30+ Basavanna Vachanagalu In Kannada- ಬಸವಣ್ಣನವರ ವಚನಗಳು

Basavanna Vachanagalu In Kannada- ಬಸವಣ್ಣನವರ ವಚನಗಳು

ಈ ಪೋಸ್ಟ್ನಲ್ಲಿ, ನಾವು ಕನ್ನಡದಲ್ಲಿ ಜೀವನವನ್ನು ಬದಲಾಯಿಸುವ ಅತ್ಯುತ್ತಮ ಬಸವಣ್ಣನವರ ವಚನಗಳು ನಿಮಗೆ ನೀಡಲಿದ್ದೇವೆ. ಈ ಪೋಸ್ಟ್ ಅನ್ನು ಕೊನೆಯವರೆಗೂ ಓದಿ. ವಚನಗಳು ಬಹಳ ಅರ್ಥಪೂರ್ಣವಾಗಿವೆ.

ಬಸವಣ್ಣನವರು ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ಗ್ರಾಮದಲ್ಲಿ 1134 ರಲ್ಲಿ ಜನಿಸಿದರು. ಶ್ರೀ ಮಾದರಸ ಮತ್ತು ಮಾದಲಾಂಬಿಕೆ ಬಸವಣ್ಣನರ ಅಪ್ಪ-ಅಮ್ಮ. ಬಸವಣ್ಣನವರು ಲಿಂಗಾಯತ ಸಮುದಾಯದ ಸ್ಥಾಪಕರು. ಬಸವಣ್ಣನವರು ಎಂಟನೇ ವಯಸಿನಲ್ಲಿ ಇದ್ದಾಗ ಅವರಿಗೆ ಜನಿವಾರ ಕಟ್ಟಲು ಹೋದಾಗ ಅವರು ತಮಗಿಂತ ದೊಡ್ಡವಳಾದ ಸಹೋದರಿ ನಾಗಮ್ಮ ನಿಗೆ ಕಟ್ಟಲು ಹೇಳುತ್ತಾರೆ.

ಆ ಸಮಯದಲ್ಲಿ ಹಿರಿಯರು ಇದು ಪುರುಷರಿಗೆ ಮಾತ್ರ ಕಟ್ಟಬೇಕು ಮಹಿಳೆಯರಿಗೆ ಕಟ್ಟುವಂತಿಲ್ಲ ಎಂದು ಹೇಳಿದಾಗ ಪುರುಷ ಮತ್ತು ಮಹಿಳೆಯ ಮಧ್ಯ ಸಮಾನತೆ ಇರಬೇಕು ಬೇಧ ಭಾವ ಇರಬಾರದು ಎಂದು ಹೇಳಿ ಮನೆ ಬಿಟ್ಟು ಹೊರಟು ಹೋಗುತ್ತಾರೆ.  ನಂತರ ಬಸವಣ್ಣ ಕೂಡಲ ಸಂಗಮಕ್ಕೆ ತೆರಳುತ್ತಾರೆ. ಸುಮಾರು 12 ವರ್ಷಗಳ ಕಾಲ ಕೂಡಲ ಸಂಗಮದಲ್ಲೇ ಅಧ್ಯಾಯನದಲ್ಲಿ ತೊಡಗಿಸಿಕೊಳ್ಳುತ್ತಾರೆ. ದೇವರು ಬೇರೆ ಎಲ್ಲಿಯೂ ಇಲ್ಲ ಅವನು ನಮ್ಮೊಳಗೆ ಇದ್ದಾನೆ ಎಂದು ಬಸವಣ್ಣ ನಂಬಿದ್ದರು.

ಸುಳ್ಳು ಹೇಳುವುದು, ಕೊಲೆ ಸುಲಿಗೆ, ಪ್ರಾಣಿ ಬಲಿ/ ಹಿಂಸೆ ಯಾವುದು ಇಷ್ಟವಾಗುತ್ತಿರಲಿಲ್ಲ. ಇವೆಲ್ಲವನ್ನೂ ಬಸವಣ್ಣ ವಿರೋಧಿಸುತ್ತಿದ್ದರು. ಬಸವಣ್ಣನವರಿಗೆ ಕ್ರಾಂತಿಯೋಗಿ ಬಸವಣ್ಣ, ಮಹಾಮಾನತಾವಾದಿ ಎಂಬ ಹೆಸರುಗಳು ಕೂಡ ಇವೆ.

