- Advertisement -
ಬೆಳಗಾವಿ – ಬುಧವಾರ ದಿ.16 ರಂದು ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಚನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿಯ ‘ಪೃಥ್ವಿ ಫೌಂಡೇಶನ್ ‘ರವರ ವತಿಯಿಂದ ‘ಜನಪದಸಿರಿ’ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೃಥ್ವಿ ಫೌಂಡೇಶನ್ ಅಧ್ಯಕ್ಷೆ ಡಾ. ಹೇಮಾವತಿ ಸೊನೋಳ್ಳಿ ವಹಿಸಲಿದ್ದು,ಸಾಹಿತಿ ಡಾ. ಪಿ. ಜಿ.ಕೆಂಪನ್ನವರ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಫೌಂಡೇಶನ್ನಿನ ಸದಸ್ಯರಿಂದ ಜಾನಪದ ಹಾಡುಗಳು, ಜನಪದ ಕಲೆಯನ್ನು ಬಿಂಬಿಸುವ ಅನೇಕ ಕಾರ್ಯಕ್ರಮಗಳು ಮತ್ತು ಬೆಳಗಾವಿಯ ‘ಪುಷ್ಕಲ ನೃತ್ಯಾಲಯ’ ತಂಡದವರಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ‘ಅನುಪಮ ಸೇವಾ ರತ್ನ’ ಪ್ರಶಸ್ತಿಯನ್ನು ವಿದ್ಯಾ ಹುಂಡೆಕಾರ ಮತ್ತು ಪ್ರೇಮಾ ಪಾನಶೆಟ್ಟಿ ಅವರಿಗೆ ಪ್ರದಾನ ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ ಜನಪದ ಆಸಕ್ತರು ಸಾಹಿತ್ಯ ಪ್ರೇಮಿಗಳು ಆಗಮಿಸಲಿದ್ದಾರೆ ಎಂದು ಕಾರ್ಯದರ್ಶಿ ಶೈಲಜಾ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.