Belagavi: ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸೂಚನೆ

Must Read

ಬೆಳಗಾವಿ – ಜಿಲ್ಲಾ ಪಂಚಾಯತ ಬೆಳಗಾವಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ವಿಭಾಗ , ರೂರಲ್ ಡೆವಲಪಮೆಂಟ್ ಸೊಸೈಟಿ ಸಂಸ್ಥೆ ಮುರಗೋಡ, ಇವರ ಸಹಯೋಗದೊಂದಿಗೆ ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ಮಾಹಿತಿ ಶಿಕ್ಷಣ ಸಂವಹನ ಹಾಗೂ ಮಾನವ ಸಂಪನ್ಮೂಲಗಳ ಅಭಿವೃದ್ಧಿ ಕಾರ್ಯಗಳ ಅಡಿಯಲ್ಲಿ ಗುರುವಾರ ದಿನಾಂಕ 22 ರಂದು ಚಿಕ್ಕೋಡಿ ವಿಭಾಗದ 8 ತಾಲೂಕುಗಳಾದ ಹುಕ್ಕೇರಿ, ನಿಪ್ಪಾಣಿ, ಚಿಕ್ಕೋಡಿ, ಕಾಗವಾಡ,ಅಥಣಿ, ರಾಯಭಾಗ, ಗೋಕಾಕ, ಮೂಡಲಗಿ ಪಂಚಾಯತಗಳ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು ಗಳಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪೂರ ಮತ್ತು ನಿಡಸೋಶಿ ಗ್ರಾಮ ಪಂಚಾಯಿತಿಗಳಿಗೆ ಶೈಕ್ಷಣಿಕ ಅಧ್ಯಯನ ಪ್ರವಾಸ ಕೈಗೊಳ್ಳಲಾಯಿತು.

ಹರಗಾಪೂರ ಗ್ರಾಮದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿರುವ ಜಲ ಜೀವನ್ ಮಿಷನ ಯೋಜನೆಯನ್ನು ವೀಕ್ಷಿಸಲಾಯಿತು ಹಾಗೇ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಲಾಯಿತು. ನಂತರ ನಿಡಸೋಶಿ ಗ್ರಾಮಕ್ಕೆ ಭೇಟಿ ನೀಡಿ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ವೀಕ್ಷಿಸಿಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ಹರ್ಷಲ್ ಭೋಯರ್  ಮುಖ್ಯ ಕಾಯ೯ ನಿವಾ೯ಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಬೆಳಗಾವಿ ಇವರು ಮಾತನಾಡಿ, ಗ್ರಾಮೀಣ ಪ್ರದೇಶದ ಮನೆಗಳಲ್ಲಿ ಸುರಕ್ಷಿತ ಕುಡಿಯುವ ನೀರು ಒದಗಿಸುವುದು ಗ್ರಾಮ ಪಂಚಾಯಿತಿ ಮತ್ತು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿಗಳ ಜವಾಬ್ದಾರಿವಾಗಿರುತ್ತದೆ. ಈ ಸಂದರ್ಭದಲ್ಲಿ ಯಾವುದೇ ಗ್ರಾಮದಲ್ಲಿ ಕೂಡ ನೀರಿನ ಸಮಸ್ಯೆಗಳು ಉದ್ಭವಿಸದಂತೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.  

ಮುಖ್ಯ ಅತಿಥಿಗಳಾದ ಎ ಎಸ್ ಬಣಗಾರ ಕಾಯ೯ನಿವಾ೯ಹಕ ಅಧಿಕಾರಿಗಳು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ವಿಭಾಗ ಮತ್ತು ಉಮೇಶ ಸಿದ್ನಾಳ EO ಹುಕ್ಕೇರಿ ತಾಲೂಕು, ವಿಜಯ ಮಿಶ್ರೀಕೊಟಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹುಕ್ಕೇರಿ ಮತ್ತು ದೀಪಕ್ ಕಾಂಬಳೆ ಜಿಲ್ಲಾ ಯೋಜನಾ ವ್ಯವಸ್ಥಾಪಕರು.

ಚಿಕ್ಕೋಡಿ ವಿಭಾಗ ಮತ್ತು ಶಾಖಾ ಅಧಿಕಾರಿಗಳು, ತಂಡದ ನಾಯಕರು ಮತ್ತು ಸಿಬ್ಬಂದಿ ವರ್ಗದವರು ಎಲ್ಲಾ ತಾಲೂಕಿನ ಆಯ್ದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Latest News

ಮಾಚಿದೇವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು

ಮಡಿವಾಳ ಮಾಚಿದೇವರ ಜಯಂತಿ ಸಿಂದಗಿ; ಹನ್ನೆರಡನೆಯ ಶತಮಾನದಲ್ಲಿಯೇ ಸಮಾಜದ ಏಳ್ಗೆಗಾಗಿ ಸಮಾನತೆಯನ್ನು ಬಯಸಿದ ಶರಣ ಮಡಿವಾಳ ಮಾಚಿದೇವರ ಜೀವನ ಚರಿತ್ರೆ ಬಹಳ ಅರ್ಥ ಪೂರ್ಣವಾಗಿದೆ ಅವರ ವಚನಗಳನ್ನು...

More Articles Like This

error: Content is protected !!
Join WhatsApp Group