ಬೀದರ – ಬಸವಣ್ಣನವರ ಕರ್ಮ ಭೂಮಿ ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಪೊಲೀಸ್ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ಲಕ್ಷಾಂತರ ರೂ. ಮೌಲ್ಯದ ಗೋಮಾಂಸ ಸಾಗಿಸುತ್ತಿದ್ದ ಟ್ರಕ್ ಜಪ್ತಿ ಮಾಡಿದ್ದಾರೆ.
ಲಕ್ಷಾಂತರ ಬೆಲೆ ಬಾಳುವ 5 ಟನ್ ಗಿಂತಲೂ ಅಧಿಕ ಗೋಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಟ್ರಕ್ ಗಳನ್ನು ಸ್ಥಳೀಯ ಪೊಲೀಸರು ಜಪ್ತಿ ಮಾಡಿಕೊಂಡು ಘಟನೆ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಾಗಣೆ ಬಗ್ಗೆ ಖಚಿತ ಮಾಹಿತಿ ಪಡೆದು ಸ್ಥಳಕ್ಕೆ ತೆರಳಿದ ಕೆಲ ಹಿಂದೂಪರ ಸಂಘಟನೆಗಳ ಪದಾಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿಗಳು ಟ್ರಕ್ ಜಪ್ತಿ ಮಾಡಿಕೊಂಡು ಚಾಲಕರನ್ನು ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಡಾ.ಪ್ರಥ್ವಿರಾಜ ಭೇಟಿ ನೀಡಿ, ಮಾಂಸ ಪರಿಶೀಲಿಸಿ, ಪರೀಕ್ಷೆಗಾಗಿ ಹೈದ್ರಾಬಾದ್ ಗೆ ಕಳಿಸಿದ್ದಾರೆ.
ಡಿವೈಎಸ್ಪಿ ಸೋಮಲಿಂಗ ಕುಂಬಾರ, ಸಿಪಿಐ ಮಲ್ಲಿಕಾರ್ಜುನ ಯಾತನೂರ ಇತರೆ ಅಧಿಕಾರಿಗಳು ಸ್ಥಳದಲ್ಲಿದ್ದರು.
ಮೇಲ್ನೋಟಕ್ಕೆ ಗೋಮಾಂಸವೇ ಇರುವಂತೆ ಕಾಣುತಿದ್ದು, ಪರೀಕ್ಷೆ ನಂತರ ಸತ್ಯಾಂಶ ಬಹಿರಂಗಗೊಳ್ಳಲಿದೆ ಎಂದು ಡಾ. ಪೃಥ್ವಿರಾಜ ಪ್ರತಿಕ್ರಿಯೆ ನೀಡಿದ್ದಾರೆ.
ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