spot_img
spot_img

ಸರಕಾರಕ್ಕೆ ಎಚ್ಚರಿಕೆ ನೀಡಿದ ಬೇಡ ಜಂಗಮರು

Must Read

spot_img

ಬೀದರ – ಬೇಡ ಜಂಗಮರ ಅಧ್ಯಕ್ಷ ಬಿ ಡಿ ಹಿರೇಮಠ ಅವರನ್ನು ಬೆಂಗಳೂರು ಪೋಲಿಸರು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಬೀದರ್ ನಲ್ಲಿ ಬೇಡ ಜಂಗಮ ಮುಖಂಡರು ಪ್ರತಿಭಟನೆ ನಡೆಸಿದರು.

ಇತ್ತೀಚೆಗೆ ಬೇಡ ಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡಬೇಕೆಂಬ ಅವರ ಹೋರಾಟ ತೀವ್ರತೆ ಪಡೆದುಕೊಂಡಿದ್ದು ರಾಜ್ಯದಲ್ಲಿ ಹಲವು ತಿರುವುಗಳಿಗೆ ಕಾರಣವಾಗಿದೆ.

ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಬೇಡ ಜಂಗಮ ನಾಯಕ ಮಲ್ಲಿಕಾರ್ಜುನ ಸ್ವಾಮಿ, ಬೇಡ ಜಂಗಮ ಪ್ರಮಾಣ ಪತ್ರ ನೀಡುವಲ್ಲಿ ತಾರತಮ್ಯ ಹಾಗೂ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು..

೫.೭.೨೨ ರಂದು ನಮ್ಮ ಬೇಡ ಜಂಗಮರು ಸಂಘಟನೆ ಒಕ್ಕೂಟದ ಅಧ್ಯಕ್ಷ ಬಿ ಡಿ ಹಿರೇಮಠ ಹಾಗೂ ಮುಖಂಡರು ಮುಖ್ಯ ಮಂತ್ರಿ ನಿವಾಸಕ್ಕೆ ಮನವಿ ಪತ್ರ ಸಲ್ಲಿಸಲು ಹೊಗುವ ಸಂದರ್ಭದಲ್ಲಿ ಪೋಲಿಸರು ತಡೆದು ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಅವರು ಆರೋಪಿಸಿದರು.

ನಮಗೆ ಸಂವಿಧಾನ ಬದ್ಧವಾದ ಹಕ್ಕು ನೀಡಬೇಕು. ಕೋರ್ಟ್ ಆದೇಶದಂತೆ ನಮಗೆ ಬೇಡ ಜಂಗಮ ಪ್ರಮಾಣ ಪತ್ರ ನೀಡಲೇಬೇಕು ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಮುಖ್ಯಮಂತ್ರಿಗಳ ನಿವಾಸಕ್ಕೂ ನಾವು ಮುತ್ತಿಗೆ ಹಾಕುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.

ಭಾಲ್ಕಿ ತಾಲ್ಲೂಕಿನ ತಹಶಿಲ್ದಾರರ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಬೇಡ ಜಂಗಮರು ತಹಶಿಲ್ದಾರರ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಸಾಹಿತ್ಯ ಕ್ಷೇತ್ರದಲ್ಲಿ ರಶ್ಮಿಯಾಗಿ ಹೊಳೆದ ವಿ.ಕೃ.ಗೋಕಾಕ್!

ಬೇರೆಯವರ ಮೇಲೆ ಅವಲಂಬಿತವಾದ ಬದುಕು, ಸಾಧನೆ “ಮರವನ್ನು ಆಶ್ರಯಿಸಿ ಬೆಳೆದ ಬಳ್ಳಿಯಂತೆ” ಆಶ್ರಯ ತಪ್ಪಿದಾಗ ಅದು ನೆಲಕಚ್ಚುವುದು ಎಂದವರು ವಿನಾಯಕ ಕೃಷ್ಣ ಗೋಕಾಕ್ (ವಿ.ಕೃ.ಗೋಕಾಕ್). ಕನ್ನಡಕ್ಕೆ...
- Advertisement -

More Articles Like This

- Advertisement -
close
error: Content is protected !!