spot_img
spot_img

ಭೀಮನ ಅಮಾವಾಸ್ಯೆ 8 ಆಗಸ್ಟ್ 2021: ಮಹತ್ವ, ಮುಹೂರ್ತ, ಆಚರಣೆ.

Must Read

spot_img
- Advertisement -

ಭಾರತೀಯ ಸಂಪ್ರದಾಯದಲ್ಲಿ ಹಿಂದೂಗಳು ಸಾಮಾನ್ಯವಾಗಿ ಆಷಾಢ ಮಾಸದಲ್ಲಿ ಯಾವುದೇ ಶುಭಕಾರ್ಯವನ್ನೂ ಮಾಡುವುದಿಲ್ಲ, ಆದರೆ ಆಷಾಢದ ಅಮಾವಾಸ್ಯೆಗೆ ಮಾತ್ರ ಅದರದ್ದೇ ಆದ ಮಹತ್ವವಿದೆ.

ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ನವದಂಪತಿಗಳು ಸಡಗರದಿಂದ ಆಚರಿಸುತ್ತಾರೆ. ಈ ವ್ರತಕ್ಕೆ ಪತಿ ಸಂಜೀವಿನಿ ವ್ರತ ಎಂದೂ ಕರೆಯುತ್ತಾರೆ. ಪತಿಗೆ ದೀರ್ಘಾಯುಷ್ಯವನ್ನು ಕರುಣಿಸುವಂತೆ, ತಮ್ಮನ್ನು ದೀರ್ಘ ಸುಮಂಗಲಿಯಾಗಿ ಹರಸುವಂತೆ ಕೋರಿ ಶಿವನನ್ನು ಪೂಜಿಸುವ ಹಬ್ಬವೇ ಭೀಮನ ಅಮಾವಾಸ್ಯೆ.

ಹಿನ್ನೆಲೆ ಏನು?

ವ್ರತಾಚರಣೆ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಭಿನ್ನತೆಯಿಂದ ಕೂಡಿದೆ ಅಂತಾನೆ ಹೇಳಬಹುದು . ಉದ್ದೇಶ ಒಂದೇ ಆದರೂ ಕೂಡ , ಆಚರಣೆಯಲ್ಲಿ ವಿವಿಧತೆಯನ್ನು ಕಾಣಬಹುದುದಾಗಿದೆ . ದಕ್ಷಿಣ ಕನ್ನಡದಲ್ಲಿ ಇದನ್ನು ಆಟಿ ಅಮಾವಾಸ್ಯ ಎಂದು ಕರೆದರೆ ಉತ್ತರ ಕನ್ನಡದ ಕಡೆ ಇದನ್ನೇ ಕೊಡೆ ಅಮಾವಾಸ್ಯೆ ಎಂದು ಕರೆಯುತ್ತಾರೆ.

- Advertisement -

ಅಳಿಯನ ಅಮಾವಾಸ್ಯೆ ಎನ್ನುತ್ತಾರೆ. ಕಾರವಾರದಲ್ಲಿ ಮಾತ್ರ ಅದಕ್ಕೆ ಗಟಾರದ ಅಮಾವಾಸ್ಯೆ ಎಂದು ಕರೆಯುತ್ತಾರೆ. ಅದು ಮಾಂಸ, ಮದಿರೋಪಾಸಕರ ಮಹೋತ್ಸವ. ಹೀಗೆ ಸ್ಥಳದಿಂದ ಸ್ಥಳಕ್ಕೆ ಭಿನ್ನ ಭಿನ್ನ ಹೆಸರನ್ನು ಪಡೆದುಕೊಂಡಿದೆ ಈ ಭೀಮನ ಅಮವಾಸೆ.

ಹೆಂಗಳೆಯರು ಕೈ ಕಂಕಣ ಕಟ್ಟಿಕೊಂಡು ಜ್ಯೋರ್ತಿರ್ಭೀಮೇಶ್ವರನ್ನು ಧ್ಯಾನಿಸಿ, ವ್ರತ ಕೈಗೊಳ್ಳುತ್ತಾರೆ. ರಾಹುಕಾಲ ಹೊರತುಪಡೆಸಿ ಬೆಳಗ್ಗೆ ಅಥವಾ ಸಂಜೆ ಯಾವುದೇ ಶುಭ ಮಹೂರ್ತದಲ್ಲಿ ವ್ರತ ಕೈಗೊಳ್ಳಬಹುದು.

