ಸ್ಮಶಾನದಲ್ಲಿ ಅಭಿಮಾನಿಯೊಬ್ಬರ ಕಾರಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶುಕ್ರವಾರ ಸಂಜೆ ಪಟ್ಟಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ನೂರಾರು ಅಭಿಮಾನಿಗಳು ಮುಗಿಬಿದ್ದರು.
ಗೋಕಾಕನಿಂದ ಕೂಡಲಸಂಗಮಕ್ಕೆ ತೆರಳಿದ್ದ ಸತೀಶ ಅವರು, ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ಹೆಲಿಕ್ಯಾಪ್ಟರ್ ಮೂಲಕ ಯರಗಟ್ಟಿಗೆ ಆಗಮಿಸಿದರು. ಈ ಸಂದರ್ಭದಲ್ಲಿ ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಸತೀಶ ಅವರಿಗೆ ಜೈಕಾರ ಕೂಗಿ, ಅದ್ಧೂರಿಯಾಗಿ ಸ್ವಾಗತಿಸಿದರು.