spot_img
spot_img

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮನವಿಯ ಮೇರೆಗೆ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಿದ ಜಿಲ್ಲಾ ಸಚಿವ ಗೋವಿಂದ ಕಾರಜೋಳ

Must Read

- Advertisement -

ಬುಧವಾರದಿಂದ ರವಿವಾರವರೆಗೆ ಎರಡೂ ಕಾಲುವೆಗಳಿಗೆ 2 ಟಿಎಂಸಿ ನೀರು ಬಿಡುಗಡೆ

ಗೋಕಾಕ: ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನಾಳೆಯಿಂದ 5 ದಿನಗಳವರೆಗೆ ತಲಾ 1 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಮಂಗಳವಾರ ಸಂಜೆ ಈ ಬಗ್ಗೆ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ನಾಳೆಯಿಂದ ಸಾರ್ವಜನಿಕರು ಮತ್ತು ಜಾನುವಾರುಗಳಿಗಾಗಿ ಕುಡಿಯಲಿಕ್ಕೆ ನೀರನ್ನು ಬಿಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

- Advertisement -

ನಾಳೆ ಬುಧವಾರದಿಂದ ರವಿವಾರವರೆಗೆ ನೀರನ್ನು ಬಿಡಲಾಗುತ್ತಿದ್ದು, ಬುಧವಾರ ಬೆಳಗಿನ ಜಾವ 6 ಗಂಟೆಯಿಂದ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಹರಿಯಲಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕಾರಜೋಳಗೆ ಅಭಿನಂದನೆ : ಸಾರ್ವಜನಿಕರ ಹಿತದೃಷ್ಟಿಯಿಂದ ನನ್ನ ಮನವಿಯ ಮೇರೆಗೆ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಕಾಲುವೆಗೆ 1 ಟಿಎಂಸಿ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗೆ 1 ಟಿಎಂಸಿ ನೀರನ್ನು ಎರಡೂ ಕಾಲುವೆಗಳಿಗೆ ಹರಿಸಲು ಕ್ರಮ ಕೈಗೊಂಡಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲಾ ಬಿಸ್ವಾಸ್ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ನಾಳೆಯಿಂದ ಗೋಕಾಕ, ಮೂಡಲಗಿ, ರಾಯಬಾಗ, ಮುಧೋಳ, ಜಮಖಂಡಿ ಮತ್ತು ಬೀಳಗಿ ತಾಲೂಕುಗಳ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಈ ನೀರು ಅನುಕೂಲವಾಗಲಿದೆ. ಸಾರ್ವಜನಿಕರು ಕೇವಲ ಕುಡಿಯುವ ನೀರಿಗಾಗಿ ಇದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

- Advertisement -
- Advertisement -

Latest News

ಸಿಂದಗಿ ಅಧ್ಯಕ್ಷರಾಗಿ ಶಾಂತವೀರ, ಉಪಾಧ್ಯಕ್ಷರಾಗಿ ರಾಜಣ್ಣಿ ಆಯ್ಕೆ

ಸಿಂದಗಿ; ಪಟ್ಟಣದ ಪುರಸಭೆಯ ಅಧ್ಯಕ್ಷ, ಉಪಾದ್ಯಕ್ಷರ ಅವಧಿ ಮುಗಿದು ಹಲವು ವರ್ಷಗಳು ಕಳೆದಿತ್ತು ಅದು ಅ. ೨೮ ರಂದು ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಿ ಸೆ.೯ ದಿನಾಂಕ...
- Advertisement -

More Articles Like This

- Advertisement -
close
error: Content is protected !!
Join WhatsApp Group