ಸಮಾನತೆ, ಕಾಯಕ, ತತ್ವಗಳನ್ನು ಆಚರಿಸುವ ಮತ್ತು ಪಾಲಿಸುವ ಯಾರು ಬೇಕಾದರೂ ಶಿವಶರಣರಾಗಬಹುದು ಅನ್ನೋದು ಬಸವಣ್ಣನವರ ದೃಷ್ಟಿಕೋನವಾಗಿತ್ತು. ಬಸವಣ್ಣನವರ ವಚನಗಳ ಅಂಕಿತ “ಕೂಡಲಸಂಗಮದೇವ”, ಕಾಯಕವೇ ಕೈಲಾಸ , ಅಯ್ಯ ಎಂದರೆ ಸ್ವರ್ಗ ಎಲವೋ ಎಂದರೆ ನರಕ ಹೀಗೆ ಹಲವು ವಚನಗಳನ್ನು ಹೇಳಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಚನಗಳ ಮೂಲಕ ಅಪೂರ್ವವಾದ ಕೊಡುಗೆ ನೀಡಿದ್ದಾರೆ. ಬಸವಣ್ಣನವರ ಸುಮಾರು 1500 ಕ್ಕೂ ಹೆಚ್ಚು ವಚನಗಳನ್ನು ಸಂಗ್ರಹ ಮಾಡಲಾಗಿದೆ. ಸಮಾನತೆ ಇರಬೇಕು ಎಂದು ಬಯಸಿದ್ದ ಬಸವಣ್ಣ 1196 ರಲ್ಲಿ ಕೂಡಲ ಸಂಗಮದಲ್ಲಿ ನಿಧನ ಹೊಂದಿದ್ದರು.

Also Read: 115+ Akka Mahadevi Vachanagalu In Kannada – ಅಕ್ಕಮಹಾದೇವಿ ವಚನಗಳು

Basavanna Vachanagalu In Kannada

ಅಯ್ಯಾ, ನೀನು ನಿರಾಕಾರವಾದಲ್ಲಿ
ನಾನು ಜ್ಞಾನವೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನು ನಾಂಟ್ಯಕ್ಕೆ ನಿಂದಲ್ಲಿ
ನಾನು ಚೈತನ್ಯವೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನು ಸಾಕಾರವಾಗಿದ್ದಲ್ಲಿ
ನಾನು ವೃಷಭನೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನೆನ್ನ ಭವವ ಕೊಂದಹೆನೆಂದು
ಜಂಗಮಲಾಂಛನವಾಗಿ ಬಂದಲ್ಲಿ
ನಾನು ಭಕ್ತನೆಂಬ ವಾಹನವಾಗಿದ್ದೆ ಕಾಣಾ ಕೂಡಲಸಂಗಮದೇವ.

Basavanna-Vachanagalu-In-Kannada
Basavanna Vachanagalu In Kannada

ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ
ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯ,
ಇಂದೆನ್ನ ದೇಹಕ್ಕೆ ಗ್ರಹಣವಾಯಿತ್ತು.
ಇನ್ನೆಂದಿಂಗೆ ಮೋಕ್ಷವಹುದೋ. ಕೂಡಲಸಂಗಮದೇವ.

ನಾದಪ್ರಿಯ ಶಿವನೆಂಬರು ನಾದಪ್ರಿಯ ಶಿವನಲ್ಲ
ವೇದಪ್ರಿಯ ಶಿವನೆಂಬರು ವೇದಪ್ರಿಯ ಶಿವನಲ್ಲ
ನಾದವ ಮಾಡಿದ ರಾವಣಂಗೆ ಅರೆಯಾಯುಷವಾಯ್ತು
ವೇದವನೋದಿದ ಬ್ರಹ್ಮನ ಶಿರಹೋಯ್ತು
ನಾದಪ್ರಿಯನೂ ಅಲ್ಲ ವೇದಪ್ರಿಯನೂ ಅಲ್ಲ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ!

ಉಳ್ಳವರು ಶಿವಾಲಯವ ಮಾಡುವರು
ನಾನೇನು ಮಾಡಲಿ ಬಡವನಯ್ಯ?
ಎನ್ನ ಕಾಲೇ ಕಂಬ ದೇಹವೆ ದೇಗುಲ
ಶಿರವೇ ಹೊನ್ನ ಕಳಸವಯ್ಯ!
ಕೂಡಲಸಂಗಮ ದೇವ ಕೇಳಯ್ಯ
ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ!

ಚಕೋರಂಗೆ ಚಂದ್ರಮನ ಬೆಳಕಿನ ಚಿಂತೆ
ಅಂಬುಜಕೆ ಭಾನುವಿನ ಉದಯದ ಚಿಂತೆ
ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ
ಎನಗೆ ಎನ್ನ ಕೂಡಲಸಂಗಮದೇವನ ನೆನೆವುದೆ ಚಿಂತೆ!

ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ.
ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಾ ನಿಮ್ಮ ಮನೆಯ ಮಗನೆಂದೆನಿಸಯ್ಯಾ.

ಮಡಕೆಯ ಮಾಡುವಡೆ ಮಣ್ಣೆ ಮೊದಲು,
ತೊಡಿಗೆಯ ಮಾಡುವಡೆ ಹೊನ್ನೆ ಮೊದಲು,
ಶಿವಪಥವನರಿವಡೆ ಗುರುಪಥವೆ ಮೊದಲು,
ಕೂಡಲಸಂಗಮದೇವರನರಿವಡೆ
ಶರಣರ ಸಂಗವೆ ಮೊದಲು.

