ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಅಮಾನವೀಯ – ಶರಣು ಶಿಂಧೆ

Must Read

ಸಿಂದಗಿ – ವಿಜಯಪುರದಲ್ಲಿ ಇತ್ತೀಚೆಗೆ ನಡೆದ ಇಟ್ಟಂಗಿ ಭಟ್ಟಿಯ ಕೂಲಿ ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಿಂಸೆ ಮಾಡಿರುವ ಕೃತ್ಯ ಸಮಾಜ ವಿರೋಧಿಯಾಗಿದೆ. ಕೂಲಿ ಕಾರ್ಮಿಕರ ಮೇಲೆ ಹಿಂಸೆ ಮಾಡಿರುವ ದುರುಳರನ್ನು ಪೊಲೀಸ್ ಇಲಾಖೆ ಅತ್ಯಂತ ಕಠಿಣ ಶಿಕ್ಷೆ ಒಳಪಡಿಸಿ ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಡಿಎಸ್ಎಸ್ ಮುಖಂಡ ಶರಣು ಶಿಂಧೆ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು ಸಮಾಜದಲ್ಲಿ ಗೂಂಡಾ ವರ್ತನೆ ತಾಂಡವಾಡುತ್ತಿದೆ. ಹೊಟ್ಟೆಪಾಡಿಗಾಗಿ ಅಲೆದಾಡುತ್ತಿರುವ ಕೂಲಿ ಕಾರ್ಮಿಕರ ಮೇಲೆ ಈ ರೀತಿ ದೌರ್ಜನ್ಯ ಮಾಡುತ್ತಿರುವುದು ಯಾವ ನ್ಯಾಯ. ಅವರು ತಪ್ಪು ಮಾಡಿದ್ದರೆ ಅದನ್ನ ತಿಳಿ ಹೇಳುವಲ್ಲಿ ಮುಂದಾಗಬೇಕು ಹೊರತು ಕೂಲಿ ಕಾರ್ಮಿಕರು ಎಂದು ಅವರ ಮೇಲೆ ಹೀನ ಕೃತ್ಯ ಮಾಡುವುದು ಸಮಾಜದ ವಿರೋಧಿ ಕಾರ್ಯ ಮತ್ತು ಇದು ದೊಡ್ಡ ಅಪರಾಧ ಎಂದಿದ್ದಾರೆ.

ಕಾರ್ಮಿಕರ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ ತಕ್ಷಣವೇ ವಿಜಯಪುರ ಗ್ರಾಮೀಣ ಪೊಲೀಸ್ ಇಲಾಖೆಯವರು ಅಪರಾದಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಇದನ್ನು ದಲಿತ ಸಂಘರ್ಷ ಸಮಿತಿ ಸ್ವಾಗತಿಸುತ್ತದೆ. ಆದರೆ ಆ ಕಿಡಿಗೇಡಿಗಳನ್ನು ಸುಮ್ಮನೆ ಬಿಡಬಾರದು. ಬೇರೆ ಬೇರೆ ಕಡೆ ಕೂಲಿ ಕಾರ್ಮಿಕ ಕೆಲಸ ಮಾಡುತ್ತಿರುವ ಕಾರ್ಮಿಕರು ಭಯದಿಂದ ಬದುಕುತ್ತಿದ್ದಾರೆ. ಅವರಿಗೆ ನೆಮ್ಮದಿಯ ಬದುಕು ಬೇಕಾಗಿದೆ. ಸಮಾಜದಲ್ಲಿ ನಿತ್ಯ ಕಾರ್ಮಿಕರ ಮೇಲೆ ಒಂದಲ್ಲ ಒಂದು ಹಲ್ಲೆಗಳು ನಿರಂತರವಾಗಿ ಸಾಗುತ್ತಿವೆ ಇದಕ್ಕೆ ಸಂಬಂಧಪಟ್ಟ ಕಾರ್ಮಿಕ ಇಲಾಖೆ ಜಾಣ ಕುರುಡರಂತೆ ವರ್ತಿಸುತ್ತಿದೆ ಇದನ್ನು ಡಿಎಸ್ಎಸ್ ತೀವ್ರವಾಗಿ ಖಂಡಿಸುತ್ತದೆ.ಸರ್ಕಾರ ಮತ್ತು ಕಾರ್ಮಿಕ ಇಲಾಖೆ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳಿಗೆ ಅತಿ ಕಠಿಣ ಕ್ರಮವನ್ನು ಜರುಗಿಸಬೇಕೆಂದು ಶರಣು ಸಿಂಧೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಜಲಜೀವನ ಮಿಶನ್ ಸಫಲಗೊಳಿಸಲು ಶಾಸಕ ಮನಗೂಳಿ ಕರೆ

ಸಿಂದಗಿ; ಜಲಜೀವನ ಮಿಶನ್ ಯೋಜನೆಯಡಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರಿನ ಯೋಜನೆ ಕಲ್ಪಿಸಿಕೊಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಸಾಕಷ್ಠು ಹಣ ವ್ಯಯ ಮಾಡಿದೆ ಆದರೆ...

More Articles Like This

error: Content is protected !!
Join WhatsApp Group