ಬೀದರ– ಗಡಿ ಜಿಲ್ಲೆಯಲ್ಲಿ ಅಕಾಲಿಕವಾಗಿ ಸುರಿದ ಭಾರಿ ಮಳೆಗೆ ಅನಾಹುತ ಸಂಭವಿಸಿದ್ದು ಮಳೆಯಿಂದ ದೊಡ್ಡ ಗಾತ್ರದ ಮರವೊಂದು ಕಾರಿನ ಮೇಲೆ ಹಾಗೂ ಇನ್ನೊಂದು ಮರ ಆಟೋರಿಕ್ಷಾದ ಮೇಲೆ ಬಿದ್ದು ಅವಾಂತರ ಸೃಷ್ಟಿಯಾಗಿದೆ.
ಬೀದರ್ ತಾಲ್ಲೂಕಿನ ಯರನ್ನಳಿ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಬೀದರ್ ಜಿಲ್ಲಾದ್ಯಂತ ಕೂಡ ಸುರಿದ ಭಾರೀ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ ಸುಮಾರು ಒಂದು ಗಂಟೆ ಯಿಂದ ನಿರಂತರ ಸುರಿದ ಭಾರೀ ಮಳೆಗೆ ಬೀದರ್ ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದವು.
ವರದಿ: ನಂದಕುಮಾರ ಕರಂಜೆ, ಬೀದರ