೆಲಸ ಮಾಡುವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಮಂಗಳವಾರದಂದು 2021-22ನೇ ಸಾಲಿನ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅನಿಯಮಿತ ವಿದ್ಯುತ್ ಪೂರೈಕೆಗಾಗಿ ನೂತನ ಜನರೇಟರ್ ಒದಗಿಸಿ ಅದರ ಕಾರ್ಯಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಈರಣ್ಣ ಕಡಾಡಿ ಅವರು ರಾಜ್ಯಸಭಾ ಸಂಸದರ ಪ್ರದೇಶಾಭಿವೃದ್ಧಿ ಅನುದಾನದ ಪ್ರಥಮ ಬಳಕೆಗೆ ನನ್ನ ಕರ್ಮ ಭೂಮಿಯಿಂದಲೇ ಚಾಲನೆ ನೀಡುತ್ತಿರುವುದು ನನ್ನ ಸೌಭಾಗ್ಯ ಎಂದರು.

ಅನೀರಿಕ್ಷಿತವಾಗಿ ಎದುರಾದ ಕೋವಿಡ್-19 ಪರಿಣಾಮದಿಂದ ನಿರ್ಮಿತವಾದ ಈ ಪರಿಸ್ಥಿತಿಯನ್ನು 3ನೇ ಅಲೆ ಬಂದಾಗಲು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ತಾಲೂಕಾಡಳಿತ ಸಂಪೂರ್ಣವಾಗಿ ಸಜ್ಜಾಗಿರಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

- Advertisement -

ಆ ನಿಟ್ಟಿನಲ್ಲಿ ಸಂಸದರ ಪ್ರದೇಶಾಭಿವೃದ್ಧಿ ಅನುದಾನವನ್ನು ವೈದ್ಯಕೀಯ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲು ಪ್ರಾಧಾನ್ಯತೆ ನೀಡಲಾಗಿದೆ. ವೈದ್ಯರು ಹಾಗೂ ಅಧಿಕಾರಿಗಳ ನಿಸ್ವಾರ್ಥ ಸೇವೆಯನ್ನು ಈ ಸಮಯದಲ್ಲಿ ಸ್ಮರಿಸಿದರು.

ಮೂಡಲಗಿ ತಹಶೀಲ್ದಾರ ಡಿ. ಜಿ. ಮಹಾತ, ತಾಲೂಕಾ ವೈದ್ಯಾಧಿಕಾರಿ ಡಾ. ಮುತ್ತೇಪ್ಪ ಕೊಪ್ಪದ, ಸಿಪಿಐ ವೆಂಕಟೇಶ ಮುರನಾಳ, ಪಿಎಸ್.ಆಯ್ ಹಾಲಪ್ಪ ಬಾಲದಂಡಿ, ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ಬಿಜೆಪಿ ಪ್ರಮುಖರಾದ ಪ್ರಕಾಶ ಮಾದರ, ರಾಯಪ್ಪ ಬಾನಸಿ, ಅರಭಾಂವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಕುಮಾರ ಗಿರಡ್ಡಿ, ಹಣಮಂತ ಸತರಡ್ಡಿ, ಸಿದ್ದಲಿಂಗಪ್ಪ ಯರಗಟ್ಟಿ, ಶಿವಾನಂದ ತುಪ್ಪದ, ಮಹಾಲಿಂಗಯ್ಯ ಹಿರೇಮಠ, ಯಮನಪ್ಪ ಮೇತ್ರಿ, ಜಗದೀಶ ತೇಲಿ, ಪಾಂಡು ಮಹೇಂದ್ರಕರ, ನಾಗರಾಜ ಹುದಲಿ, ಕುಮಾರ ಗಿರಡ್ಡಿ ಸೇರಿದಂತೆ ಅನೇಕ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!