ಸಂಸಾರವೆಂಬ ಸರ್ಪ ಮುಟ್ಟಲು
ಪಂಚೇಂದ್ರಿಯವಿಷಯವೆಂಬ
ವಿಷದಿಂದಾನು ಮುಂದುಗೆಟ್ಟೆನಯ್ಯ,
ಆನು ಹೊರಳಿ ಬೀಳುತ್ತಿದ್ದೆನಯ್ಯ;
‘ಓಂ ನಮಶ್ಶಿವಾಯ’ ಎಂಬ ಮಂತ್ರವ ಜಪಿಸುತ್ತಿದ್ದೆನಯ್ಯ
ಕೂಡಲಸಂಗಮದೇವ.

ಎನ್ನ ಮನವೆಂಬ ಮರ್ಕಟನು
ತನುವಿಕಾರವೆಂಬ ಅಲ್ಪಸುಖದಾಸೆ ಮಾಡಿ,
ವೃಥಾ ಭ್ರಮಣಗೊಂಡು, ನಾನಾ ದೆಸೆಗೆ ಲಂಘಿಸಿ ಅಳಲಿಸಿ ಬಳಲಿಸುತ್ತಿದೆ ನೋಡಾ.
ಕೂಡಲಸಂಗಮದೇವರೆಂಬ ವೃಕ್ಷಕ್ಕೆ ಲಂಘಿಸಿ
ಅಪರಿಮಿತ ಸುಖವನೆಯ್ದದು ನೋಡಾ.

ನೀರಿಂಗೆ ನೈದಿಲೆಯೆ ಶೃಂಗಾರ,
ಸಮುದ್ರಕ್ಕೆ ತೆರೆಯೆ ಶೃಂಗಾರ,
ನಾರಿಗೆ ಗುಣವೆ ಶೃಂಗಾರ,
ಗಗನಕ್ಕೆ ಚಂದ್ರಮನೆ ಶೃಂಗಾರ,
ನಮ್ಮ ಕೂಡಲಸಂಗನ ಶರಣರಿಗೆ
ನೊಸಲ ವಿಭೂತಿಯೆ ಶೃಂಗಾರ.

Basavanna-Vachanagalu-In-Kannada
Basavanna Vachanagalu In Kannada

ಎನ್ನ ಮನದಲ್ಲಿ ಮತ್ತೊಂದನರಿಯೆನಯ್ಯಾ,
ಓಂ ನಮಃ ಶಿವಾಯ, ಓಂ ನಮಃ ಶಿವಾಯ
ಎನಗಿದೆ ಮಂತ್ರ, ಇದೇ ಜಪ.
ಕೂಡಲಸಂಗಮದೇವಾ ನೀನೆ ಬಲ್ಲೆ, ಎಲೆ ಲಿಂಗವೆ.

ಗಂಡನ ಮೇಲೆ ಸ್ನೇಹವಿಲ್ಲದ ಹೆಂಡತಿ,
ಲಿಂಗದ ಮೇಲೆ ನಿಷ್ಠೆಯಿಲ್ಲದ ಭಕ್ತ,
ಇದ್ದಡೇನೊ ಶಿವ ಶಿವಾ ಹೋದಡೇನೊ
ಕೂಡಲಸಂಗಮದೇವಯ್ಯಾ
ಊಡದ ಆವಿಂಗೆ ಉಣ್ಣದ ಕರುವ ಬಿಟ್ಟಂತೆ.

ಸಾರ: ಸಜ್ಜನರ ಸಂಗವ ಮಾಡೂದು,
ದೂರ ದುರ್ಜನರ ಸಂಗ ಬೇಡವಯ್ಯಾ.
ಆವ ಹಾವಾದಡೇನು:ವಿಷವೊಂದೆ,
ಅಂತವರ ಸಂಗ ಬೇಡವಯ್ಯಾ.
ಅಂತರಂಗ ಶುದ್ಧವಿಲ್ಲದವರ ಸಂಗವು
ಸಿಂಗಿ, ಕಾಳಕೂಟ ವಿಷವೊ, ಕೂಡಲಸಂಗಯ್ಯಾ.

ಸಾರ ಸಜ್ಜನರ ಸಂಗ ಲೇಸು ಕಂಡಯ್ಯಾ,
ದೂರ ದುರ್ಜನರ ಸಂಗವದು ಭಂಗವಯ್ಯಾ.
ಸಂಗವೆರಡುಂಟು:ಒಂದ ಹಿಡಿ, ಒಂದ ಬಿಡು,
ಮಂಗಳಮೂರ್ತಿ ನಮ್ಮ ಕೂಡಲಸಂಗನ ಶರಣರ.

ತುಪ್ಪದ ಸವಿಗೆ ಅಲಗ ನೆಕ್ಕುವ
ಸೊಣಗನಂತೆನ್ನ ಬಾಳುವೆ
ಸಂಸಾರಸಂಗವ ಬಿಡದು ನೋಡೆನ್ನ ಮನವು.
ಈ ನಾಯಿತನವ ಮಾಣಿಸು
ಕೂಡಲಸಂಗಮದೇವಯ್ಯ ನಿಮ್ಮ ಧರ್ಮ.

