- Advertisement -
ಬೆಳಗಾವಿ: ದೆಹಲಿಯ ಸಂಸತ್ ಭವನದಲ್ಲಿ ನಡೆದ “ವಿಶ್ವ ಹೆಪಟೈಟಿಸ್ ದಿನ” ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಹಾಗೂ ನಿಪ್ಪಾಣಿ ಮತಕ್ಷೇತ್ರದ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆಯವರು ಭಾಗವಹಿಸಿದರು.
ವಿಶ್ವ ಹೆಪಟೈಟಿಸ್ ದಿನವನ್ನು ಪ್ರತಿ ವರ್ಷ ಜುಲೈ 28 ರಂದು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ.
ಹೆಪಟೈಟಿಸ್ ಎ, ಬಿ, ಸಿ, ಡಿ ಮತ್ತು ಇ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಕ್ಷಯರೋಗದ ನಂತರ ಹೆಪಟೈಟಿಸ್ ಜಗತ್ತನ್ನು ಬೆದರಿಸುವ ಎರಡನೇ ಮಾರಣಾಂತಿಕ ಸಾಂಕ್ರಾಮಿಕ ರೋಗವಾಗಿದೆ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಯಿತು.
- Advertisement -
ಕಾರ್ಯಕ್ರಮದಲ್ಲಿ ಲೋಕಸಭಾ ಸಭಾಪತಿಗಳಾದ ಓಂ ಬಿರ್ಲಾ, ರಾಜ್ಯಸಭೆಯ ಉಪಸಭಾಪತಿಗಳಾದ ಹರಿವಂಶ ನಾರಾಯಣ ಸಿಂಗ್, ಕೇಂದ್ರ ಆರೋಗ್ಯ ಸಚಿವರಾದ ಮನ್ಸುಖ್ ಮಾಂಡವಿಯಾ ಸೇರಿದಂತೆ ಸಂಸದರು, ಅಧಿಕಾರಿಗಳು ಉಪಸ್ಥಿತರಿದ್ದರು.