spot_img
spot_img

ಪಿಎಫ್ಐ ನಿಷೇಧಿಸಿದ್ದು ಸ್ವಾಗತಾರ್ಹ ಕ್ರಮ- ಈರಣ್ಣ ಕಡಾಡಿ

Must Read

ಮೂಡಲಗಿ: ಪಿ.ಎಫ್.ಐ ಸಂಘಟನೆ ಐಸಿಸ್ ನಂಥ ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹೊಂದಿ, ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ್ದು ಮಾತ್ರವಲ್ಲದೇ, ಭವಿಷ್ಯದಲ್ಲಿ ಪಿಎಫ್‍ಐ ನಡೆಸಬಹುದಾಗಿದ್ದ ಭಾರಿ ವಿಧ್ವಂಸಕ ಕೃತ್ಯಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ ಶಾ ಅವರು ತೆಗೆದುಕೊಂಡ ಖಡಕ್ ನಿರ್ಧಾರದಿಂದ ದೇಶಾದ್ಯಂತ ಪಿಎಫ್‍ಐ ಮತ್ತು ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿದ ಕ್ರಮವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸ್ವಾಗತಿಸಿದ್ದಾರೆ.

ಬುಧವಾರ ಸೆ.28 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಇತ್ತೀಚೆಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲೂ ಇದೇ ಸಂಘಟನೆ ಪಾತ್ರ ಇರುವುದನ್ನು ಕೇಂದ್ರ ಗೃಹ ಇಲಾಖೆ ಉಲ್ಲೇಖಿಸಿದ್ದು, ಈ ಹಿಂದೆ ಸಿಮಿ ಸಂಘಟನೆಯನ್ನು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ಸರಕಾರ ಬ್ಯಾನ್ ಮಾಡಿತ್ತು. ಅದರ ರೂಪಾಂತರಿ ತಳಿ ಪಿಎಫ್‍ಐನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರವೇ ನಿಷೇಧಿಸಿದೆ. ದೇಶದ ಆಂತರಿಕ ಹಾಗೂ ಬಾಹ್ಯ ರಕ್ಷಣೆಗೆ ಬಿಜೆಪಿ ಸದಾ ಬದ್ಧವಾಗಿದೆ ಎಂದರು.

ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ ಪಿ.ಎಫ್.ಐ ಸಂಘಟನೆಯ ವಿರುದ್ಧ ದಾಖಲಾಗಿದ್ದ 100ಕ್ಕೂ ಹೆಚ್ಚು ಪ್ರಕರಣ ವಾಪಸ್ ಪಡೆಯಲಾಗಿತ್ತು. 1400ಕ್ಕೂ ಹೆಚ್ಚು ಪಿಎಫ್‍ಐ ಉಗ್ರರಿಗೆ ಸಿದ್ದರಾಮಯ್ಯ ಕ್ಷಮಾದಾನ ನೀಡಿದ್ದರು. ಇದರ ಫಲವಾಗಿ ರಾಜ್ಯದಲ್ಲಿ ಹಿಂದು ಕಾರ್ಯಕರ್ತರ ಸರಣಿ ಕೊಲೆಗೆ ಕಾಂಗ್ರೆಸ್ ಕಾರಣವಾಗಿತ್ತು. ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ಇದೇ ಸಂಘಟನೆ ಕಾರ್ಯಕರ್ತರು ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದಾಗ ಕಾಂಗ್ರೆಸ್ ನಾಯಕರು ತುಟಿ ಬಿಚ್ಚಲಿಲ್ಲ. ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ತನ್ನದೇ ಶಾಸಕರ ಮನೆಗೆ ಬೆಂಕಿ ಹಚ್ಚಿದಾಗಲೂ ಕಾಂಗ್ರೆಸ್ ಧ್ವನಿ ಎತ್ತಿರಲಿಲ್ಲ. ಇದು ಪಿಎಫ್‍ಐ ಪರ ಕಾಂಗ್ರೆಸ್ ತಾಳಿದ್ದ ಮೃದು ಧೋರಣೆಗೆ ಸಾಕ್ಷಿಯಾಗಿತ್ತಲ್ಲವೇ?  ಕೇಂದ್ರದಲ್ಲೂ ಬಿಜೆಪಿ ಸರಕಾರ ಇದೆ, ರಾಜ್ಯದಲ್ಲೂ ಬಿಜೆಪಿ ಸರಕಾರ ಇದೆ. ಸಾಮರ್ಥ್ಯ ಇದ್ದರೆ ಪಿಎಫ್‍ಐ ಬ್ಯಾನ್ ಮಾಡಿ ಎಂದು ಸಿದ್ದರಾಮಯ್ಯ ಆಗಾಗ ಮಾಡುತ್ತಿದ್ದ ಉದ್ರೇಕಕಾರಿ ಭಾಷಣಕ್ಕೆ ಈಗ ಉತ್ತರ ನೀಡಲಾಗಿದೆ ಎಂದರು.

- Advertisement -
- Advertisement -

Latest News

ನಿಪ್ಪಾಣಿ ನಗರಸಭೆಯ ಮೇಲಿನ ಭಗವಾಧ್ವಜ ತೆರವುಗೊಳಿಸಲು ಗಡಾದ ಆಗ್ರಹ

ಮೂಡಲಗಿ - ಸುಮಾರು ೩೧ ವರ್ಷಗಳಿಂದ ಬೆಳಗಾವಿಯ ನಿಪ್ಪಾಣಿ ನಗರಸಭೆಯ ಕಟ್ಟಡದ ಮೇಲೆ ಅನಧಿಕೃತವಾಗಿ ಹಾರಾಡುತ್ತಿರುವ ಭಗವಾ ಧ್ವಜವನ್ನು ತೆರವುಗೊಳಿಸಬೇಕು ಎಂದು ಮನವಿ ಸಲ್ಲಿಸಿ ಒಂದು...
- Advertisement -

More Articles Like This

- Advertisement -
close
error: Content is protected !!