spot_img
spot_img

ದೇವರಿಗೇ ಚಳ್ಳೆಹಣ್ಣು ತಿನ್ನಿಸಿದ ಭೀಮಪ್ಪ ಗಡಾದ

Must Read

- Advertisement -

ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಯಾರಿಗೇ ಟಿಕೆಟ್ ಸಿಕ್ಕರೂ ಎಲ್ಲರೂ ಒಂದಾಗಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದ ಭೀಮಪ್ಪ ಗಡಾದ ದೇವರಿಗೇ ಚಳ್ಳೆಹಣ್ಣು ತಿನ್ನಿಸಿದ್ದಾರೆ.

ಈ ಮೊದಲು ಅವರು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿ ಈಗ ಪಕ್ಷೇತರವಾಗಿ ಸ್ಪರ್ಧಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಅರವಿಂದ ದಳವಾಯಿಯವರಿಗೂ ದ್ರೋಹ ಮಾಡಿರುವ ಗಡಾದ ಅವರ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

- Advertisement -

ಈ ಮೊದಲು ಜೆಡಿಎಸ್ ಪಕ್ಷದಲ್ಲಿ ಇದ್ದ ಗಡಾದ ಅವರು ಅದಕ್ಕೂ ಕೈ ಕೊಟ್ಟು ಕಾಂಗ್ರೆಸ್ ಸೇರಿ ಈಗ ಟಿಕೆಟ್ ಸಿಗದ್ದಕ್ಕೆ ಪಕ್ಷೇತರವಾಗಿ ಸ್ಪರ್ಧಿಸುವ ಮೂಲಕ ಪಕ್ಷಾಂತರ ಎಂಬ ಶಬ್ದದ ಮರ್ಯಾದೆಯನ್ನೇ ತೆಗೆದಿದ್ದಾರೆ ಎಂದು ಮತದಾರರು ಹಾಸ್ಯ ಮಾಡುತ್ತಿದ್ದಾರೆ.

ಚುನಾವಣೆಯ ಪೂರ್ವದಲ್ಲಿಯೇ ಈ ರೀತಿ ಮಾತು ತಪ್ಪಿರುವ ಗಡಾದ ನಾಳೆ ಶಾಸಕರಾದರೆ ನಮಗೇನು ಬೆಲೆ ಸಿಗುತ್ತದೆ ಎಂದು ಅರಭಾವಿಯ ಜನತೆ ಮಾತನಾಡಿಕೊಳ್ಳುತ್ತಿದ್ದಾರೆ.


ವರದಿ: ಉಮೇಶ ಬೆಳಕೂಡ, ಮೂಡಲಗಿ

- Advertisement -
- Advertisement -

Latest News

ಜಲ ಜೀವನ ಮಿಷನ್ ಅಡಿಯಲ್ಲಿ ಕಲ್ಯಾಣಿ ಪುನಶ್ಚೇತನ

ಮೂಡಲಗಿ: ಜಿಲ್ಲಾ ಪಂಚಾಯತ್ ಬೆಳಗಾವಿ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ, ತಾಲೂಕು ಪಂಚಾಯತ್ ಮೂಡಲಗಿ, ಗ್ರಾಮ ಪಂಚಾಯತ್ ಯಾದವಾಡ ಹಾಗೂ ಅನುಷ್ಠಾನ ಬೆಂಬಲ...
- Advertisement -

More Articles Like This

- Advertisement -
close
error: Content is protected !!
Join WhatsApp Group