ಸಿಂದಗಿ: ಮಂಡ್ಯದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥ ನಾರಾಯಣ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾಷೆಯ ಬಳಕೆ ಮಾಡುವ ಮೊದಲು ವಿವೇಕ, ತಾಳ್ಮೆ ಇರಬೇಕು. ಮಾಜಿ ಸಿದ್ದರಾಮಯ್ಯ ಅವರು ಬಡವರ, ಹಿಂದುಳಿದವರ ಪರ ಇರುವ ಸಮಾಜವಾದಿ ವ್ಯಕ್ತಿಯಾಗಿದ್ದು ಅವರ ವಿರುದ್ದ ಬಹಿರಂಗ ಹೇಳಿಕೆ ನೀಡಿ ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡುತ್ತಿರುವ ಹಿಂದೆ ಕೋಮುವಾದಿ ಮನಸ್ಥಿತಿ ಅಡಗಿದೆ. ಸಚಿವ ಅಶ್ವತ್ಥ ನಾರಾಯಣ ಅವರು ಜವಾಬ್ದಾರಿ ಸ್ಥಾನದಲ್ಲಿದ್ದಾರೆ ಸುಖಾ ಸುಮ್ಮನೆ ಒಬ್ಬ ನಾಯಕನ ವಿರುದ್ದ ಅಪಸ್ವರ ಎತ್ತುತ್ತಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಅವರ ಅಭಿಮಾನಿಗಳಿಗೆ ನೋವುಂಟಾಗಿದೆ ಕೂಡಲೇ ಸಚಿವರು ಬಹಿರಂಗ ಕ್ಷಮೆ ಕೇಳಬೇಕು ಮತ್ತು ಶಾಸಕ ಈಶ್ವರ ಖಂಡ್ರೆ ಅವರಿಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಿಮ್ಮನ್ನು ಹೊರ ಹಾಕಬೇಕಾಗುತ್ತದೆ ಎಂದು ಹೇಳುತ್ತಿರುವುದು ಖಂಡನೀಯ ಕಾಗೇರಿ ಅವರು ಸಭಾಧ್ಯಕ್ಷ ಸ್ಥಾನದಲ್ಲಿದ್ದುಕೊಂಡು ಈ ರೀತಿಯಾಗಿ ವರ್ತಿಸುತ್ತಿರುವುದು ನ್ಯಾಯ ಪೀಠಕ್ಕೆ ಅಗೌರವ. ಕಾಗೇರಿ ಅವರು ಎಲ್ಲರನ್ನು ಸಮಾನ ದೃಷ್ಠಿಯಿಂದ ಕಾಣಬೇಕೆ ಹೊರತು ಈ ರೀತಿಯಾಗಿ ಲಘುವಾಗಿ ಮಾತನಾಡಬಾರದು ಎಂದು ಆಗ್ರಹಿಸಿದ್ದಾರೆ.