spot_img
spot_img

ಭೇರ್ಯ ರಾಮಕುಮಾರ ಮತ್ತು ಕಲಾಶ್ರೀ ಡಾ.ವಿಜಯಮಾಲಾ ರಂಗನಾಥ ಅವರಿಗೆ ಪ್ರಶಸ್ತಿ

Must Read

- Advertisement -

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ೨೦೨೨ ನೇ ಸಾಲಿನ ‘ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್  ಧರ್ಮದರ್ಶಿಗಳ ದತ್ತಿ’ ಪ್ರಶಸ್ತಿಗಾಗಿ ಕನ್ನಡ ಪರ ಹೋರಾಟಗಾರರಾದ  ಭೇರ್ಯ ರಾಮ ಕುಮಾರ ಮತ್ತು  ಗಮಕಿಗಳೂ ಸಾಹಿತಿಗಳೂ ಆದ ಕಲಾಶ್ರೀ ಡಾ. ವಿಜಯಮಾಲಾ ರಂಗನಾಥ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿಯು ತಲಾ ೧೦,೦೦೦ (ಹತ್ತು ಸಾವಿರ)ರೂ. ನಗದು ಬಹುಮಾನವನ್ನು ಒಳಗೊಂಡಿರುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

೨೦೨೨ ನೇ ಸಾಲಿನ ‘ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್  ಧರ್ಮದರ್ಶಿಗಳ ದತ್ತಿ’ ಪ್ರಶಸ್ತಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಪಂಪ ಸಭಾಭವನದಲ್ಲಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಅವರ ನೇತ್ರತ್ವದಲ್ಲಿ ನಡೆದ ಆಯ್ಕೆ ಸಮಿತಿಯ ಸಭೆಯಲ್ಲಿ ದತ್ತಿ ದಾನಿಗಳ ಆಶಯಕ್ಕೆ ಧಕ್ಕೆ ಬಾರದಂತೆ ಹಾಗೂ ದತ್ತಿಯ ಆಶಯದಂತೆ, ನಿರಂತರ ಕನ್ನಡ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡ ಕನ್ನಡಪರ ಹೋರಾಟಗಾರ ಭೇರ್ಯ ರಾಮ ಕುಮಾರ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಮತ್ತು ಗಮಕ ವಾಚನದಲ್ಲಿ ಅಪಾರ ಸೇವೆ ಸಲ್ಲಿಸುವ ಮೂಲಕ ಕನ್ನಡದ ಸೇವೆಯಲ್ಲಿ ತೊಡಗಿಸಿಕೊಂಡ ಕಲಾಶ್ರೀ ಡಾ. ವಿಜಯಮಾಲಾ ರಂಗನಾಥ ಅವರನ್ನು ೨೦೨೨ ನೇ ಸಾಲಿನ ‘ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್  ಧರ್ಮದರ್ಶಿಗಳ ದತ್ತಿ’ ಪ್ರಶಸ್ತಿಗಾಗಿ ಗುರುತಿಸಲಾಗಿದೆ.  

- Advertisement -

‘ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್  ಧರ್ಮದರ್ಶಿಗಳ ದತ್ತಿ’ ಪ್ರಶಸ್ತಿ ಪ್ರಕಟಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಸ್ತುತ ದತ್ತಿ ಪ್ರಶಸ್ತಿಯನ್ನು ದತ್ತಿ ದಾನಿಗಳು ಆಶಯದಂತೆ ಒಬ್ಬ ಕನ್ನಡ ಪರ ಹೋರಾಟಗಾರರು ಹಾಗೂ ಇನ್ನೋರ್ವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ತಮ್ಮ ನಿತ್ಯ ಬದುಕಿನಲ್ಲಿ ಕನ್ನಡ ನಾಡು- ನುಡಿಯ ಕುರಿತು ಅಪಾರ ಗೌರವ ಹೊಂದಿರುವ ಹಿರಿಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ. 

