- Advertisement -
ಬೀದರ – ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಖದೀಮನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬೀದರ್ ನ ಓಲ್ಡ್ ಸಿಟಿಯಲ್ಲಿ ಅಕ್ರಮವಾಗಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರ ದಾಳಿ ಮಾಡಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶೇಖ್ ಅಬ್ದುಲ್ಲಾ ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ.
ಈತ ಕೊರೋನಾ ಪೀಡಿತರಿಗೆ 20 ರಿಂದ 25 ಸಾವಿರಕ್ಕೆ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.
- Advertisement -
ಬೀದರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ವರದಿ : ನಂದಕುಮಾರ ಕರಂಜೆ, ಬೀದರ