ಬೀದರ – ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ
ಬಿ.ವ್ಹಿ.ಭೂಮರಡ್ಡಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು ಮತ ಎಣಿಕೆ ಶಾಂತಿಯುತ ಹಾಗೂ ಸುವ್ಯವಸ್ಥೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ
ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ 10 ಮತ ಎಣಿಕೆ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ 20 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಪ್ರತಿ ಮತ ಎಣಿಕಾ ಕೇಂದ್ರಗಳಲ್ಲಿ 14 ಟೇಬಲ್ ಗಳ ವ್ಯವಸ್ಥೆ ಮಾಡಲಾಗಿದೆ.
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 3628 ಅಂಚೆ ಮತ ಪತ್ರಗಳು ಸ್ವೀಕೃತವಾಗಿವೆ. 7 ಟೇಬಲ್ ಗಳಲ್ಲಿ ಅಂಚೆ ಮತ ಪತ್ರಗಳ ಮತ, ಇಟಿಪಿಬಿಎಸ್ ಎಣಿಕೆ ಕಾರ್ಯ ನಡೆಯಲಿದೆ.
ಜಿಲ್ಲಾ ಚುನಾವಣಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಅಭ್ಯರ್ಥಿಗಳು, ಏಜೆಂಟರು ಗಳ ಸಮ್ಮುಖದಲ್ಲಿ ಬೆಳಿಗ್ಗೆ 7.20ಕ್ಕೆ ಭದ್ರತಾ ಕೋಣೆ ಓಪನ್ ಮಾಡಿ ಬೆಳಿಗ್ಗೆ 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಮತ ಎಣಿಕೆ ಆರಂಭ, ಬಳಿಕ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ಕಾರ್ಯ ಕೈಗೊಳ್ಳಲಾಗುವುದು
ಮತ ಎಣಿಕೆ ಹಿನ್ನಲೆ ಬಿವ್ಹಿಬಿ ಕಾಲೇಜಿನ ಎದುರುಗಡೆ ರಸ್ತೆಯಲ್ಲಿ ಝೀರೋ ಸಂಚಾರ. ಬೆ.6ರಿಂದ ಜೂನ್ 5ರ ಬೆ.6 ಗಂಟೆವರೆಗೆ ನಿಷೇಧಾಜ್ಞೆ ಜಾರಿ. ಬಂದೋಬಸ್ತ್ ಗಾಗಿ 700 ಸಿವಿಲ್ ಪೊಲೀಸ್ ಸಿಬ್ಬಂದಿ, 4 ಕೆಎಸ್ ಆರ್ ಪಿ ತುಕಡಿ, 5 ಡಿಆರ್ ಹಾಗೂ ಶ್ವಾನದಳ ತಂಡ ನಿಯೋಜನೆ ಹಾಗೂ ಮತ ಎಣಿಕೆ ಕಾರ್ಯಕ್ಕೆ 400 ಅಧಿಕಾರಿ, ಸಿಬ್ಬಂದಿಗಳ ನೇಮಕ ಮಾಡಲಾಗಿದೆಯೆಂಬುದಾಗಿ ಅಧಿಕೃತ ಮಾಹಿತಿ ತಿಳಿಸಿದೆ.
ವರದಿ : ನಂದಕುಮಾರ ಕರಂಜೆ, ಬೀದರ