ವಚನದ ಹುಸಿ-ನುಸುಳೆಂತು ಮಾಬುದೆನ್ನ.
ಮನದ ಮರ್ಕಟತನವೆಂತು ಮಾಬುದೆನ್ನ.
ಹೃದಯದ ಕಲ್ಮಷವೆಂತು ಮಾಬುದೆನ್ನ.
ಕಾಯವಿಕಾರಕ್ಕೆ ತರಿಸಲುವೋದೆನು.
ಎನಗಿದು ವಿಧಿಯೇ, ಕೂಡಲಸಂಗಮದೇವ.

ವಿಕಳನಾದೆನು ಪಂಚೇಂದ್ರಿಯಧಾತುವಿಂದ.
ಮತಿಗೆಟ್ಟನು ಮನದ ವಿಕಾರದಿಂದ.
ಧೃತಿಗೆಟ್ಟೆನು ಕಾಯವಿಕಾರದಿಂದ.
ಶರಣುವೊಕ್ಕೆನು ಕೂಡಲಸಂಗಮದೇವಯ್ಯ
ಎನ್ನುವನು ಕಾಯಯ್ಯ.

ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ,
ತಿಳಿಯಲೀಯದು; ಎಚ್ಚರಲೀಯದು.
ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯ ಲಿಂಗತಂದೆ.
ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವ.

ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ.
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ, ಮನೆಯೊಳಗೆ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿಲ್ಲ.
ತನುವಿನಲಿ ಹುಸಿ ತುಂಬಿ, ಮನದಲ್ಲಿ ವಿಷಯ ತುಂಬಿ ಮನೆಯೊಳಗೆ ಮನೆಯೊಡೆಯನಿಲ್ಲ.
ಕೂಡಲಸಂಗಮದೇವ.

Basavanna-Vachanagalu-In-Kannada
Basavanna Vachanagalu In Kannada

ನೀ ಹುಟ್ಟಿಸಿದಲ್ಲಿ ಹುಟ್ಟಿ, ನೀ ಕೊಂದಲ್ಲಿ ಸಾಯದೆ ಎನ್ನ ವಶವೇ ಅಯ್ಯ.
ನೀನಿರಿಸಿದಲ್ಲಿ ಇರದೆ ಎನ್ನ ವಶವೇ ಅಯ್ಯ.
ಅಕಟಕಟಾ ಎನ್ನವನೆನ್ನವನೆನ್ನಯ್ಯ ಕೂಡಲಸಂಗಮದೇವಯ್ಯ.

ಸಾರ ಸಜ್ಜನರ ಸಂಗ ಲೇಸು ಕಂಡಯ್ಯಾ,
ದೂರ ದುರ್ಜನರ ಸಂಗವದು ಭಂಗವಯ್ಯಾ.
ಸಂಗವೆರಡುಂಟು:ಒಂದ ಹಿಡಿ, ಒಂದ ಬಿಡು,
ಮಂಗಳಮೂರ್ತಿ ನಮ್ಮ ಕೂಡಲಸಂಗನ ಶರಣರ.

ನಾದಪ್ರಿಯ ಶಿವನೆಂಬರು, ನಾದಪ್ರಿಯ ಶಿವನಲ್ಲಯ್ಯಾ.
ವೇದಪ್ರಿಯ ಶಿವನೆಂಬರು, ವೇದಪ್ರಿಯ ಶಿವನಲ್ಲಯ್ಯಾ.
ನಾದವ ನುಡಿಸಿದ ರಾವಳಂಗೆ ಅರೆ ಆಯುಷ್ಯವಾುತ್ತು.
ವೇದವನೋದಿದ ಬ್ರಹ್ಮನ ಶಿರ ಹೋಯಿತ್ತು.
ನಾದಪ್ರಿಯನೂ ಅಲ್ಲ, ವೇದಪ್ರಿಯನೂ ಅಲ್ಲ,
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ.

ಕಲ್ಲ ನಾಗರ ಕಂಡಡೆ ಹಾಲನೆರೆಯೆಂಬರು
ದಿಟದ ನಾಗರ ಕಂಡಡೆ ಕೊಲ್ಲೆಂಬರಯ್ಯಾ
ಉಂಬ ಜಂಗಮ ಬಂದಡೆ ನಡೆಯೆಂಬರು,
ಉಣ್ಣದ ಲಿಂಗಕ್ಕೆ ಬೋನವ ಹಿಡಿಯೆಂಬರಯ್ಯಾ.
ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದಡೆ,
ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯಾ.

ತನುವ ಕೊಟ್ಟು ಗುರುವನೊಲಿಸಬೇಕು,
ಮನವ ಕೊಟ್ಟು ಲಿಂಗವನೊಲಿಸಬೇಕು,
ಧನವ ಕೊಟ್ಟು ಜಂಗಮವನೊಲಿಸಬೇಕು.
ಈ ತ್ರಿವಿಧವ ಹೊರಗು ಮಾಡಿ,
ಹರೆಯ ಹೊುಸಿ, ಕುರುಹ ಪೂಜಿಸುವ ಗೊರವರ ಮೆಚ್ಚ
ಕೂಡಲಸಂಗಮದೇವ.

ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ,
ನೀಡಿ ನೀಡಿ ಕೆಟ್ಟರು ನಿಜವಿಲ್ಲದೆ.
ಮಾಡುವ ನೀಡುವ ನಿಜಗುಣವುಳ್ಳಡೆ
ಕೂಡಿಕೊಂಬ ನಮ್ಮ ಕೂಡಲಸಂಗಮದೇವ.

