spot_img
spot_img

ಬೀದರ್: ಭಾರಿ ಮಳೆ ಸಮೀಕ್ಷೆ ನಡೆಸಿದ ಜಿಲ್ಲಾಧಿಕಾರಿ ನೇತ್ರತ್ವದ ತಂಡ

Must Read

spot_img
- Advertisement -

ಬೀದರ – ಬೀದರ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಸಮೀಕ್ಷೆಯನ್ನು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮತ್ತವರ ತಂಡ ಇಂದು ನಡೆಸಿತು.

ಜಿಲ್ಲೆಯ ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದ ಶಾಲಿವನ್ ತಂದೆ ಹನಂಶೆಟ್ಟಿ ಅವರ ಮನೆ ಹಾನಿಯಾದ ಸ್ಥಳ ಪರಿಶೀಲನೆ ನಡೆಸಿ 10000 ರೂ. ಪರಿಹಾರ ಚೆಕ್ ವಿತರಿಸಿದರು. ನಂತರ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದಲ್ಲಿ ಮಳೆಯಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿ ಲಕ್ಷಿಬಾಯಿ ಮತ್ತು ಕಾಂತಾಬಾಯಿ ಇವರಿಗೆ ಪರಿಹಾರ ಚೆಕ್ಕನ್ನು ಜಿಲ್ಲಾ ಪಂಚಾಯತ್ ಸಿಇಓ ಶಿಲ್ಪಾ ಎಂ ವಿತರಿಸಿದರು.

- Advertisement -

ಜಿಲ್ಲೆಯಲ್ಲಿ ಬಸವನಹುಳುಗಳು ಬೆಳೆಗೆ ಹಾನಿಯುನ್ನುಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಂಜ್ರಾ ನದಿ ಸಮೀಪದ ಹೊಲಗಳಿಗೆ ಭೇಟಿ ನೀಡಿ ಬೆಳೆಗಳಿಗೆ ಆಗಿರುವ ಹಾನಿಯ ಕುರಿತು ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಓ ಶಿಲ್ಪಾ ಎಂ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ ಬಾಬು, ಕಮಲನಗರ ತಹಸೀಲ್ದಾರ ರಮೇಶ ಪದ್ದೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ವಿಶ್ವ ಶಾಂತಿಗೆ ಕುವೆಂಪು ಚಿಂತನೆಗಳೇ ದಾರಿದೀಪ : ಡಾ. ಭೇರ್ಯ ರಾಮಕುಮಾರ್

ಇಂದು ವಿಶ್ವವನ್ನು ಕಾಡುತ್ತಿರುವ ಹಿಂಸೆ, ಭಯೋತ್ಪಾದನೆ, ಯುದ್ಧಗಳ ನಿವಾರಣೆಗೆ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ತತ್ವವೊಂದೇ ಪರಿಹಾರ ಎಂದು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ...
- Advertisement -

More Articles Like This

- Advertisement -
close
error: Content is protected !!
Join WhatsApp Group