ಮೂಡಲಗಿ:-ಯೋಗವು ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆ ತರುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸುತ್ತದೆ ಎಂದು ಮೂಡಲಗಿ ತಹಶೀಲ್ದಾರ ಶ್ರೀಶೈಲ ಗುಡುಮೆ ಹೇಳಿದರು.
ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಆತಿಥ್ಯದಲ್ಲಿ ರಾಣಿಚನ್ನಮ್ಮ ವಿಶ್ವವಿದ್ಯಾಲಯ ಅಂತರ ಕಾಲೇಜುಗಳ ಏಕವಲಯ ಪುರುಷ ಹಾಗೂ ಮಹಿಳೆಯರ ಯೋಗಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಭಾರತ ದೇಶವು ಯೋಗವನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿದ್ದು,ಇದು ನಮ್ಮ ದೇಶದ ಹೆಮ್ಮೆ. ವಿದ್ಯಾರ್ಥಿಗಳು ದಿನನಿತ್ಯ ಯೋಗವನ್ನು ರೂಡಿಸಿಕೊಳ್ಳಬೇಕು ಎಂದು ಹೇಳಿದರು.
ಕಸಾಪ ತಾಲೂಕಾಧ್ಯಕ್ಷ ಡಾ.ಸಂಜಯ ಶಿಂಧಿಹಟ್ಟಿ ಯೋಗವು ಭಾರತದ ಪ್ರಾಚೀನ ಸಂಸ್ಕೃತಿ ಪರಂಪರೆಯ ಅವಿಭಾಜ್ಯ ಅಂಗವಾಗಿದೆ. ಪದ್ಧತಿ ದೈಹಿಕ ಮತ್ತು ಸದೃಢತೆಯೊಂದಿಗೆ ಆಧ್ಯಾತ್ಮಿಕ ಸಾಧನೆಗೆ ದಾರಿ ಮಾಡಿಕೊಡುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಸೋನವಾಲಕರ ಮಾತನಾಡಿದರು
ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ೩೦೦ಕ್ಕೂ ಹೆಚ್ಚು ಕಾಲೇಜುಗಳು ಇವೆ. ಯೋಗಗಳಂಥ ಸ್ಪರ್ಧೆಯಲ್ಲಿ ಭಾಗವಹಿಸುವ ಕಾಲೇಜುಗಳ ಸಂಖ್ಯೆ ಕಡಿಮೆ ಇರುವುದು. ಪ್ರತಿಯೊಂದು ಕಾಲೇಜುಗಳಲ್ಲಿ ಕಡ್ಡಾಯವಾಗಿ ಯೋಗ ತರಬೇತಿ ನಡೆಯಬೇಕೆಂದು ಹೇಳಿದರು.
ಸಂಸ್ಥೆಯ ನಿರ್ದೇಶಕರು ಎ.ವಿ.ಹೊಸಕೋಟೆ, ನಿವೃತ್ತ ಪ್ರಾಚಾರ್ಯ ಎಸ್.ಎಲ್.ಚಿತ್ರಗಾರ, ದೈಹಿಕ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ಎಮ್.ಕೆ.ಕಂಕಣವಾಡಿ,ಯೋಗ ಆಯ್ಕೆಯ ಸದಸ್ಯ ಪ್ರೇಮಕುಮಾರ ಮುದ್ದಿ, ಶ್ರೀಶೈಲ ಗೋಪಶೆಟ್ಟಿ, ಅಶೋಕ ವಣಚನ್ನವರ, ವೈ.ಎಸ್.ಭರಮನ್ನವರ, ಎಲ್.ಬಿ.ಮನ್ನಾಪೂರ, ಶಿವಾಜಿ ಮಾಲೋಜಿ ಮತ್ತು ಭೀಮಶಿ ಬಡಗಣ್ಣವರ ಭಾಗಿಯಾಗಿದ್ದರು.