spot_img
spot_img

ರಾಜ್ಯಸಭಾ ಸದಸ್ಯರಾಗಿ ಡಾ. ವೀರೇಂದ್ರ ಹೆಗ್ಗಡೆ ಪ್ರಮಾಣ ವಚನ: ಸಂಸದ ಈರಣ್ಣ ಕಡಾಡಿ ಅಭಿನಂದನೆ

Must Read

ಮೂಡಲಗಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮೀಣಾಭಿವೃದ್ಧಿಯ ಹರಿಕಾರ ಪದ್ಮ ವಿಭೂಷಣ ಡಾ. ಡಿ. ವಿರೇಂದ್ರ ಹೆಗ್ಗಡೆಯವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಂಸತ್ ಭವನದಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಶ್ರದ್ದಾಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

ಗುರುವಾರ ಜು.21 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು, ಹೆಗ್ಗಡೆಯವರು ತಮ್ಮ 20 ನೇ ವಯಸ್ಸಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ಪೀಠವನ್ನೇರಿದ ಬಹುಮುಖ ಅಭಿರುಚಿಯುಳ್ಳ ಹೆಗ್ಗಡೆಯವರು ಧಾರ್ಮಿಕ, ಸಾಮಾಜಿಕ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಯುವ ಜನರಿಗೆ ಸ್ವ ಉದ್ಯೋಗ ರೂಪಿಸುವುದು, ಮಹಿಳೆಯರ ಸಬಲೀಕರಣ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಕೆಲಸವನ್ನು ಮಾಡುತ್ತಿದ್ದಾರೆ. ಧಾರ್ಮಿಕ ಕ್ಷೇತ್ರವನ್ನು ಸಮಾಜಮುಖಿಯನ್ನಾಗಿಸಿದ ಹೆಗ್ಗಳಿಕೆ ಅವರದು. ಧಾರ್ಮಿಕ ಶ್ರದ್ಧಾ ಕೇಂದ್ರವೊಂದನ್ನು ಹೇಗೆ ಸ್ವಚ್ಛ, ಶಿಸ್ತು ಹಾಗೂ ಅಚ್ಚುಕಟ್ಟಾಗಿಡಬಹುದೆಂಬುದಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನ ಒಂದು ಮಾದರಿ. ದೇಶದ ವಿವಿಧ ಭಾಗಗಳಿಂದ ಪ್ರತಿ ದಿನ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿ ಕೊಡುತ್ತಾರೆ. ವಿಶೇಷ ರಜಾದಿನಗಳು ಹಾಗೂ ವಾರಾಂತ್ಯಗಳಲ್ಲಂತೂ 40-50 ಸಾವಿರಕ್ಕಿಂತಲೂ ಹೆಚ್ಚು ಭಕ್ತಾದಿಗಳು ಭೇಟಿಕೊಡುತ್ತಾರೆ. ಆದರೆ ದೇವಸ್ಥಾನದ ಪರಿಸರ, ಊಟದ ಹಾಲ್, ಅಡುಗೆ ಮನೆ, ಶೌಚಾಲಯ, ರಸ್ತೆ, ಲಾಡ್ಜ್ ಎಲ್ಲವನ್ನೂ ಅತ್ಯಂತ ಶುಚಿಯಾಗಿಡಲಾಗಿದೆ ದೇಶದ ಅತ್ಯಂತ ಶುಚಿಯಾದ ಧಾರ್ಮಿಕ ಕ್ಷೇತ್ರವೆಂದು ಗುರುತಿಸಲ್ಪಟ್ಟಿದೆ ಎಂದರು.

ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಸ್ತುತ ಸುಮಾರು 7 ಲಕ್ಷ ಸ್ವಸಹಾಯ ಗುಂಪುಗಳು ಕಾರ್ಯಾಚರಿಸುತ್ತಿವೆ ಹಾಗೂ 50,05,809 ಸದಸ್ಯರಿದ್ದಾರೆ. ಯೋಜನೆಯಡಿಯಲ್ಲಿ ಆರ್ಥಿಕ ನೆರವನ್ನು ಪಡೆದ ಲಕ್ಷಾಂತರ ಸದಸ್ಯರು ಹೈನುಗಾರಿಕೆ, ಕೃಷಿ ಅಭಿವೃದ್ಧಿ, ಮಲ್ಲಿಗೆ ಕೃಷಿ, ಬಯೋಗ್ಯಾಸ್, ವ್ಯಾಪಾರ ವಹಿವಾಟು ಗಳನ್ನು ನಡೆಸಿ ಆರ್ಥಿಕ ಅಭಿವೃದ್ಧಿಯನ್ನು ಕಂಡಿದ್ದಾರೆ. ವಿಮುಕ್ತಿ ಕಾರ್ಯಕ್ರಮದಡಿಯಲ್ಲಿ ಇದುವರೆಗೆ 1550 ಕುಡಿತ ನಿವಾರಣಾ ಕ್ಯಾಂಪುಗಳನ್ನು ಹಮ್ಮಿಕೊಳ್ಳಲಾಗಿದ್ದು ಸಾವಿರಾರು ಮಂದಿಯನ್ನು ಕುಡಿತದ ದುಶ್ಚಟದಿಂದ ಮುಕ್ತರನ್ನಾಗಿಸಲಾಗಿದೆ. ಅವರಿಗೆ ಸಮಾಜದಲ್ಲಿ ಗೌರವಯುತವಾಗಿ ಬದುಕುವ ಅವಕಾಶವನ್ನು ಕಲ್ಪಿಸಲಾಗಿದೆ. ಹೀಗೆ ಸಮಾಜ ಸೇವೆ, ಗ್ರಾಮೀಣಾಭಿವೃದ್ಧಿ, ಕೌಶಲ್ಯಾಭಿವೃದ್ಧಿ, ಮಹಿಳಾ ಸಬಲೀಕರಣ, ಶಿಕ್ಷಣ ಮೊದಲಾದ ಕ್ಷೇತ್ರಗಳಲ್ಲಿ ಅವರು ಗಳಿಸಿರುವ ಅನುಭವವು ರಾಷ್ಟ್ರಕ್ಕೆ ಮಾರ್ಗದರ್ಶಿಯಾಗಲಿ ಎಂದು ಸಂಸದ ಈರಣ್ಣ ಕಡಾಡಿ ಅವರು ಸಂತಸ ವ್ಯಕ್ತಪಡಿಸಿ ಶುಭ ಕೋರಿದರು.

ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ, ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಸಂಸ್ಕøತಿ ಖಾತೆ ರಾಜ್ಯ ಸಚಿವ ಅರ್ಜುನ್ ಮೇಘ್ವಾಲ್, ರಾಜ್ಯಸಭಾ ಸಂಸದ ಡಾ. ಕೆ. ನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

- Advertisement -
- Advertisement -

Latest News

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಸಿಂದಗಿ: ಪಟ್ಟಣದ ಭೀಮಾಶಂಕರ ಮಠದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಮಾಡಲಾಯಿತು. ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಕೊಗಟನೂರ ಪೂಜ್ಯಶ್ರೀ...
- Advertisement -

More Articles Like This

- Advertisement -
close
error: Content is protected !!