ಅವಿವಾಹಿತ ಹೆಣ್ಣು ಮಕ್ಕಳು, ವಿವಾಹಿತ ನವ ವಧು ಆಚರಿಸಬಹುದು. ಒಮ್ಮೆ ವ್ರತ ಕೈಗೊಂಡರೆ ಐದು, ಒಂಭತ್ತು ಅಥವಾ ಹದಿನಾರು ವರ್ಷ ಸಂಪೂರ್ಣಗೊಳಿಸಿ ಉದ್ಯಾಪನೆ ಮಾಡಿ ಎಲ್ಲರಿಗೂ ಸಿಹಿಯೂಟ ಹಾಕಿಸಬೇಕು ಎಂದು ಹಿಂದೂ ಪುರಾಣಗಳು ಹೇಳುತ್ತವೆ. ಆಷಾಢದಲ್ಲಿ ಗಂಡನ ಸಂಗ ತೊರೆದು ತವರಿನ ಗೂಡು ಸೇರಿಕೊಂಡ ಹೆಂಗಳೆಯರು ಗಂಡನ ಪಾದಕ್ಕೆರಗಿ ಮತ್ತೆ ಜೀವನದ ಬಂಡಿ ಹೂಡುವುದು ವಾಡಿಕೆ.

ಪೂಜಾ ವಿಧಾನ ಹೇಗಿರಲಿದೆ?: 

- Advertisement -

ಗೃಹಿಣಿಯರು ಕೈಗೆ ಕಂಕಣ ಕಟ್ಟಿಕೊಂಡು ಜ್ಯೋರ್ತಿಭೀಮೇಶ್ವರನ್ನು ಧ್ಯಾನಿಸಿ, ವ್ರತ ಕೈಗೊಳ್ಳಬೇಕು. ರಾಹುಕಾಲ ಹೊರತುಪಡಿಸಿ ಬೆಳಗ್ಗೆ ಅಥವಾ ಸಂಜೆ ಯಾವುದೇ ಶುಭ ಮುಹೂರ್ತದಲ್ಲಿ ವ್ರತ ಕೈಗೊಳ್ಳಬಹುದು. ಒಂದು ತಟ್ಟೆಯಲ್ಲಿ ಅಕ್ಕಿ ಹಾಕಿ, ಅದರ ಮೇಲೆ ಎರಡು ದೀಪದ ಕಂಬ ನೆಟ್ಟು, ದೀಪದ ಎಣ್ಣೆ ಹಾಕಿ ಹಚ್ಚಬೇಕು. ಈ ದೀಪಸ್ತಂಭದಲ್ಲಿ ಶಿವ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಸಲ್ಲಿಸುತ್ತಾರೆ. ಪೂಜಾ ಸಾಮಗ್ರಿಗಳ ಜತೆಗೆ 9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಿ ಆ ಬಳಿಕ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ಮಾಡಿ ನಂತರ ಭೀಮೇಶ್ವರನ ಪೂಜೆ ಮಾಡುತ್ತಾರೆ. ನೈವೇದ್ಯಕ್ಕೆ 9 ಕರಿಗಡುಬು ಅರ್ಪಿಸಲಾಗುತ್ತದೆ. ಆ ಬಳಿಕ ಗಂಡನ ಪಾದಪೂಜೆಯನ್ನು ನೆರವೇರಿಸಬೇಕು.

ವಿವಿಧ ರೀತಿ ಆಚರಣೆ: 

ವ್ರತಾಚರಣೆ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಭಿನ್ನತೆಯಿಂದ ಕೂಡಿದೆ. ಉದ್ದೇಶ ಒಂದೇ ಆದರೂ, ಆಚರಣೆಯಲ್ಲಿ ವಿವಿಧತೆಯನ್ನು ಕಾಣಬಹುದು. ದಕ್ಷಿಣ ಕನ್ನಡದಲ್ಲಿ ಇದನ್ನು ಆಟಿ ಅಮಾವಾಸ್ಯೆ ಎಂದು ಕರೆಯುತ್ತಾರೆ. ಈ ದಿನದಂದು ಆ ಭಾಗದ ಸಂಸ್ಕೃತಿ, ಆಚಾರ, ವಿಚಾರಗಳನ್ನು ಬಿಂಬಿಸುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಇದಕ್ಕೆ ಕೊಡೆ ಅಮಾವಾಸ್ಯೆ ಎಂದು ಕರೆಯುತ್ತಾರೆ. ಈ ದಿನದಂದು ಮಗಳೊಂದಿಗೆ ಮನೆಗೆ ಬಂದು ಅಳಿಯನಿಗೆ ಮಾವ ಕೊಡೆ ನೀಡಿ ಸತ್ಕರಿಸುತ್ತಾರೆ.