ಮಾಡಿದೆನೆಂಬುದು ಮನದಲ್ಲಿ ಹೊಳೆದಡೆ,
ಏಡಿಸಿ ಕಾಡಿತ್ತು ಶಿವನ ಡಂಗುರ,
ಮಾಡಿದೆನೆನ್ನದಿರಾ ಲಿಂಗಕ್ಕೆ, ಮಾಡಿದೆನೆನ್ನದಿರಾ ಜಂಗಮಕ್ಕೆ,
ಮಾಡಿದೆನೆಂಬುದು ಮನದಲಿಲದಿದ್ದಡೆ,
ಬೇಡಿತ್ತನೀವನು ಕೂಡಲಸಂಗಮದೇವ.

ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ,
ತಿಳಿಯಲೀಯದು; ಎಚ್ಚರಲೀಯದು.
ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯ ಲಿಂಗತಂದೆ.
ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವ.

ಹಬ್ಬಕ್ಕೆ ತಂದ ಹರಕೆಯ ಕುರಿ
ತೋರಣಕ್ಕೆ ತಂದ ತಳಿರ ಮೇಯಿತ್ತು.
ಕೊಂದಹರೆಂಬುದನರಿಯದೆ ಬೆಂದೊಡಲ ಹೊರೆಯ ಹೋಯಿತ್ತು.
ಅದಂದೆ ಹುಟ್ಟಿತು, ಅದಂದೆ ಹೊಂದಿತ್ತು.
ಕೊಂದವರುಳಿದರೆ ಕೂಡಲಸಂಗಮದೇವ

ಗಂಡ ಶಿವಲಿಂಗದೇವರ ಭಕ್ತ,
ಹೆಂಡತಿ ಮಾರಿಮಸಣಿಯ ಭಕ್ತೆ;
ಗಂಡ ಕೊಂಬುದು ಪಾದೋದಕಪ್ರಸಾದ,
ಹೆಂಡತಿ ಕೊಂಬುದು ಸುರೆಮಾಂಸ.
ಭಾಂಡ-ಭಾಜನ ಶುದ್ಧವಿಲ್ಲದವರ ಭಕ್ತಿ
ಹೆಂಡದ ಮಡಕೆಯ ಹೊರಗೆ ತೊಳೆದಂತೆ
ಕೂಡಲಸಂಗಮದೇವ.

ನೀನೊಲಿದರೆ ಕೊರಡು ಕೊನರುವುದಯ್ಯ.
ನೀನೊಲಿದರೆ ಬರಡು ಹಯನಹುದಯ್ಯ.
ನೀನೊಲಿದರೆ ವಿಷವಮೃತವಹುದಯ್ಯ.
ನೀನೊಲಿದರೆ ಸಕಲ ಪಡಿಪದಾರ್ಥ ಇದಿರಲಿಪ್ಪವು
ಕೂಡಲಸಂಗಮದೇವ.

ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ,
ಮುನಿಯಬೇಡ, ಅನ್ಯರಿಗೆ ಅಸಹ್ಯಬಡಬೇಡ,
ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ.
ಇದೇ ಅಂತರಂಗಶುದ್ಧಿ, ಇದೇ ಬಹಿರಂಗಶುದ್ಧಿ
ಇದೇ ನಮ್ಮ ಕೂಡಲಸಂಗಮದೇವರನೊಲಿಸುವ ಪರಿ.

ಕಂಡ ಭಕ್ತರಿಗೆ ಕೈಮುಗಿಯುವಾತನೆ ಭಕ್ತ,
ಮೃದುವಚನವೆ ಸಕಲ ಜಪಂಗಳಯ್ಯಾ,
ಮೃದುವಚನವೆ ಸಕಲ ತಪಂಗಳಯ್ಯಾ,
ಸದುವಿನಯವೆ ಸದಾಶಿವನ ಒಲುಮೆಯಯ್ಯಾ.
ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ.

ದೇವಲೋಕ ಮತ್ರ್ಯಲೋಕವೆಂಬುದು ಬೇರಿಲ್ಲ ಕಾಣಿರೋ !
ಸತ್ಯವ ನುಡಿವುದೇ ದೇವಲೋಕ, ಮಿಥ್ಯವ ನುಡಿವುದೇ ಮತ್ರ್ಯಲೋಕ.
ಆಚಾರವೆ ಸ್ವರ್ಗ, ಅನಾಚಾರವೆ ನರಕ. ಕೂಡಲಸಂಗಮದೇವಾ, ನೀವೆ ಪ್ರಮಾಣು.

Basavanna-Vachanagalu-In-Kannada
Basavanna Vachanagalu In Kannada

ದಯವಿಲ್ಲದ ಧರ್ಮವದೇವುದಯ್ಯಾ
ದಯವೇ ಬೇಕು ಸರ್ವಪ್ರಾಣಿಗಳೆಲ್ಲರಲ್ಲಿ.
ದಯವೇ ಧರ್ಮದ ಮೂಲವಯ್ಯಾ,
ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ.

