spot_img
spot_img

58 ಕಿಲೋ ತೂಕದ ಕೇಕ್ ಕತ್ತರಿಸಿದ ಬಂಡೆಪ್ಪ ಖಾಶೆಂಪುರ

Must Read

58ನೇ ಹುಟ್ಟು ಹಬ್ಬ ಆಚರಣೆ

ಬೀದರ – 58 ಕೆ.ಜಿ ತೂಕದ ಕೇಕ್ ಕತ್ತರಿಸುವ ಮೂಲಕ ತಮ್ಮ 58 ನೇ ಜನ್ಮ ದಿನವನ್ನು ಜೆಡಿಎಸ್ ಶಾಸಕ ಬಂಡೆಪ್ಪ ಖಾಶೆಂಪುರ್ ಆಚರಿಸಿಕೊಂಡರು.

ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ 58ನೇ ಹುಟ್ಟು ಹಬ್ಬದ ಅಂಗವಾಗಿ ಜೂ.15ರಂದು ಬೀದರ್ ದಕ್ಷಿಣ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ಅವರ ನಿವಾಸದಲ್ಲಿ ಅಭಿಮಾನಿಗಳ ಜೊತೆ 58 ಕೆ.ಜಿ ತೂಕದ ಕೇಕ್ ಕತ್ತರಿಸುವ ಮೂಲಕ ಜನ್ಮ ದಿನ ಆಚರಣೆ ಮಾಡಿಕೊಂಡರು.

ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಅಭಿಮಾನಿಗಳು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಶಾಸಕ ಬಂಡೆಪ್ಪ ಖಾಶೆಂಪುರ್ ರವರಿಗೆ ಜನ್ಮ ದಿನದಂದು ಶುಭ ಕೋರಿದರು.

ಬೆಂಗಳೂರು, ಕಲಬುರಗಿ, ಯಾದಗಿರಿ, ರಾಯಚೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಜೆಡಿಎಸ್ ಪಕ್ಷದ ಪ್ರಮುಖ ನಾಯಕರು, ಮುಖಂಡರು, ಕಾರ್ಯಕರ್ತರು, ಆಪ್ತರು, ವಿವಿಧ ಕ್ಷೇತ್ರದ ಜನಪ್ರತಿನಿಧಿಗಳು ಶಾಸಕ ಬಂಡೆಪ್ಪ ಖಾಶೆಂಪುರ್ ರವರನ್ನು ಸನ್ಮಾನಿಸಿ ಗೌರವಿಸಿದರು.

ಇದಕ್ಕೂ ಮುಂಚೆ, ಜನ್ಮ ದಿನದ ಅಂಗವಾಗಿ ಬುಧವಾರ ಬೆಳಗ್ಗೆ ಶಾಸಕ ಖಾಶೆಂಪುರ್ ರವರು, ಬೀದರ್ ಜಿಲ್ಲೆ ಬಾಲ್ಕಿ ತಾಲೂಕಿನ ಖಾನಾಪೂರದ ಶ್ರೀ ಕ್ಷೇತ್ರ ಮೈಲಾರ ಮಲ್ಲಣ್ಣಾ (ಖಂಡೊಬಾ) ದೇವಸ್ಥಾನಕ್ಕೆ, ಬೀದರ್ ನಗರದ ಮಂಗಳಪೇಟೆಯ ಭವಾನಿ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಮಣ್ಣು ಉಳಿಸಿ ಹೋರಾಟಕ್ಕೆ ಬೆಂಬಲ ನೀಡೋಣ – ಅಶೋಕ ಅಲ್ಲಾಪೂರ

ಸಿಂದಗಿ - ಜಗತ್ತಿನ ಜೀವ ಸಂಕುಲಕ್ಕೆ ಆಶ್ರಯವಾದ ಭೂಮಿಯನ್ನು ಮತ್ತು ಮಣ್ಣನ್ನು ಉಳಿಸಿ ಮುಂದಿನ ಜನಾಂಗಕ್ಕೆ ಫಲವತ್ತಾದ ಭೂಮಿ ನೀಡಲು ಶ್ರೀ ಸದ್ಗುರು ಜಗ್ಗಿ ವಾಸುದೇವ್...
- Advertisement -

More Articles Like This

- Advertisement -
close
error: Content is protected !!