- Advertisement -
ಬೆಳಗಾವಿ: ಬೆಳಗಾವಿ ಆಂಜನೇಯ ನಗರ (ಕೆ.ಎಂ.ಎಫ್ ಡೇರಿ) ಹತ್ತಿರ ನೂತನ ಬಸ್ ಪ್ರಯಾಣಿಕರ ತಂಗುದಾಣ ನಿರ್ಮಾಣ ಕಾಮಗಾರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನದ 10 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಈ ಭಾಗದ ಜನತೆ ಹೊಸ ಬಸ್ ನಿಲ್ದಾಣ ನಿರ್ಮಾಣ ಮಾಡುವಂತೆ ಬೇಡಿಕೆ ಇಟ್ಟಿದ್ದರು. ಆಂಜನೇಯ ನಗರದ ನಿವಾಸಿಗಳಿಗೆ ಉತ್ತಮ ಸೇವೆ ನೀಡುವ ಉದ್ದೇಶದಿಂದ ಈ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಈ ಭಾಗದ ಜನ ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಅನಿಲ ಬೆನಕೆ, ನಗರ ಸೇವಕರಾದ ರಾಜಶೇಖರ ಡೋಣಿ, ವಕೀಲರಾದ ಗಿರೀಶ ಪಾಟೀಲ, ರೋಹಿತ ಹರಿಕಾಂತ, ರಾಜೇಂದ್ರ ಉಪಾಧ್ಯಾಯ, ಬಸು ಹನಸಿ, ತಂಗಡಗಿ ಸೇರಿದಂತೆ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.