ಭಾದ್ರಪದ ಮಾಸಾಚರಣೆ

Must Read

ಲೇಖಕಿ ಜಯಶ್ರೀ ಅಬ್ಬಿಗೇರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯ ಗರಿ

ಬೆಳಗಾವಿ: ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ ಟ್ರಸ್ಟ ನೀಡುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಅಂಕಣಕಾರ್ತಿ ಜಯಶ್ರೀ...

ಮಲ್ಲಪ್ಪ ಕಂಕಣವಾಡಿ ಅವರಿಗೆ ಪಿಎಚ್‍ಡಿ

ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಮಲ್ಲಪ್ಪ ಕೆಂಚಪ್ಪ ಕಂಕಣವಾಡಿ ಅವರು ದೈಹಿಕ ಶಿಕ್ಷಣ ವಿಷಯದಲ್ಲಿ ಡಾ: ಹೆಚ್.ಎಸ್.ಜಂಗೆ ಅವರ...

ಪೋಸ್ಟ್ ಕಾರ್ಡಗಳಲ್ಲಿ ಪ್ರಧಾನಿಗೆ ಶುಭಾಶಯ

ಸಿಂದಗಿ: ಭಾರತೀಯ ಜನತಾ ಪಾರ್ಟಿ ಸಿಂದಗಿ ಮಂಡಲ ವತಿಯಿಂದ ನಗರದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ವಿಶ್ವ ನಾಯಕ ನಮ್ಮ ಭಾರತದ ಹೆಮ್ಮೆಯ ಪ್ರಧಾನಮಂತ್ರಿ ಮೋದೀಜಿ...

ಸಿಂದಗಿ: ಪಟ್ಟಣದ ಸಾರಂಗಮಠದ ಆವರಣದಲ್ಲಿ ಭಾದ್ರಪದ ಮಾಸದ ಮೊದಲನೆಯ ಮಂಗಳವಾರ ಎಲ್ಲರ ಕುಲದೈವ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವದ ನಿಮಿತ್ತ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಘಟಕದ ಮಹಿಳೆಯರಿಂದ ಶ್ರೀ ವೀರಭದ್ರಸ್ವಾಮಿಯ ಭಾವಚಿತ್ರಕ್ಕೆ ಪುಷ್ಪಗಳನ್ನರ್ಪಿಸುವ ಮೂಲಕ ಆಚರಿಸಿದರು.

ರಾಷ್ಟ್ರಾಧ್ಯಕ್ಷ ಪ್ರದೀಪ್ ಕಂಕಣವಾಡಿಯವರು ಹುಟ್ಟು ಹಾಕಿದ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಒಂದು ಭಾಗವಾದ ಈ ಮಹಿಳಾ ಘಟಕವು ಲಿಂ,ಶ್ರೀ ಚನ್ನವೀರ ಶಿವಾಚಾರ್ಯರ ಕೃಪಾರ್ಶೀವಾದಿಂದ ಹಾಗೂ ಮಾತೃಹೃದಯಿಗಳಾದ ಡಾ,ಪ್ರಭುಸಾರಂಗದೇವ ಶಿವಾಚಾರ್ಯರ ಅನುಗ್ರಹದಿಂದ ವೇದಾಧ್ಯಯನ ಕಲಿತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತ ಬಂದಿದೆ. ಮುಂಬರುವ ದಿನಗಳಲ್ಲಿ ಸಾಮಾಜಿಕ ಕ್ಷೇತ್ರದಲ್ಲೂ ಭಾಗವಹಿಸುವ ಆಶಯ ಹೊಂದಿದ್ದು ಆ ಕಾರ್ಯಗಳು ಯಶಸ್ವಿಯಾಗಲು ಆ ಸ್ವಾಮಿಯ ಅನುಗ್ರಹ ನಮ್ಮ ಮೇಲಿರಲಿ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮಹಿಳಾ ಘಟಕದ ಅಧ್ಯಕ್ಷೆ ಮಹಾದೇವಿ ಹಿರೇಮಠ ಹೇಳಿದರು.

ಇದೆ ಸಂದರ್ಭದಲ್ಲಿ ಅರವತ್ತು ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತ ಧಾರ್ಮಿಕ ಕಾರ್ಯಗಳಲ್ಲೂ ಸಕ್ರಿಯವಾಗಿ ಭಾಗವಹಿಸಿ ನಿವೃತ್ತಿ ಹೊಂದಿದ ಮಹಾದೇವಿ ಅಂಬಲಗಿ ಹಾಗೂ ಮಹಿಳೆಯರಿಗೆ ವೇದಾಧ್ಯಯನ ಮಾಡಿಸಲು ಗುರುಗಳಲ್ಲಿ ಅರಿಕೆ ಮಾಡಿ ಮಹಿಳೆಯರಿಗೆ ಪ್ರೇರಣೆಯಾದ ಗಂಗಮ್ಮ ಗಣಾಚಾರಿ, ಕಬ್ಬಿಣದ ಕಡಲೆಯಾಗಿದ್ದ ಶ್ರೀ ರುದ್ರ ಪಠಣ ಮಾಡುವುದನ್ನು ಸುಲಿದ ಬಾಳೆ ಹಣ್ಣಿನಂತೆ ಸರಾಗವಾಗಿ ಪಠಣ ಮಾಡಲು ಕಲಿಸಿದ ವೇದಮೂರ್ತಿ ಮಲ್ಲಯ್ಯ ಹಿರೇಮಠ ಹಾಗೂ ಹಿರಿಯ ನಾಗರಿಕರಾದ ಶರಣಯ್ಯ ಹಿರೇಮಠ ಅವರನ್ನು ಸನ್ಮಾನಿಸಲಾಯಿತು.

- Advertisement -

ಜಯಂತ್ಯುತ್ಸವಕ್ಕೆ ಸಂಘಟನೆಯ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು. ವೀರಶೈವ ಲಿಂಗಾಯತ ಸಂಘಟನೆಯ ಪುರೋಹಿತ ಘಟಕದ ಕಾರ್ಯದರ್ಶಿ ನಿಂಗಯ್ಯ ಹಿರೇಮಠ ಅವರು ಪ್ರಾರ್ಥಿಸಿದರು.


ವರದಿ: ಪಂಡಿತ್ ಯಂಪೂರೆ, ಸಿಂದಗಿ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಲೇಖಕಿ ಜಯಶ್ರೀ ಅಬ್ಬಿಗೇರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯ ಗರಿ

ಬೆಳಗಾವಿ: ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ ಟ್ರಸ್ಟ ನೀಡುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಅಂಕಣಕಾರ್ತಿ ಜಯಶ್ರೀ...
- Advertisement -

More Articles Like This

- Advertisement -
close
error: Content is protected !!