spot_img
spot_img

ದೂರು ಕೊಡಲು ಹೋದ ಯುವಕನ ಮೇಲೆ ಹಲ್ಲೆ; ಸಿಪಿಐ ಅಮಾನತು

Must Read

- Advertisement -

ಸೇಡಂ – ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಲ್ ಇನ್ಸ್ಪೆಕ್ಟರ್ ಅಮಾನತ್ತು ಆಗಬೇಕು ಎಂದು ಹಟ ಹಿಡಿದ ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಸೇಡಂ ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ.

ಮುಧೋಳ ಸಿಪಿಐ ಆನಂದರಾವ್ ಅವರನ್ನು ಅಮಾನತು ಮಾಡಲಾಗಿದೆ.

ಯುವಕ ರಾಘವೇಂದ್ರ ರವಿ ಅನಂತಯ್ಯ ಎಂಬಾತನ ಮೇಲೆ ಗ್ರಾಮದ ಸಂದಪ್ಪ ಹಾಗೂ ಸಹಚರರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜರುಗಿತ್ತು. ಗಾಯಗೊಂಡ ಯುವಕ ನೀಡಿದ್ದ ದೂರನ್ನು ಮುಧೋಳ ಸಿಪಿಐ ಆನಂದರಾವ್ ಪಡೆಯದೇ ಆತನ ಮೇಲೆ ಹಲ್ಲೆ ನಡೆದಿರುವುದಾಗಿ ಕಾಂಗ್ರೆಸ್ ದೂರಿತ್ತು. ಅಷ್ಟೇ ಅಲ್ಲ, ಸಿಪಿಐ ತಲೆದಂಡಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟಿಸಿತ್ತು.

- Advertisement -

ಪ್ರತಿಭಟನೆಗೆ ಮಣಿದ ಅಧಿಕಾರಿಗಳು ಸಿಪಿಐ ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಆದೇಶಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದ್ದಾರೆ.

ಶುಕ್ರವಾರ ಸಂಜೆಯೊಳಗೆ ಆರೋಪಿತರನ್ನು ಬಂಧಿಸಬೇಕು ಮತ್ತು ಸಿಪಿಐ ಅಮಾನತಿಗೆ ಆಗ್ರಹಿಸಿ, ಶರಣ ಪ್ರಕಾಶ ಪಾಟೀಲ್​​ ಮುಧೋಳ ಠಾಣೆಯಲ್ಲಿ ಮೌಖಿಕ ದೂರು ನೀಡಿದ್ದರು.

- Advertisement -

ಶನಿವಾರ ಮಧ್ಯಾಹ್ನದವರೆಗೆ ಗೃಹ ಮಂತ್ರಿಗಳು ಮತ್ತು ಎಸ್​ಪಿ ಕರ್ತವ್ಯಲೋಪ ಎಸಗಿದ ಅಧಿಕಾರಿಯನ್ನು ಅಮಾನತು ಮಾಡುವ ಭರವಸೆ ನೀಡಿದ್ದರು.

ಅದಕ್ಕಾಗಿ ತಾವು ಧರಣಿ ಹಿಂಪಡೆದಿರುವುದಾಗಿ ಅವರು ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧಿಸಿದಂತೆ ಮುಧೋಳದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಜಮಾಯಿಸಿ ಪೊಲೀಸ್ ಠಾಣೆ ಎದುರು ಧರಣಿಗೆ ಮುಂದಾಗಿದ್ದರು.

ಬಿಜೆಪಿಯಿಂದ ರಸ್ತೆ ತಡೆ:

ಮುಧೋಳ ‌ಸಿಪಿಐ ಆನಂದರಾವ್ ಅಮಾನತು ಖಂಡಿಸಿ ಇದಕ್ಕೆ ಕಾರಣರಾದ ಎಸ್​​ಪಿ ಮತ್ತು ಡಿಎಸ್​ಪಿ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ರಾಜಕುಮಾರ ಪಾಟೀಲ‌ ತೇಲ್ಕೂರ್ ನೇತೃತ್ವದಲ್ಲಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಡಿವೈಎಸ್​ಪಿ ಬಸವೇಶ್ವರ, ಶಾಸಕರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಟೈರ್​​ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರಂತರ ಎರಡು ಗಂಟೆಗಳಿಂದ ರಾಜ್ಯ ಹೆದ್ದಾರಿ ಬಂದ್ ಮಾಡಲಾಗಿತ್ತು. ಈ ವೇಳೆ ಅಧಿಕಾರಿಗಳ ಮೇಲೆ ಡಾ. ಶರಣಪ್ರಕಾಶ ಪಾಟೀಲ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದೇ ವೇಳೆ ಡಿವೈಎಸ್​ಪಿ ಬಸವೇಶ್ವರ ಮತ್ತು ಶಾಸಕರು ಹಾಗೂ ಕಾರ್ಯಕರ್ತರ ನಡುವೆ ಕೆಲ ಹೊತ್ತು ಮಾತಿನ ಚಕಮಕಿ ನಡೆದಿದೆ.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ

- Advertisement -
- Advertisement -

Latest News

‘Silent killer’ ಎಂದು ಕರೆಯಲ್ಪಡುವ ಒಂದು ಹಾವುಂಟು !

ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group