spot_img
spot_img

ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳ ಬೆಳಗಾವಿ ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿ

Must Read

spot_img
- Advertisement -

ಮೂಡಲಗಿ: ಸತತ ಪ್ರಯತ್ನ ಶ್ರದ್ಧೆಯಿಂದ ಕ್ರೀಡೆಯಲ್ಲಿ ತೊಡಗಿದರೆ ಯಶಸ್ಸು ಖಂಡಿತ ಸಿಗುತ್ತದೆ. ಕ್ರೀಡೆಗಳಲ್ಲಿ ಭಾಗವಹಿಸುವದರಿಂದ ದೈಹಿಕ, ಮಾನಸಿಕವಾಗಿ ಸದೃಢಗೊಂಡು ಆತ್ಮ ವಿಶ್ವಾಸ ಹೆಚ್ಚಿಸಿಕೊಂಡು  ಉತ್ತಮ ಸಮಾಜ ನಿರ್ಮಾಣ ಮಾಡಲು ಇಂದಿನ ಯುವಕರು ಮುಂದಾಗಬೇಕು  ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ರಾಮ ಲೋಕನವರ ಹೇಳಿದರು.

ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಜಿ.ಪಂ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮೂಡಲಗಿ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರದಂದು ಬೆಳಗಾವಿ ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ  ಬಾಲಕರ ಹಾಗೂ ಬಾಲಕಿಯರ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. 

ಸಮಾರಂಭದಲ್ಲಿ ಮೂಡಲಗಿ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಎ.ಜುನೇದಿಪಟೇಲ್, ಮೂಡಲಗಿ ಪುರಸಭೆ ಸದಸ್ಯರಾದ ಹನಮಂತ ಗುಡ್ಲಮನಿ, ಆನಂದ ಟಪಾಲ, ಹನಮಂತ ಪೂಜೇರಿ, ಪಾಂಡು ಮಹೇಂದ್ರಕರ, ಸಿದ್ದಪ್ಪ ಮಗದುಮ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಅಧ್ಯಕ್ಷ ಎಲ್.ಎಮ್.ಬಡಕಲ್, ಕಾರ್ಯದರ್ಶಿ ಎ.ಪಿ.ಪರಸನ್ನವರ,  ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ರವಿ ಹೊಸಟ್ಟಿ, ದೈಹಿಕ ಶಿಕ್ಷಕರ ಸಂಘದ ತಾಲೂಕಾ ಅಧ್ಯಕ್ಷ ಎಸ್.ಬಿ.ಹಳಿಗೌಡ್ರ,  ಅನ್ವರ ನದಾಫ್, ಸಿದ್ದು ಗಡೇಕರ, ರಾಜು ಪುಜೇರಿ, ಬಸು ಝಂಡೇಕುರಬರ ಹಾಗೂ ವಿವಿಧ ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳು ಶಿಕ್ಷಕರು ಉಪಸ್ಥಿತರಿದ್ದರು.

- Advertisement -
- Advertisement -

Latest News

10ರಂದು ಅಬ್ಬಿಗೇರಿ ದಂಪತಿಯ 15 ಕೃತಿ ಲೋಕಾರ್ಪಣೆ

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘ ಬೆಳಗಾವಿ ಹಾಗೂ ಲೋಕವಿದ್ಯಾ ಪ್ರಕಾಶನ ಸಂಕೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಉಪನ್ಯಾಸಕಿ, ಲೇಖಕಿ ಜಯಶ್ರೀ ಮತ್ತು ಜಯಪ್ರಕಾಶ ಅಬ್ಬಿಗೇರಿ ದಂಪತಿಗಳ...
- Advertisement -

More Articles Like This

- Advertisement -
close
error: Content is protected !!
Join WhatsApp Group