spot_img
spot_img

ರಾಷ್ಟ್ರೀಯತೆ, ರಾಷ್ಟ್ರಪ್ರೇಮದ ಸಂಕೇತವೇ ಆಜಾದಿ ಕಾ ಅಮೃತ ಮಹೋತ್ಸವ

Must Read

spot_img

ಸವದತ್ತಿ– “ಭಾರತವು ಬ್ರಿಟೀಷರಿಂದ ಮುಕ್ತವಾಗಿ 75 ವಸಂತಗಳನ್ನು ಪೂರೈಸುತ್ತಿದ್ದು, ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಭಾರತೀಯರಾದ ನಾವೆಲ್ಲಾ ಹೆಮ್ಮೆ ಪಡಬೇಕು, ಮತ್ತು ಪ್ರತಿಯೊಂದು ಕ್ಷಣವನ್ನು ಸಂಭ್ರಮಿಸಬೇಕು” ಎಂದು ಶಿಕ್ಷಕ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ನಗರದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ ಮತ್ತು ರಾಷ್ಟ್ರಪ್ರೇಮ ಬೆಳೆಸಲು ಹಾಗೂ ಜಾಗೃತಗೊಳಿಸಲು ಆಜಾದಿ ಕಾ ಅಮೃತ ಮಹೋತ್ಸವ ಆಚರಿಸಿ ಭಾರತದ ಏಕತೆ ಮತ್ತು ಸಮಗ್ರತೆಯ ಅಂಶಗಳನ್ನು ತಿಳಿದುಕೊಂಡು ಎಲ್ಲರಿಗೂ ನಾವು ಮಾದರಿಯಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಮಕ್ಕಳಿಗೆ ರಾಷ್ಟ್ರಭಾವುಟದ ಚಿತ್ರಕಲಾ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟಗಾರ ವೇಷಭೂಷಣ ಸ್ಪರ್ಧೆ, ಗೀತಗಾಯನ ಸ್ಪರ್ಧೆ, ಭಾಷಣ ಸ್ಪರ್ಧೆ, ಏಕಪಾತ್ರಾಭಿನಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಶಿಕ್ಷಕಿ ಎಮ್ ಆರ್ ಫಂಡಿ, ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಮಕ್ಕಳು, ಪಾಲಕ-ಪೋಷಕರು ಹಾಜರಿದ್ದರು.

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!