- Advertisement -
ಮೂಡಲಗಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಬೆಳಗಾವಿ ವಿಮಾನ ನಿಲ್ದಾಣದ ನವೀಕರಣಕ್ಕಾಗಿ ರೂ.230 ಕೋಟಿ ರೂಪಾಯಿಗಳ ಯೋಜನಾ ವರದಿ ತಯಾರಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಟೆಂಡರ್ ಪ್ರಕ್ರಿಯೆ ಜಾರಿಗೊಳಿಸಲಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.
ರವಿವಾರ ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಪ್ರಯಾಣಿಕರ ಟರ್ಮಿನಲ್ ಕಟ್ಟಡದ ವಿಸ್ತರಣೆ, ಮೂರು ಏರೋಬ್ರಿಡ್ಜ್‌ಗಳು ಹಾಗೂ ಏರೋ ಕ್ರಾಫ್ಟ್ ನಿಲ್ದಾಣ, ವಾಹನ ಪಾರ್ಕಿಂಗ್ ಹೀಗೆ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ. ಕೇವಲ 36 ತಿಂಗಳಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ಬಂಧ ವಿಧಿಸಲಾಗಿದೆ ಎಂದರು
ಬೆಳಗಾವಿ ವಿಮಾನ ನಿಲ್ದಾಣ ವಿಸ್ತರಣೆ ನಿರ್ಣಯ ಕೈಗೊಂಡ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಅನಂತ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.