ತಮ್ಮ ನಿಸ್ವಾರ್ಥ ಸೇವೆ ಸರಳ ಸ್ವಭಾವದಿಂದ ಎಲ್ಲರ ಮೆಚ್ಚುಗೆಗೆ ಬೆಳವಡಿಯವರು ಪಾತ್ರರಾಗಿದ್ದರು – ಅರ್ಜುನ ಕಂಬೋಗಿ

Must Read

ಕುಡಿಯುವ ನೀರು ವ್ಯತ್ಯಯ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದ ರುದ್ರೇಶ ಘಾಳೆ

ಬೆಳಗಾವಿ - ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಲು ನಡೆಸಿದ ಮುಷ್ಕರದಿಂದಾಗಿ ಬೆಳಗಾವಿ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ತೊಂದರೆ ಉಂಟಾಗಿದ್ದು ವಿಷಾದನೀಯವಾಗಿದೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಿ...

ಹೆಣ್ಣು ಮಕ್ಕಳು ಪೌಷ್ಠಿಕ ಆಹಾರ ಸೇವನೆ ಮಾಡಬೇಕು – ಡಾ.ನಯನಾ ಭಸ್ಮೇ

ಸವದತ್ತಿ - “ಹೆಣ್ಣು ಮಕ್ಕಳು ಮಾನಸಿಕವಾಗಿ ಹಾಗೂ ದೈಹಿಕವಾಗಿಯೂ ಸದೃಢವಾಗಿರಬೇಕು ಅವರು ಹದಿ ಹರೆಯದ ವಯಸ್ಸಿಗೆ ಬಂದಾಗ ಅವರಲ್ಲಿ ನೈಸರ್ಗಿಕವಾದ ಬದಲಾವಣೆಗಳು ಆಗುತ್ತವೆ ಅಂತಹ ಸಂದರ್ಭದಲ್ಲಿಯೂ...

ಪ್ರೊ.ಅಲಕಾ ಕುರಣೆ ಯವರಿಗೆ ‘ ಶಿಕ್ಷಕ ಶ್ರೀ ‘ ರಾಜ್ಯ ಮಟ್ಟದ ಪ್ರಶಸ್ತಿ

ಬೆಳಗಾವಿ: ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ, ಧಾರವಾಡ ಬೆಂಗಳೂರು ಘಟಕದಿಂದ ನೀಡಲಾಗುವ ರಾಜ್ಯ ಮಟ್ಟದ ಶಿಕ್ಷಕ ಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಳಗಾವಿಯ...

ಸವದತ್ತಿ: ಪ್ರತಿಯೊಬ್ಬರ ಬದುಕಿನಲ್ಲಿಯೂ ವಿದಾಯವಿರುತ್ತದೆ.,ನಮ್ಮ ಸೇವೆಯ ಅವಧಿಯಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗುವ ಮೂಲಕ ಬೆಳವಡಿಯವರು ಸರಳ ಸ್ವಭಾವದ ಮೂಲಕ ಇಲಾಖೆಯಲ್ಲಿ ಮುಖ್ಯೋಪಾಧ್ಯಾಯ ಹಾಗೂ ತಾಲೂಕಿನ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಸ್ಥಾನವನ್ನು ನಿಭಾಯಿಸಿದರು. ಅವರ ನಿಸ್ವಾರ್ಥ ಸೇವೆ ಮರೆಯಲಾಗದು.ದೇವರು ಅವರಿಗೆ ಆಯುರಾರೋಗ್ಯವನ್ನು ನೀಡಲಿ ಹಾಗೆಯೇ ನೂತನ ಅಧ್ಯಕ್ಷರಾದ ಎಚ್.ಆರ್.ಪೆಟ್ಲೂರ ನವಪೀಳಿಗೆಯ ತರುಣರು.ಶೈಕ್ಷಣಿಕವಾಗಿ ತಂತ್ರಜ್ಞಾನದಲ್ಲಿ ಪರಿಣತರು ಮತ್ತು ಚಟುವಟಿಕೆಗಳಲ್ಲೂ ಕೂಡ ಸಕ್ರಿಯವಾಗಿ ತೊಡಗಿಸಿಕೊಂಡವರು.ಮುಂದಿನ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡು ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ಚಟುವಟಿಕೆಗಳನ್ನು ಸಂಘದ ಕಾರ್ಯದ ಜೊತೆಗೆ ಸಂಘಟಿಸುವ ಮೂಲಕ ಗುಣಾತ್ಮಕ ಶಿಕ್ಷಣದತ್ತ ತೊಡಗುವಂತಾಗಲಿ ಎಂದು ಸವದತ್ತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅರ್ಜುನ ಕಂಬೋಗಿ ತಿಳಿಸಿದರು.

