ಬೀದರ: ಅಪಘಾತದಲ್ಲಿ ಮೃತರಿಗೆ ಪರಿಹಾರ ಘೋಷಣೆ

Must Read

ಬೀದರ – ಇತ್ತೀಚೆಗೆ ಟ್ರಕ್ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ ದುರ್ಮರಣ ಹೊಂದಿದ ೭ ಜನ ಮಹಿಳಾ ಕಾರ್ಮಿಕರ ಕುಟುಂಬದವರಿಗೆ ತಲಾ ೫ ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

ಬೀದರ್ ಬ್ರೀಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಬಿ ಪಾಟೀಲ್ ಮುನೇನಕೊಪ್ಪ ಭೇಟಿ ನೀಡಿ ಆಸ್ಪತ್ರೆಯಲ್ಲಿ ದಾಖಲಾದ ಗಾಯಾಳುಗಳಿಗೆ ಸಾಂತ್ವನ ಹೇಳಿದ ಉಸ್ತುವಾರಿ ಸಚಿವರು ಮೃತರಿಗೆ ತಲಾ ೫ ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು.

ಅಪಘಾತ ಸಂಭವಿಸಿದ್ದು ತುಂಬಾ ಖೇದಕರ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸುತ್ತದೆ. ಸಿಎಂ ಜೊತೆ ಮಾತನಾಡಿ ಗಾಯಾಳುಗಳಿಗೂ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇವೆ ಎಂದು ಮುನೇನಕೊಪ್ಪ ಹೇಳಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group