ಮೂಡಲಗಿ – ಮೂಲಭೂತ ಬೇಡಿಕೆಗಳ ಈಡೇರಿಕೆಗಾಗಿ ಇದೇ ದಿ. ೧೦ ರಿಂದ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘ ಮೂಡಲಗಿ ಘಟಕದಿಂದ ಬೆಂಬಲ ವ್ಯಕ್ತವಾಗಿದೆ.
ಮೂಡಲಗಿ ತಾಲೂಕಾ ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆದಿರುವ ಮುಷ್ಕರ ನಿರತ ಅಧಿಕಾರಿಗಳನ್ನು ಭೇಟಿಯಾದ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಶಿವಪ್ಪ ಮಾಲಗಾರ, ಅಧ್ಯಕ್ಷ ಚರಂತಯ್ಯ ಮಳ್ಳಿಮಠ, ಉಪಾಧ್ಯಕ್ಷ ಅರ್ಜುನ ಕೋಲೂರ ಅಧಿಕಾರಿಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕ್ಯಾಪ್ಟನ್ ಪ್ರಕಾಶ ತವನಪ್ಪ ಉಂದ್ರಿ, ಕ್ಯಾಪ್ಟನ್ ಮಹಾವೀರ ಉಂದ್ರಿ, ಈರಪ್ಪ ಚಿಪ್ಪಲಕಟ್ಟಿ, ಗೋಪಾಲ ನಾಯಿಕ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಹಾಜರಿದ್ದರು
ಇ ಪೌತಿ ಖಾತಾ ಆಂದೋಲನ ಕೈ ಬಿಡುವುದು, ಅಂತರ್ ಜಿಲ್ಲಾ ವರ್ಗಾವಣೆ ಯ ಕೆಸಿಎಸ್ಆರ್ ನಿಯಮ ೧೬ ಎ ಯ ಉಪಖಂಡ ೨ ನ್ನು ಮರು ಸ್ಥಾಪಿಸುವುದು, ಸೇವಾ ವಿಷಯಗಳಿಗೆ ಸೌಲಭ್ಯಗಳನ್ನು ಕಲ್ಪಿಸುವುದು, ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವುದು, ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸುವುದು ಸೇರಿದಂತೆ ಸುಮಾರು ೨೩ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸಿದ್ದಾರೆ.