ಅವರು ಸುರೇಶ ಬೆಳವಡಿಯವರು ಸೇವೆಯಿಂದ ನಿವೃತ್ತಿಯಿಂದ ಹೊಂದಿದ ಪ್ರಯುಕ್ತ ಬೆಳವಡಿಯವರ ಬೀಳ್ಕೊಡುವ ಮತ್ತು ನೂತನವಾಗಿ ಅಧ್ಯಕ್ಷರಾದ ಎಚ್.ಆರ್.ಪೆಟ್ಲೂರ ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಮಾತನಾಡಿದರು.

- Advertisement -

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣಾಧಿಕಾರಿ ವೈ.ಎಂ.ಶಿಂಧೆ. ಕ್ಷೇತ್ರ ಸಮನ್ವಯಾಧಿಕಾರಿಗಳಾದ ಎಂ.ಬಿ.ಬಳಿಗಾರ.ಜಿಲ್ಲಾ ಶಿಕ್ಷಣ ವಿಷಯ ಪರಿವೀಕ್ಷಕರಾದ ಐ.ಡಿ.ಹಿರೇಮಠ. ಶಿಕ್ಷಣ ಸಂಯೋಜಕರಾದ ಮಂಜುನಾಥ ಹುದ್ದಾರ.ಕೆ.ಕೆ.ಡಂಗಿ.ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಎಫ್.ಜಿ.ನವಲಗುಂದ. ಬಿ.ಐ.ಇ.ಆರ್.ಟಿಗಳಾದ ಎಂ.ಎಂ.ಸಂಗಮ.ವೈ.ಬಿ.ಕಡಕೋಳ.ಸಿ.ವ್ಹಿ.ಬಾರ್ಕಿ. ಬಿ.ಆರ್.ಪಿಗಳಾದ ಡಾ.ಬಿ.ಐ.ಚಿನಗುಡಿ. ವೀರಯ್ಯ ಹಿರೇಮಠ .ಕಂಪ್ಯೂಟರ್ ಪ್ರೋಗ್ರಾಮರ್ ವಿನೋದ ಹೊಂಗಲ.ಡಾಟಾ ಎಂಟ್ರಿ ಆಪರೇಟರ್ ಮಲ್ಲಿಕಾರ್ಜುನ ಹೂಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬೆಳವಡಿ ದಂಪತಿಯನ್ನು.ಹಾಗೂ ಎಚ್.ಆರ್.ಪೆಟ್ಲೂರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಎಚ್.ಆರ್.ಪೆಟ್ಲೂರ ಶಿಕ್ಷಕರಿಗೆ ಇಲಾಖೆಯಲ್ಲಿ ದೊರೆಯಬೇಕಾದ ಸೌಲಭ್ಯಗಳನ್ನು ದೊರಕಿಸುವಲ್ಲಿ ಎಲ್ಲರ ಸಹಕಾರ ಮುಖ್ಯ. ಗುರುಸ್ಪಂಧನವನ್ನು ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಹಮ್ಮಿಕೊಳ್ಳುವ ಮೂಲಕ ಶಿಕ್ಷಕರ ಕುಂದು ಕೊರತೆಗಳನ್ನು ಬಗೆ ಹರಿಸುವ ಜೊತೆಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನವನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ಎಲ್ಲರೂ ಶ್ರಮಿಸೋಣ ಅದಕ್ಕೆ ಸಂಘಟನೆಯ ಪರವಾಗಿ ನಮ್ಮ ಸಹಕಾರ ಸಂಪೂರ್ಣವಿದೆಎಂದು ತಿಳಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಡಾ.ಬಿ.ಐ.ಚಿನಗುಡಿ ಸ್ವಾಗತಿಸಿದರು. ಎಫ್.ಜಿ.ನವಲಗುಂದ ನಿರೂಪಿಸಿದರು. ಸಿ.ವ್ಹಿ.ಬಾರ್ಕಿ ವಂದಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕುಡಿಯುವ ನೀರು ವ್ಯತ್ಯಯ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದ ರುದ್ರೇಶ ಘಾಳೆ

ಬೆಳಗಾವಿ - ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಲು ನಡೆಸಿದ ಮುಷ್ಕರದಿಂದಾಗಿ ಬೆಳಗಾವಿ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ತೊಂದರೆ ಉಂಟಾಗಿದ್ದು ವಿಷಾದನೀಯವಾಗಿದೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಿ...
- Advertisement -

More Articles Like This

- Advertisement -
close
error: Content is protected !!