Homeಸುದ್ದಿಗಳುಕುಡಿದ ಅಮಲಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಕುಡಿದ ಅಮಲಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಬೀದರ – ಕೌಟುಂಬಿಕ ಕಲಹಕ್ಕೆ ಮನ ನೊಂದು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಲ್ಲೆಪೂರ್ ನಿವಾಸಿ ಪ್ರಕಾಶ್ ಎಂಬ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದು ಆತನನ್ನು ರಕ್ಷಿಸಲಾಗಿದೆ. ಮೈ ಮೇಲೆ ಪೆಟ್ರೋಲ್ ಸುರಿದುಕೊಳ್ಳುತ್ತಿದ್ದಂತೆ ಓಡಿ ಬಂದ ಪೊಲೀಸರು ಆತನನ್ನು ರಕ್ಷಣೆ ಮಾಡಿ ಮಾರ್ಕೆಟ್ ಪೋಲೀಸ್ ಠಾಣೆಗೆ ಕರೆದುಕೊಂಡು ಹೋದರು.

ಪ್ರಕರಣದ ಬಗ್ಗೆ ವಿಚಾರಣೆ ನಡೆಯುತ್ತಿದೆ.


ವರದಿ: ನಂದಕುಮಾರ ಕರಂಜೆ, ಬೀದರ

RELATED ARTICLES

Most Popular

error: Content is protected !!
Join WhatsApp Group