ಮೂಡಲಗಿ: ಭಾರತದಾದ್ಯಂತ ಜನವರಿ 26 ರವರೆಗೆ ನಡೆಯುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಕಲ್ಲೋಳಿ ಪಟ್ಟಣದಲ್ಲಿ ಡಿ. 02 ರಂದು ಕೆವಿಜಿ ಬ್ಯಾಂಕ್ ಆವರಣದಲ್ಲಿ ಸಂಜೆ 05.00 ಗಂಟೆಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಚಾಲನೆ ನೀಡಲಿದ್ದಾರೆ.
ಜಿಲ್ಲೆಯ 500 ಗ್ರಾಮ ಪಂಚಾಯಿತಿಗಳನ್ನು ದಿನಕ್ಕೆ 8 ಗ್ರಾಮ ಪಂಚಾಯಿತಿಯಂತೆ ಯಾತ್ರೆ ತಲುಪಲಿದ್ದು, ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ ಆಯುಷ್ಮಾನ್ ಭಾರತ್, ಪಿಎಂ ಉಜ್ವಲ ಯೋಜನೆ, ಪಿಎಂ ಕಿಸಾನ್ ಸಮ್ಮಾನ್, ಜನಧನ್ ಯೋಜನಾ, ಸುರಕ್ಷಾ ಬಿಮಾ ಯೋಜನೆಗಳು ಸೇರಿದಂತೆ 17 ಯೋಜನೆಗಳ ಬಗ್ಗೆ ಎಲ್ ಇ ಡಿ ಪರದೆಯ ಮೂಲಕ ಮಾಹಿತಿ ನೀಡಲಾಗುತ್ತದೆ.
ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಯಾತ್ರೆಯ ಉದ್ದೇಶವಾಗಿದೆ. ಬ್ಯಾಂಕ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ಯಾಸ ವಿತರಕರು ಮಾಹಿತಿ ನೀಡಿ, ಸ್ಥಳದಲ್ಲೇ ಆಯ್ದ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ನೀಡಲಿದ್ದಾರೆ. ಮಧ್ಯಾಹ್ನ 01.00 ಗಂಟೆಗೆ ಕಲ್ಲೋಳಿ ಸಂಗನಕೇರಿ ರಸ್ತೆ ಪಕ್ಕದ ಸಂಸುದ್ದಿ ತೋಟದಲ್ಲಿ ಡ್ರೋನ್ ಮೂಲಕ ಔಷಧಿ ಸಿಂಪರಣೆ ಪ್ರಾತ್ಯಕ್ಷಿಕೆ ನಡೆಯಲಿದೆ ಎಂದು ಜಿಲ್ಲಾ ಅಗ್ರನೀಯ ಬ್ಯಾಂಕ್ ವ್ಯವಸ್ಥಾಪಕ ಪ್ರಶಾಂತ ಕುಲಕರ್ಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.