ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ

Must Read

ಕೊಲ್ಲೂರು- ಅರಭಾವಿ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಉಡುಪಿ ಜಿಲ್ಲೆಗಳ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.

ಶನಿವಾರದಂದು ಮುಂಜಾನೆ ಉಡುಪಿ ಜಿಲ್ಲೆಯ ಐತಿಹಾಸಿಕ, ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಮೂಕಾಂಬಿಕೆಯ ದರ್ಶನ ಪಡೆದುಕೊಂಡ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದ ಅರ್ಚಕರು ಸತ್ಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರಾಂತ ದೇವಸ್ಥಾನಗಳಿವೆ. ಪ್ರತಿ ವರ್ಷವೂ ಸಮಯ ಸಿಕ್ಕಾಗಲೆಲ್ಲಾ ತಮ್ಮ ಸ್ನೇಹಿತರೊಂದಿಗೆ ವಿವಿಧ ಧಾರ್ಮಿಕ ಸ್ಥಳಗಳಿಗೆ ಭೆಟ್ಟಿ ಕೊಟ್ಟು ದೇವರ ದರ್ಶನ ಪಡೆದುಕೊಳ್ಳುತ್ತೇನೆ. ಇದರಿಂದ ಮನಸಿಗೆ ನೆಮ್ಮದೀ ಆಗುತ್ತದೆ. ದೇವರ ದರ್ಶನ ಭಾಗ್ಯದಿಂದ ಸಕಲರ ಕಷ್ಟಗಳು ದೂರವಾಗಿ ಜೀವನದಲ್ಲಿ ಸುಖ, ಶಾಂತಿ, ಸಮೃದ್ಧಿ ಪ್ರಾಪ್ತಿ ಸುಲಭವಾಗುತ್ತದೆ. ನಮಗೆಲ್ಲ ದೇವರ ಬಗ್ಗೆ ನಂಬಿಕೆ ಜಾಸ್ತಿ ಇದೆ. ಹೀಗಾಗಿ ನಮಗೆ ಎಂಥ ಸಂದರ್ಭ ಇದ್ದರೂ ದೇವರ ದರ್ಶನ ಪಡ್ಕೋತೀವಿ ಎಂದು ಹೇಳಿದರು.

ಬಾಲಚಂದ್ರ ಜಾರಕಿಹೊಳಿ ಜತೆಯಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜು ಅಂಕಲಗಿ, ವಿಕ್ರಮ ಅಂಗಡಿ, ಲೆಕ್ಕ ಪರಿಶೋಧಕ ಸೈದಪ್ಪ ಗದಾಡಿ, ಅಪ್ಪಾಸಾಬ ಅವತಾಡೇ , ಅರ್ಬನ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಕಲ್ಯಾಣಶೆಟ್ಟಿ, ಮನಿಷ ಜಯಶೀಲ ಶೆಟ್ಟಿ, ರಾಜು ದರಗಶೆಟ್ಟಿ, ಅಶೋಕ ಕಪ್ಪಲಗುದ್ದಿ, ರಾಜು ಅಂಡಗಿ, ನಿರಂಜನ ಬನ್ನಿ ಶೆಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News

ಲೇಖನ : ಹಟ್ಟಿ ಹಬ್ಬ

ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...

More Articles Like This

error: Content is protected !!
Join WhatsApp Group