ತನಗೆ ಮುನಿವರಿಗೆ ತಾ ಮುನಿಯಲೇಕಯ್ಯಾ
ತನಗಾದ ಆಗೇನು ಅವರಿಗಾದ ಚೇಗೆಯೇನು
ತನುವಿನ ಕೋಪ ತನ್ನ ಹಿರಿಯತನದ ಕೇಡು.
ಮನದ ಕೋಪ ತನ್ನ ಅರಿವಿನ ಕೇಡು.
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ.

ಧೃತಿಗೆಟ್ಟು ಅನ್ಯರ ಬೇಡದಂತೆ,
ಮತಿಗೆಟ್ಟು ಪರರುವ ಹೊಗಳದಂತೆ,
ಪರಸತಿಯರ ರತಿಗೆ ಮನ ಹಾರದಂತೆ,
ಶಿವಪಥವೊಲ್ಲದವರೊಡನಾಡದಂತೆ,
ಅನ್ಯಜಾತಿಯ ಸಂಗವ ಮಾಡದಂತೆ,
ಎನ್ನ ಪ್ರತಿಪಾಲಿಸು, ಕೂಡಲಸಂಗಮದೇವಾ.

ಕಾಮವ ತೊರೆದಾತ, ಹೇಮವ ಜರೆದಾತ,
ಭಾನುವಿನ ಉದಯಕ್ಕೆ ಒಳಗಾಗದ ಶರಣನು.
ಆಗಳೂ ನಿಮ್ಮ ಮಾಣದೆ ನೆನೆವರ ಮನೆಯಲು ಶ್ವಾನನಾಗಿರಿಸು,
ಮಹಾದಾನಿ ಕೂಡಲಸಂಗಮದೇವಾ.

ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ,
ಅಂಬುಜಕೆ ಭಾನುವಿನ ಉದಯದ ಚಿಂತೆ,
ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ,
ಎನಗೆ ನಮ್ಮ ಕೂಡಲಸಂಗನ ಶರಣರ ನೆನೆವುದೆ ಚಿಂತೆ.

ಭಕ್ತಿಯೆಂಬ ಪೃಥ್ವಿಯ ಮೇಲೆ, ಗುರುವೆಂಬಬೀಜವಂಕುರಿಸಿ,
ಲಿಂಗವೆಂಬ ಎಲೆಯಾುತ್ತು.
ಲಿಂಗವೆಂಬ ಎಲೆಯ ಮೇಲೆ
ವಿಚಾರವೆಂಬ ಹೂವಾುತ್ತು,
ಆಚಾರವೆಂಬ ಕಾಯಾುತ್ತು.
ನಿಷ್ಪತ್ತಿಯೆಂಬ ಹಣ್ಣು ತೊಟ್ಟು ಬಿಟ್ಟು ಕಳಚಿ ಬೀಳುವಲ್ಲಿ
ಕೂಡಲಸಂಗಮದೇವ ತನಗೆ ಬೇಕೆಂದು ಎತ್ತಿಕೊಂಡ.

ನೀರ ಕಂಡಲ್ಲಿ ಮುಳುಗುವರಯ್ಯಾ,
ಮರನ ಕಂಡಲ್ಲಿ ಸುತ್ತುವರಯ್ಯಾ.
ಬತ್ತುವ ಜಲವ, ಒಣಗುವ ಮರನ
ಮಚ್ಚಿದವರು ನಿಮ್ಮನೆತ್ತ ಬಲ್ಲರು
ಕೂಡಲಸಂಗಮದೇವಾ.

ನೀರಿಂಗೆ ನೈದಿಲೇ ಶೃಂಗಾರ,
ಊರಿಂಗೆ ಆರವೆಯೇ ಶೃಂಗಾರ,
ಸಮುದ್ರಕ್ಕೆ ತೆರೆಯೇ ಶೃಂಗಾರ
ನಾರಿಗೆ ಗುಣವೇ ಶೃಂಗಾರ
ಗಗನಕ್ಕೆ ಚಂದ್ರಮನೇ ಶೃಂಗಾರ
ನಮ್ಮ ಕೂಡಲಸಂಗನ ಶರಣರಿಗೆ ನೊಸಲ ವಿಭೂತಿಯೇ ಶೃಂಗಾರ.

ಕರಿಯಂಜುವುದು ಅಂಕುಶಕ್ಕಯ್ಯ.
ಗಿರಿಯಂಜುವುದು ಕುಲಿಶಕ್ಕಯ್ಯ.
ತಮಂಧವಂಜುವುದು ಜ್ಯೋತಿಗಯ್ಯ.
ಕಾನನವಂಜುವುದು ಬೇಗೆಗಯ್ಯ.
ಪಂಚಮಹಾಪಾತಕವಂಜುವುದು
ನಮ್ಮ ಕೂಡಲಸಂಗನ ನಾಮಕ್ಕಯ್ಯ.

