ಗೋಕಾಕ: ತಾಲೂಕಿನ ನಂದಗಾವ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಹೈಸ್ಕೂಲ್ ಶಾಲೆಯ ಶಿಕ್ಷಕಿ ಶ್ರೀಮತಿ ಲೀಲಾವತಿ ಕುರಂದವಾಡ ಅವರು ಗೋಕಾಕದ ಗುರುಸ್ಮೃತಿ ಬಳಗವು ಕೊಡಮಾಡುವ ಶ್ರೇಷ್ಠ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇತ್ತೀಚೆಗೆ ಗೋಕಾಕದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

