ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ಕಾಯಿದೆ ೧೯೫೯ ಮತ್ತು ನಿಯಮಗಳು ೧೯೬೦ ಹಾಗೂ ಕರ್ನಾಟಕ ಸೌಹಾರ್ದ ಸಹಕಾರ ಕಾಯಿದೆ ೧೯೯೭ ಮತ್ತು ನಿಯಮಗಳು ೨೦೦೪ ಇವುಗಳಿಗೆ ಕಾನೂನಾತ್ಮಕ ತಿದ್ದುಪಡಿ ತರುವ ಸಂಬAಧ ರಚಿಸಿರುವ ಅಧ್ಯಯನ ಸಮಿತಿಯ ಮೊದಲನೇ ಸಭೆಯು ವಿಧಾನಸೌಧದಲ್ಲಿ ದಿನಾಂಕ: ೧೯ ರಂದು ನಡೆಯಿತು.
ಈ ಸಭೆಯಲ್ಲಿ ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ, ಶಾಸಕರಾದ ಲಕ್ಷ್ಮಣ ಸಂಗಪ್ಪ ಸವದಿ, ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡ, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಬೀಳಗಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಎಸ್.ಆರ್. ಪಾಟೀಲ್, ಶಾಸಕರಾದ ಅರೆಬೈಲ್ ಶಿವರಾಮ್ ಹೆಬ್ಬಾರ್, ಶಾಸಕರಾದ ಕೆ. ಷಡಕ್ಷರಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ರಾಜೇಂದ್ರ ರಾಜಣ್ಣ, ಸಹಕಾರ ಸಂಘಗಳ ನಿಬಂಧಕರಾದ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ, ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಎಂ.ಡಿ. ನರಸಿಂಹಮೂರ್ತಿ, ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕರಾದ ಜಿ.ಎಸ್. ರಮಣರೆಡ್ಡಿ, ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಎ.ಸಿ. ದಿವಾಕರ್, ಸಹಕಾರ ಅಪರ ನಿಬಂಧಕರು ಕೆ.ಎಂ. ಆಶಾ, ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್. ನವೀನ್, ಕಾರ್ಯದರ್ಶಿ ಲಕ್ಷ್ಮೀಪತಯ್ಯ ಮತ್ತಿತರರು ಉಪಸ್ಥಿತರಿದ್ದರು.