spot_img
spot_img

ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

Must Read

spot_img
- Advertisement -

ಬೆಂಗಳೂರು- ದುಬೈನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಅಭೂತಪೂರ್ವ ಗೆಲುವು ದಾಖಲಿಸಿ ಚಾಂಪಿಯನ್ ಕಿರೀಟ್ ಧರಿಸಿರುವುದಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿ, ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ.

ಈ ಮೂಲಕ ಒಟ್ಟು ಮೂರು ಬಾರಿ ಚಾಂಪಿಯನ್ ಟ್ರೋಫಿ ಪಡೆದಿರುವ ಭಾರತವು ವಿಶ್ವದ ಮೊದಲ ತಂಡವಾಗಿದೆ.
ಭಾನುವಾರದಂದು ದುಬೈ ಕ್ರೀಡಾಂಗಣದಲ್ಲಿ ಜರುಗಿದ ಕಿವೀಸ್ ಎದುರು ಫೈನಲ್ ಫೈಟ್ ನಲ್ಲಿ ಕೊನೆಗೂ ಕಿವೀಸ್ ವಿರುದ್ಧ ಗೆಲ್ಲುವ ಮೂಲಕ ಭಾರತ ಚಾಂಪಿಯನ್ ಪಟ್ಟಕ್ಕೇರಿತು. ಈ ಮೂಲಕ ಕಳೆದ ೨೫ ವರ್ಷಗಳ ಹಿಂದಿನ ಸೇಡು ತೀರಿಸಿಕೊಂಡಿದೆ.

ಅಲ್ಲದೇ ಈ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತವು ಒಂದೂ ಪಂದ್ಯವನ್ನು ಸೋಲದೇ ಅಜೇಯವಾಗಿ ಫೈನಲ್ ಪ್ರವೇಶ ಮಾಡಿ ಕಿವೀಸ್ ವಿರುದ್ಧ ೪ ವಿಕೆಟ್ ಗೆಲುವು ಪಡೆದುಕೊಂಡಿತು.

- Advertisement -

ಟೀಂ ಇಂಡಿಯಾ ಹೊಸ ಚಾಂಪಿಯನ್ ಆಗುತ್ತಿದ್ದಂತೆಯೇ ದೇಶಾದ್ಯಂತ ಸಂಭ್ರಮ ಮುಗಿಲು ಮುಟ್ಟಿದೆ.
ಪಟಾಕಿ ಸಿಡಿಸಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಮುಖ್ಯಮಂತ್ರಿಗಳಿಗೆ ಮಾಧ್ಯಮ ಲೋಕದ ನೂತನ ಪುಸ್ತಕ: ಹಿರಿಯರ ಸೇವೆ ಶ್ಲಾಘನೀಯ ಎಂದ ಸಿಎಂ

ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು...
- Advertisement -

More Articles Like This

- Advertisement -
close
error: Content is protected !!
Join WhatsApp Group