ಪ್ರಶಸ್ತಿ ಪುರಸ್ಕಾರ ಪಡೆದ ಇಬ್ಬರೂ ತಮ್ಮ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ. ಪರಿಷತ್ತು ಕನ್ನಡ ನಾಡಿನ ನೆಲಮೂಲ ಸಂಸ್ಕೃತಿಯನ್ನು ಉಳಿಸಿ- ಬೆಳೆಸುವಲ್ಲಿ ನಿರಂತರ ಪ್ರಯತ್ನ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನೇ.ಭ, ರಾಮಲಿಂಗ ಶೆಟ್ಟಿ,  ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.  

- Advertisement -

ಭೇರ್ಯ ರಾಮಕುಮಾರ್ ಅವರು ಸಾಹಿತ್ಯ ಸಂಘಟಕರಾಗಿ 1985ರಿಂದ ಇಲ್ಲಿಯವರೆಗೆ ಸುಮಾರು 334 ರಾಜ್ಯ ಮಟ್ಟದ ಸಾಹಿತ್ಯ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಪ್ರತಿಯೊಂದು ಸಾಹಿತ್ಯ ಕಾರ್ಯಕ್ರಮದಲ್ಲೂ ಸಾಮೂಹಿಕ ನೇತ್ರದಾನಕ್ಕೆ ಮನವೊಲಿಕೆ, ಉಚಿತ ಸಸಿಗಳ ವಿತರಣೆ, ಕಾವ್ಯ ಪುರಸ್ಕಾರ ವಿಜೇತರಿಗೆ ಸನ್ಮಾ‌ನ, ಶಾಲಾ-ಕಾಲೇಜುಗಳಲ್ಲಿ ಕನ್ನಡನಾಡು-ನುಡಿ ಪ್ರಾಮುಖ್ಯತೆ ಕುರಿತಂತೆ ಜಾಗೃತಿ ಉಪನ್ಯಾಸಗಳು, ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾಗಿ ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಬ್ಯಾಂಕುಗಳಲ್ಲಿ ಕನ್ನಡ ಕಡ್ಡಾಯ ಬಳಕೆ ಕುರಿತಂತೆ ಜಾಗೃತಿ ಕಾರ್ಯಕ್ರಮ ಗಳು ಹಾಗೂ ಕನ್ನಡ ಭಾಷೆ ಬಳಸದ ನಾಮಫಲಕಗಳ ವಿರುದ್ದ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿದ್ದಾರೆ. ಆ ಮೂಲಕ ಕನ್ನಡ ನಾಡು-,ನುಡಿಯ ಜಾಗೃತಿಗೆ ಅಹರ್ನಿಶಿ ಶ್ರಮಿಸುತ್ತಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ ಪ್ರಸಕ್ತ ಸಾಲಿನ ಮೈಸೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇವರು ತಮ್ಮ  ಕವನಗಳು ಹಾಗೂ ಅರ್ಥಪೂರ್ಣ ಸುಭಾಷಿತಗಳ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ.

- Advertisement -
- Advertisement -

Latest News

ಕವನ : ಗೊಂಬೆಗಳ ಕಣ್ಣೀರು

ಗೊಂಬೆಗಳ ಕಣ್ಣೀರು ಅಂದು ನಾವು ಅಪ್ಪ ಅವ್ವನನ್ನು ಕಾಡಿ ಬೇಡಿ ಗೊಂಬೆಗಳಿಗಾಗಿ ಅಳುತ್ತಿದ್ದೆವು ಜಾತ್ರೆ ಉತ್ಸವದಲ್ಲಿ ಹಿರಿಯರಿಗೆ ದೇವರ ಮೇಲಿನ ಭಕ್ತಿ ನಮಗೋ ಬಣ್ಣ ಬಣ್ಣದ ಗೊಂಬೆಗಳ ಮೇಲೆ ಆಸಕ್ತಿ ಅವ್ವ ಹೇಗೋ ಮಾಡಿ ಅಪ್ಪನ ತುಡುಗಿನಲಿ ತನ್ನಲಿದ್ದ ದುಡ್ಡು ಕೊಟ್ಟು ತಂದಳು ಗೊಂಬೆಗಳ ಮಿತಿ ಇರಲಿಲ್ಲ...
- Advertisement -

More Articles Like This

- Advertisement -
close
error: Content is protected !!
Join WhatsApp Group