- Advertisement -
ಬೀದರ – ಗುಡ್ಡ ಕುಸಿತ ಹಿನ್ನೆಲೆಯಲ್ಲಿ ಸಂಪರ್ಕ ಕಡಿತಗೊಂಡು ಕೇದಾರನಾಥ ಹಾಗೂ ಬದರಿನಾಥ ದೇವಸ್ಥಾನಕ್ಕೆ ಹೋಗಿದ್ದ 15 ಜನ ಕನ್ನಡಿಗರು ಸಿಕ್ಕಿ ಹಾಕಿಕೊಂಡು ಸಂಕಷ್ಟ ಅನುಭವಿಸಿದ್ದಾರೆ.
ಬೀದರ್ ಜಿಲ್ಲೆಯ ಐವರು ಕಲಬುರ್ಗಿ ಜಿಲ್ಲೆಯ 10 ಜನ ಯಾತ್ರಿಗಳು ಸೇರಿದಂತೆ 15 ಜನ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು ಬದರಿನಾಥ ದೇವಸ್ಥಾನಕ್ಕೆ ಹೋಗಿ ವಾಪಸ್ ಹರಿದ್ವಾರ ಕ್ಕೆ ಬರುವ ಮಾರ್ಗದಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ.
- Advertisement -
ಬದರಿನಾಥ ದೇವಸ್ಥಾನಕ್ಕೆ ಸದ್ಯ ಯಾರು ಬರಬೇಡಿ ಇಲ್ಲಿ ಭಾರಿ ಮಳೆಯಾಗುತ್ತಿದೆ ಜೊತೆಗೆ ಗುಡ್ಡಗಾಡು ಪ್ರದೇಶದಲ್ಲಿ ದೊಡ್ಡ ದೊಡ್ಡ ಗುಡ್ಡಗಳು ಕುಸಿಯುತ್ತಿವೆ ಹೀಗಾಗಿ ರಸ್ತೆ ಸಂಪರ್ಕ ಕಡಿತಗೊಳುತ್ತಿವೆ ಎಂದು ಬೀದರ್ ಮೂಲದ ಮಹೇಶ ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ ಅಲ್ಲದೆ ಗುಡ್ಡ ಕುಸಿತದ ವಿಡಿಯೋಗಳನ್ನೂ ಅವರು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾರೆ.
ವರದಿ: ನಂದಕುಮಾರ ಕರಂಜೆ, ಬೀದರ