spot_img
spot_img

ಶುಕ್ರವಾರದಿಂದ ಬಸವ ಎಕ್ಸಪ್ರೆಸ್ ರೈಲು ಓಡಾಟ ಆರಂಭ – ಈರಣ್ಣ ಕಡಾಡಿ ಮಾಹಿತಿ

Must Read

ಮೂಡಲಗಿ: ಪುಟ್ಟಪರ್ತಿಯ ಶ್ರೀ ಸತ್ಯಸಾಯಿ ಬಾಬಾ ಅವರ ಆಶ್ರಮಕ್ಕೆ ಕರ್ನಾಟಕದಿಂದ ಹೋಗುವ ಭಕ್ತಾದಿಗಳ  ಬಸವ ಎಕ್ಸ್ ಪ್ರೆಸ್ (ಮೈಸೂರು-ಬಾಗಲಕೋಟೆ-ಮೈಸೂರು- ರೈಲು ಸಂಖ್ಯೆ- 17307/17308) ರೈಲು ಶುಕ್ರವಾರದಿಂದ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ನಿಲ್ದಾಣದವರೆಗೆ ಸಂಚಾರ ಪ್ರಾರಂಭವಾಗಲಿದೆ ಎಂದು ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು.

ಗುರುವಾರ ಅ. 25 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು,  ಕರ್ನಾಟಕದಿಂದ ಲಕ್ಷಾಂತರ ಭಕ್ತರು ಪುಟ್ಟಪರ್ತಿಯ ಶ್ರೀ ಸತ್ಯಸಾಯಿ ಬಾಬಾ ಅವರ ದರ್ಶನಕ್ಕೆ ತೆರಳಲು ಅನುಕೂಲವಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ರಾಜ್ಯದ ಜನತೆಯ ಪರವಾಗಿ ತುಂಬು ಹೃದಯದಿಂದ ಅಭಿನಂದಿಸುತ್ತೇನೆಂದರು.

ರಾಜ್ಯಸಭೆಯ ಮುಂಗಾರು ಅಧಿವೇಶನದ ವಿಶೇಷ ಸಂದರ್ಭದಲ್ಲಿ ಕರ್ನಾಟಕದಿಂದ ಚಲಿಸುವ ರೈಲುಗಳ ನಿಲುಗಡೆಗೆ ಸಂಬಂಧಿಸಿದಂತೆ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸಚಿವರ ಗಮನ ಸೆಳೆದು ಮನವಿ ಮಾಡಿದ್ದರು. ಹಂಪಿ ಎಕ್ಸ್ ಪ್ರೆಸ್ ರೈಲಿನ ಸ್ಥಳ ಬದಲಾವಣೆಯ ಬೇಡಿಕೆಯು ಕೂಡಾ ಯೋಜನಾ ಹಂತದಲ್ಲಿದೆ. ಅದು ಕೂಡಾ ಶೀಘ್ರದಲ್ಲಿಯೇ ನೆರವೇರಲಿದೆ ಭಕ್ತಾದಿಗಳು ಇದರ ಪ್ರಯೋಜನೆ ಪಡೆಯಬೇಕೆಂದರು.

- Advertisement -
- Advertisement -

Latest News

ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕಲ್ಲಿನಾಥ ಶ್ರೀ ಆಗ್ರಹ

ಮೂಡಲಗಿ: ಜಗತ್ತಿಗೆ ಬೆಳಕನ್ನು ಕೊಟ್ಟ  ಗಾಣಿಗ ಸಮುದಾಯ ಇಂದು ಗಾಣಗಳು ಬತ್ತಿ ಹೋಗಿ ಯಂತ್ರೋಪಕರಣ ಬಂದಾಗಿನಿಂದ ಮೂಲ ಕಸಬು ಕಳೆದುಕೊಂಡು ಶೋಷನೆಗೆ ಒಳಗಾಗಿರುವದರಿಂದ ಗಾಣಿಗ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!