ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆಯವರ ಗ್ರಾಮ ಪಂಚಾಯತ ಭೇಟಿ

Must Read

ಬೆಳಗಾವಿ -_ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ರವರು ಶನಿವಾರ ರಾಯಬಾಗ ತಾಲೂಕಿನ ಕೋಳಿಗುಡ್ಡ ಹಾಗೂ ಕಪ್ಪಲಗುದ್ದಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದರು.

ಕೋಳಿಗುಡ್ಡ ಗ್ರಾಮ ಪಂಚಾಯತಿಯ ನರೇಗಾ ಕಾಮಗಾರಿ ಸ್ಥಳಕ್ಕೂ ಭೇಟಿ ನೀಡಿ, ಕಾಮಗಾರಿ ಸ್ಥಳದಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಕೂಲಿ ಕಾರ್ಮಿಕರಿಗೆ ಕೆಲವು ಸಲಹೆ, ನಿರ್ದೇಶನಗಳನ್ನು ನೀಡಿದರು.

ನಂತರ ಕಪ್ಪಲಗುದ್ದಿ ಗ್ರಾಮ ಪಂಚಾಯಯ ಸುಲ್ತಾನಪೂರ ಗ್ರಾಮಕ್ಕೆ ಭೇಟಿ ನೀಡಿ, ಜಲ ಜೀವನ ಮಿಷನ್ ಯೋಜನೆಯ, ಬಹು ಗ್ರಾಮೀಣ ಕುಡಿಯುವ ನೀರು ಸರಬರಾಜು, ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಲು ಹಾಗೂ ಆರ್ ಓ ಪ್ಲಾಂಟ್ ಗಳನ್ನು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಈ ಅವಧಿಯಲ್ಲಿ ಎಲ್ಲಾ ಕೂಲಿಕಾರರಿಗೆ ಕೆಲಸ ಕೊಡಬೇಕು. ಕೆಲಸದ ಸ್ಥಳದಲ್ಲಿ ನೆರಳಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸೆ ಪೆಟ್ಟಿಗೆ ಕಡ್ಡಾಯವಾಗಿ ನಿರ್ವಹಿಸಬೇಕೆಂದು ಸೂಚಿಸಿದರು.

ಪ್ರತಿಯೊಬ್ಬ ವಿಶೇಷ ಚೇತನರಿಗೆ ವಿಶೇಷ ಜಾಬ್‌ ಕಾರ್ಡ್ ಗಳನ್ನು ಕಡ್ಡಾಯವಾಗಿ ನೀಡಬೇಕು ಹಾಗೂ ಅವರಿಗೆ ಕೆಲಸವನ್ನು ಕೊಡಬೇಕು ಎಂದು ನಿರ್ದೇಶನ ನೀಡಿದರು.
ಹೆಸ್ಕಾಂ ಬಿಲ್ ಮರು ಹೊಂದಾಣಿಕೆ ಸಂಬಂಧ ಗ್ರಾಪಂನಿಂದ ಬಂದ ಅರ್ಜಿಗಳನ್ನು ಪರಿಶೀಲನೆ ಮಾಡಿದರು.

ಬಳಿಕ ರಾಯಬಾಗ ಪಟ್ಟಣದ ಕೆ.ಇ.ಬಿ. ಸಭಾಭವನದಲ್ಲಿ ಎಲ್ಲ ತಾಲೂಕಾಮಟ್ಟದ ಅಧಿಕಾರಿಗಳುಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿವಿಧ ಸೂಚನೆ, ನಿರ್ದೇಶನಗಳನ್ನು ನೀಡಿದರು.

ಈ ಸಂದರ್ಭದಲ್ಲಿ ರಾಯಬಾಗ ಕಾರ್ಯನಿರ್ವಾಹಕ ಅಭಿಯಂತರರು ಪಾಂಡುರಂಗ ರಾವ್ ಚಿಕ್ಕೋಡಿ, ಸುಭಾಷ್ ಭಜಂತ್ರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರಾಯಬಾಗ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಕದ್ದು ರವರು, ರಾಯಬಾಗ ಎಇ, ಜೆಇ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ ರವರು, ಹೆಸ್ಕಾಂ ಲೆಕ್ಕಾಧಿಕಾರಿಗಳು, ತಾಪಂ ಸಹಾಯಕ ನಿರ್ದೇಶಕರು (ಪಂರಾ ಹಾಗೂ ಗ್ರಾಉ) ಹಾಗೂ ತಾಪಂ ಎಲ್ಲ ಸಿಬ್ಬಂದಿ ಹಾಜರಿದ್ದರು‌.

Latest News

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...

More Articles Like This

error: Content is protected !!
Join WhatsApp Group