ಸಿಂದಗಿ: ಕರ್ನಾಟಕ ಸರಕಾರವು ರಾಜ್ಯದಲ್ಲಿನ ಪ್ಲಾಸ್ಟಿಕ್ನ್ನು ನಿಷೇಧ ಮಾಡುವಂತೆ ಆದೇಶ ಹೊರಡಿಸಿದ್ದರ ಹಿನ್ನೆಲೆಯಲ್ಲಿ ಸಿಂದಗಿ ಪಟ್ಟಣದಲ್ಲಿ ವ್ಯಾಪಾರಕ್ಕೆ ಬಳಸಲಾಗುತ್ತಿರುವ ಪ್ಲಾಸ್ಟಿಕ್ ಅಂಗಡಿಯ ಮೇಲೆ ಪುರಸಭೆ ಸಿಬ್ಬಂದಿ ದಾಳಿ ನಡೆಸಿ ರೂ 9 ಸಾವಿರ ದಂಡ ಹಾಗೂ 150 ಕೆ.ಜಿ.ಪ್ಲಾಸ್ಟಿಕ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಇದು ಸಾಂಕೇತಿಕವಾಗಿ ದಾಳಿ ನಡೆಸಿದ್ದು ವ್ಯಾಪಾರಸ್ಥರು ಸರಕಾರದ ಆದೇಶವನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಾಳಿ ನಡೆಸುವುದಲ್ಲದೆ ದಂಡ ವಿಧಿಸಬೇಕಾಗುತ್ತದೆ ಎಂದು ಪುರಸಭೆ ಆರೋಗ್ಯ ನಿರೀಕ್ಷಕ ನಬಿರಸೂಲ ಉಸ್ತಾದ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಇನ್ನೋರ್ವ ಸಿನೆಟರಿ ಅಧಿಕಾರಿ ಇಂದೂಮತಿ ಮಣೂರ, ಅಬ್ಬಾಸಲಿ ಬಂದಾಳ ಸೇರಿದಂತೆ ಸಿಬ್ಬಂದಿ ದಾಳಿ ನಡೆಸಿದ್ದಾರೆ.