Basavanna-Vachanagalu-In-Kannada
Basavanna Vachanagalu In Kannada

ನರವಿಂಧ್ಯದೊಳಗೆನ್ನ ಹುಲುಗಿಳಿಯ ಮಾಡಿ
ಸಲಹುತ್ತ, ‘ಶಿವಶಿವಾ’ ಎಂದೋದಿಸಯ್ಯ.
ಭಕ್ತಿ ಎಂಬ ಪಂಜರದೊಳಗಿಕ್ಕಿ ಸಲಹು ಕೂಡಲಸಂಗಮದೇವ.

ಭಕ್ತರ ಕಂಡರೆ ಬೋಳಪ್ಪಿರಯ್ಯ;
ಸವಣರ ಕಂಡರೆ ಬತ್ತಲೆಯಪ್ಪಿರಯ್ಯ
ಹಾರುವರ ಕಂಡರೆ ಹರಿನಾಮವೆಂಬಿರಯ್ಯ;
ಅವರವರ ಕಂಡರೆ ಅವರವರಂತೆ
ಸೂಳೆಗೆ ಹುಟ್ಟಿದವರ ತೋರದಿರಯ್ಯ.
ಕೂಡಲಸಂಗಯ್ಯನ ಪೂಜಿಸಿ ಅನ್ಯದೈವಂಗಳಿಗೆರಗಿ
ಭಕ್ತರೆನಿಸಿಕೊಂಬ ಅಜ್ಞಾನಿಗಳ ನಾನೇನೆಂಬೆನಯ್ಯ.

ಹಾವಿನ ಬಾಯಿ ಕಪ್ಪೆ ಹಸಿದು
ತಾ ಹಾರುವ ನೊಣಕಾಸೆ ಮಾಡುವಂತೆ,
ಶೂಲವನೇರುವ ಕಳ್ಳ ಹಾಲು ತುಪ್ಪವ ಕುಡಿದು
ಮೇಲಿನ್ನೇಸು ಕಾಲ ಬದುಕುವನೋ.
ಕೆಡುವೊಡಲ ನೆಚ್ಚಿ, ಕಡುಹುಸಿಯನೆ ಹುಸಿದು
ಒಡಲ ಹೊರೆವವರ ಮೆಚ್ಚ ನಮ್ಮ ಕೂಡಲಸಂಗಮದೇವ.

Basavanna Story

ಬಸವಣ್ಣ 12 ನೇ ಶತಮಾನದ ಭಾರತೀಯ ರಾಜಕಾರಣಿ, ದಾರ್ಶನಿಕ, ಕವಿ, ಶಿವ-ಕೇಂದ್ರಿತ ಭಕ್ತಿ ಚಳವಳಿಯಲ್ಲಿ ಲಿಂಗಾಯತ ಸಂತ ಮತ್ತು ಕಲ್ಯಾಣಿ ಚಾಲುಕ್ಯ / ಕಲಾಚೂರಿ ರಾಜವಂಶದ ಆಳ್ವಿಕೆಯಲ್ಲಿ ಹಿಂದೂ ಶೈವ ಸಾಮಾಜಿಕ ಸುಧಾರಕರಾಗಿದ್ದರು. ಬಸವಣ್ಣ ಎರಡೂ ರಾಜವಂಶಗಳ ಆಳ್ವಿಕೆಯಲ್ಲಿ ಸಕ್ರಿಯರಾಗಿದ್ದರು ಆದರೆ ಭಾರತದ ಕರ್ನಾಟಕದಲ್ಲಿ ರಾಜ ಬಿಜ್ಜಲಾ II ರ ಆಳ್ವಿಕೆಯಲ್ಲಿ ಅವರ ಪ್ರಭಾವದ ಉತ್ತುಂಗವನ್ನು ತಲುಪಿದರು.

ಬಸವಣ್ಣ ಅವರು ತಮ್ಮ ಕಾವ್ಯದ ಮೂಲಕ ಸಾಮಾಜಿಕ ಜಾಗೃತಿಯನ್ನು ಹರಡಿದರು, ಇದನ್ನು ಜನಪ್ರಿಯವಾಗಿ ವಚನಾಸ್ ಎಂದು ಕರೆಯಲಾಗುತ್ತದೆ. ಬಸವಣ್ಣ ಅವರು ಲಿಂಗ ಅಥವಾ ಸಾಮಾಜಿಕ ತಾರತಮ್ಯ, ಮೂ st ನಂಬಿಕೆಗಳು ಮತ್ತು ಆಚರಣೆಗಳನ್ನು ತಿರಸ್ಕರಿಸಿದರು ಆದರೆ ಶಿವ ಲಿಗದ ಚಿತ್ರಣದೊಂದಿಗೆ ಇಶ್ತಲಿಂಗದ ಹಾರವನ್ನು ಪ್ರತಿಯೊಬ್ಬ ವ್ಯಕ್ತಿಯು ಅವನ ಅಥವಾ ಅವಳ ಜನ್ಮವನ್ನು ಲೆಕ್ಕಿಸದೆ, ಶಿವನಿಗೆ ಒಬ್ಬರ ಭಕ್ತಿಯ ನಿರಂತರ ಜ್ಞಾಪನೆಯಾಗಿ ಪರಿಚಯಿಸಿದರು. ತಮ್ಮ ಸಾಮ್ರಾಜ್ಯದ ಮುಖ್ಯಮಂತ್ರಿಯಾಗಿ, ಅವರು ಅನುವ ಮಂಟಪ (ಅಥವಾ, “ಆಧ್ಯಾತ್ಮಿಕ ಅನುಭವದ ಸಭಾಂಗಣ”) ನಂತಹ ಹೊಸ ಸಾರ್ವಜನಿಕ ಸಂಸ್ಥೆಗಳನ್ನು ಪರಿಚಯಿಸಿದರು, ಇದು ಜೀವನದ ಆಧ್ಯಾತ್ಮಿಕ ಮತ್ತು ಪ್ರಾಪಂಚಿಕ ಪ್ರಶ್ನೆಗಳನ್ನು ಚರ್ಚಿಸಲು ಎಲ್ಲಾ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ಪುರುಷರು ಮತ್ತು ಮಹಿಳೆಯರನ್ನು ಸ್ವಾಗತಿಸಿತು, ಮುಕ್ತವಾಗಿದೆ.

