ಸರ್ವರಿಗೂ ಕೃತಜ್ಞತೆ ಸಲ್ಲಿಸಿದ ಸರ್ವಾಧ್ಯಕ್ಷ ಡಾ. ಶಾಂತಿನಾಥ ದಿಬ್ಬದ
ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಬೈಲಹೊಂಗಲ ತಾಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಖ್ಯಾತ ಸಾಹಿತಿ ಡಾ. ಶಾಂತಿನಾಥ ದಿಬ್ಬದ ಅವರು ಧನ್ಯತಾ ಭಾವದಿಂದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ಹುಟ್ಟೂರಿನಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿದ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಹಾಗೂ ತಾಲೂಕಾ ಘಟಕದ ಎಲ್ಲ ಪದಾಧಿಕಾರಿಗಳಿಗೆ ಹಾಗೂ ದೇವಲಾಪೂರ ಗ್ರಾಮದ ಸಮಸ್ತ ಗುರು ಹಿರಿಯರಿಗೆ, ಸ್ವಾಗತ ಹಾಗೂ ಉಪಸಮಿತಿಗಳ ಪದಾಧಿಕಾರಿಗಳಿಗೆ, ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ, ಸರ್ವ ಸದಸ್ಯರಿಗೆ, ಶಾಲಾ ಕಾಲೇಜುಗಳ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ, ಎಸ್.ಡಿ.ಎಂ.ಸಿ ಪದಾಧಿಕಾರಿಗಳಿಗೆ, ತಾಲೂಕಿನ ಎಲ್ಲ ಜನಪ್ರತಿನಿಧಿಗಳಿಗೆ, ಮಾಧ್ಯಮ ಪ್ರತಿನಿಧಿಗಳಿಗೆ, ಸಹಕಾರಿ ಹಾಗೂ ಕನ್ನಡಪರ ಸಂಘ ಸಂಸ್ಥೆಗಳಿಗೆ, ಅಧಿಕಾರಿ ಹಾಗೂ ಸಿಬ್ಬಂದಿಗೆ, ಕನ್ನಡಾಭಿಮಾನಿಗಳಿಗೆ, ಸಾಹಿತ್ಯಾಸಕ್ತರಿಗೆ ಸಮ್ಮೇಳನ ಉತ್ತಮ ರೀತಿಯಲ್ಲಿ ನಡೆಯಲು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಎಲ್ಲ ಮಹನೀಯರ ಬೆಂಬಲದಿಂದ ಸಮ್ಮೇಳನ ಅಚ್ಚುಕಟ್ಟಾಗಿ ನಡೆದಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸಿದ್ದು ಒಂದು ಇತಿಹಾಸ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಹಲವು ವಿಶೇಷತೆಗಳಿಂದ ಕೂಡಿದ ಇಂತಹ ಸಮ್ಮೇಳನದಲ್ಲಿ ಸರ್ವಾಧ್ಯಕ್ಷ ಸ್ಥಾನ ದೊರೆತಿದ್ದು ಮನಸ್ಸಿಗೆ ಅತ್ಯಂತ ಖುಷಿ ನೀಡಿದ್ದು ಹೆಮ್ಮೆ ತರುವ ಸಂಗತಿಯಾಗಿದೆ ಎಂದು ಡಾ. ಶಾಂತಿನಾಥ ದಿಬ್ಬದ ಹೇಳಿದ್ದಾರೆ.