ಪೌರಾಣಿಕ ಹಿನ್ನೆಲೆ:

ಪುರಾಣಗಳ ಪ್ರಕಾರ ಶಿವನು ಪಾರ್ವತಿಯನ್ನು ಪತ್ನಿಯನ್ನಾಗಿ ಸ್ವೀಕರಿಸಿದ್ದು ಭೀಮನ ಅಮಾವಾಸ್ಯೆ ದಿನ. ಪಾರ್ವತಿ ಸಮೃದ್ಧಿ, ಸಂತಾನ, ಪತಿವ್ರತೆ, ಶಕ್ತಿಯ ಸಂಕೇತ. ಹೀಗಾಗಿ ಈ ದಿನದಂದು ಹೆಂಗಳೆಯರು ವ್ರತ ಕೈಗೊಂಡು ಶಿವ ಮತ್ತು ಪಾರ್ವತಿಯನ್ನು ಆರಾಧಿಸಿದರೆ ಅವರಿಗೆ ಉತ್ತಮನಾದ ಗಂಡ ಸಿಗುತ್ತಾನೆ. ಅದೇ ರೀತಿ ವಿವಾಹಿತ ಹೆಂಗಸರು ಗಂಡನಿಗೆ ದೀರ್ಘಾಯುಷ, ಯಶಸ್ಸು ಹಾಗೂ ಸಂತೋಷವನ್ನು ಬಯಸಿ ಪೂಜೆ ಸಲ್ಲಿಸುತ್ತಾರೆ.

ಭೀಮನ ಅಮಾವಾಸ್ಯೆ ಮುಹೂರ್ತ: ಆಗಸ್ಟ್‌ 8, ಭಾನುವಾರ

ವರ್ಜ್ಯಂ ಮುಹೂರ್ತ: ಮಧ್ಯರಾತ್ರಿ

ರಾಹುಕಾಲ: ಸಂಜೆ 5:27 ರಿಂದ ಸಂಜೆ 7:07 ರವರೆಗೆ

ಅಭಿಜಿತ್‌ ಮುಹೂರ್ತ: ಮಧ್ಯಾಹ್ನ 12 ರಿಂದ 12:35 ರವರೆಗೆ

ದುರ್ಮುಹೂರ್ತ ಆರಂಭ: ಸಂಜೆ 5:20 ರಿಂದ ಸಂಜೆ 6: 13 ರವರೆಗೆ

ಪೂಜೆಗೆ ಶುಭ ಸಮಯ: ಬೆಳಗ್ಗೆ 8 ರಿಂದ ಮಧ್ಯಾಹ್ನ 12:53 ರವರೆಗೆ.

ಅಮಾವಾಸ್ಯೆ ಲಕ್ಷ್ಮಿ ಪೂಜೆ ಸಮಯ: ಸಂಜೆ 7:30 ರಿಂದ ರಾತ್ರಿ 9:00


ಹೇಮಂತ ಚಿನ್ನು

- Advertisement -
- Advertisement -

Latest News

ವಿಶ್ವ ಶಾಂತಿಗೆ ಕುವೆಂಪು ಚಿಂತನೆಗಳೇ ದಾರಿದೀಪ : ಡಾ. ಭೇರ್ಯ ರಾಮಕುಮಾರ್

ಇಂದು ವಿಶ್ವವನ್ನು ಕಾಡುತ್ತಿರುವ ಹಿಂಸೆ, ಭಯೋತ್ಪಾದನೆ, ಯುದ್ಧಗಳ ನಿವಾರಣೆಗೆ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ತತ್ವವೊಂದೇ ಪರಿಹಾರ ಎಂದು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ...
- Advertisement -

More Articles Like This

- Advertisement -
close
error: Content is protected !!
Join WhatsApp Group