ಸಾಂಪ್ರದಾಯಿಕ ದಂತಕಥೆಗಳು ಮತ್ತು ಹ್ಯಾಗೋಗ್ರಾಫಿಕ್ ಗ್ರಂಥಗಳು ಬಸವವನ್ನು ಲಿಂಗಾಯತಗಳ ಸ್ಥಾಪಕ ಎಂದು ಹೇಳುತ್ತವೆ. ಆದಾಗ್ಯೂ, ಕಲಾಚೂರಿ ಶಾಸನಗಳಂತಹ ಐತಿಹಾಸಿಕ ಪುರಾವೆಗಳನ್ನು ಅವಲಂಬಿಸಿರುವ ಆಧುನಿಕ ವಿದ್ಯಾರ್ಥಿವೇತನವು ಈಗಾಗಲೇ ಅಸ್ತಿತ್ವದಲ್ಲಿರುವ ಸಂಪ್ರದಾಯವನ್ನು ಪುನರುಜ್ಜೀವನಗೊಳಿಸಿದ, ಪರಿಷ್ಕರಿಸಿದ ಮತ್ತು ಶಕ್ತಿಯುತವಾದ ಕವಿ ತತ್ವಜ್ಞಾನಿ ಬಸವ ಎಂದು ಹೇಳುತ್ತದೆ. ಕನ್ನಡ ಕವಿ ಹರಿಹರ ಬರೆದ ಬಸವರಾಜದೇವರ ರಾಗಲೆ ಸಾಮಾಜಿಕ ಸುಧಾರಕನ ಜೀವನದ ಆರಂಭಿಕ ಲಭ್ಯವಿರುವ ಖಾತೆಯಾಗಿದೆ ಮತ್ತು ಲೇಖಕನು ತನ್ನ ನಾಯಕನ ಸಮಕಾಲೀನನಾಗಿದ್ದರಿಂದ ಇದನ್ನು ಮುಖ್ಯವೆಂದು ಪರಿಗಣಿಸಲಾಗಿದೆ. 13 ನೇ ಶತಮಾನದ ಪವಿತ್ರ ತೆಲುಗು ಪಠ್ಯವಾದ ಪಲ್ಕುರಿಕಿ ಸೋಮನಾಥರ ಬಸವ ಪುರಾಣದಲ್ಲಿ ಬಸವನ ಜೀವನ ಮತ್ತು ವಿಚಾರಗಳ ಸಂಪೂರ್ಣ ವಿವರವನ್ನು ನಿರೂಪಿಸಲಾಗಿದೆ.

FAQs

Who are the parents of Basavanna?

ಮದಿರಾಜ ಮತ್ತು ಮಡಲಾಂಬಿಕೆ.

Who is the sister of Basavanna?

ಅಕ್ಕ ನಾಗಮ್ಮ

Where did Basavanna born?

ಬಸವನ ಬಾಗೇವಾಡಿ

Where did Basavanna die?

ಕುಡಲ ಸಂಗಮ

Who is the wife of Basavanna?

ಗಂಗಾಂಬಿಕೆ

Who is Kudala Sangama Deva?

ಭಾರತದಲ್ಲಿ ಕೂಡಲಸಂಗಮ ಲಿಂಗಾಯತರಿಗೆ ತೀರ್ಥಯಾತ್ರೆಯ ಪ್ರಮುಖ ಕೇಂದ್ರವಾಗಿದೆ. ಇದು ಕರ್ನಾಟಕ ರಾಜ್ಯದ ಬಾಗಲ್ಕೋಟ್ ಜಿಲ್ಲೆಯ ಅಲ್ಮಟ್ಟಿ ಅಣೆಕಟ್ಟಿನಿಂದ ಸುಮಾರು 15 ಕಿಲೋಮೀಟರ್ (9.3 ಮೈಲಿ) ದೂರದಲ್ಲಿದೆ.

 

Conclusion: We hope these Allama Prabhu Vachanagalu in Kannada will definitely inspire you to believe in yourself and your life. If you find these helpful, Please share this article with your friends and family. Thank You…

Related articles

Comments

You May Like

Newsletter

Subscribe to stay updated.

close
error: Content is protected !!